ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗಾಗಿ ಸಾಧಕ ಮಹಿಳೆಯರಿಂದ ಅರ್ಜಿ ಆಹ್ವಾನ

ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿರುವ ಸಂಸ್ಥೆಗಳಿಗೆ ಹಾಗೂ ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರಿಗೆ ಮತ್ತು ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೈರ್ಯದಿಂದ ಹೋರಾಡಿ ಜೀವಾಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 9 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ […]
ಜ. 3 ರಂದು ಜಿಲ್ಲೆಯ ವಿವಿಧೆಡೆ ವಿದ್ಯುತ್ ವ್ಯತ್ಯಯ

ಉಡುಪಿ, ಡಿಸೆಂಬರ್ 31 (ಕವಾ): ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಜನವರಿ 3 ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 220/110/11ಕೆವಿ ಕೇಮಾರ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಫೀಡರ್‌ಗಳಾದ ನಿಟ್ಟೆ, ಕಲ್ಯಾ, ಲೆಮಿನಾ, ನಿಟ್ಟೆ ವಾಟರ್ ಸಪ್ಲೈ, 110ಕೆವಿ ಕಾರ್ಕಳ ಉಪಕೇಂದ್ರದಿಂದ ಹೊರಡುವ 11ಕೆವಿ ಪದವು ಫೀಡರ್ ಹಾಗೂ 110 ಕೆವಿ ಬೆಳ್ಮಣ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆ.ವಿ ಫೀಡರ್‌ಗಳಾದ ಮುಂಡ್ಕೂರು, ನಂದಳಿಕೆ, ಬೋಳ […]
ಜ. 6 ರಂದು ರಾಷ್ಟ್ರೀಯ ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷರ ಜಿಲ್ಲಾ ಭೇಟಿ: ದೂರು ಸಲ್ಲಿಕೆಗೆ ಅವಕಾಶ

ಉಡುಪಿ: ಮಕ್ಕಳ ರಕ್ಷಣೆಗಾಗಿ ರಾಷ್ಟ್ರೀಯ ಮಕ್ಕಳ ರಕ್ಷಣಾ ಆಯೋಗವು ಸಿ.ಪಿ.ಸಿ.ಆರ್ ಕಾಯಿದೆ 2007 ರ ಅಡಿಯಲ್ಲಿ ರೂಪುಗೊಂಡ ಶಾಸನಬದ್ಧ ಸಂಸ್ಥೆಯಾಗಿದ್ದು, ಆಯೋಗವು ಸಂವಿಧಾನದಲ್ಲಿ ಪ್ರತಿಪಾದಿಸಿರುವ ಮತ್ತು ವಿವಿಧ ಕಾಯಿದೆ ಹಾಗೂ ಕಾನೂನುಗಳ ಅಡಿಯಲ್ಲಿ ಒದಗಿಸಲಾದ ಹಕ್ಕುಗಳನ್ನು ಆನಂದಿಸಲು ಎಲ್ಲಾ ಮಕ್ಕಳಿಗೆ ಅವಕಾಶ ಮಾಡಿಕೊಡುತ್ತದೆ. ಮಕ್ಕಳ ಕುಂದು ಕೊರತೆ ನಿವಾರಣಾ ಸಭೆಯನ್ನು ನಡೆಸಲು ಮತ್ತು ಮಕ್ಕಳ ಹಕ್ಕುಗಳ ಉಲ್ಲಂಘನೆಯ ವಿರುದ್ಧ ದೂರುಗಳನ್ನು ಸ್ವೀಕರಿಸಲು ರಾಷ್ಟ್ರೀಯ ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷರು ಜನವರಿ 6 ರಂದು ಉಡುಪಿ ಜಿಲ್ಲೆಗೆ ಭೇಟಿ […]
ಇ-ಜನ್ಮ ತಂತ್ರಾಂಶದಲ್ಲಿ ಜನನ- ಮರಣ ದಾಖಲಾತಿ ಡಿಜಿಟಲೀಕರಣಕ್ಕೆ ಮಾರ್ಚ್ ವರೆಗೆ ಗಡು: ವೀಣಾ ಬಿ.ಎನ್

ಉಡುಪಿ: 2015 ರಿಂದ ಇ-ಜನ್ಮ ತಂತ್ರಾಂಶದಲ್ಲಿ ಜನನ- ಮರಣ ದಾಖಲಾಗುತ್ತಿದ್ದು, ಅದಕ್ಕಿಂತ ಹಿಂದಿನ ದಾಖಲೆಗಳನ್ನು ಸಹ ತಂತ್ರಾಂಶದಲ್ಲಿ ಕೇಂದ್ರೀಕರಿಸಲು ಪ್ರಸ್ತುತ ಕ್ರಮವಹಿಸಲಾಗುತ್ತಿದೆ. ಈ ಡಿಜಿಟಲೀಕರಣ ಕಾರ್ಯವನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ತಿಳಿಸಿದ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ , ಜನನ- ಮರಣ ದಾಖಲೆಗಳನ್ನು ತಂತ್ರಾಂಶದಲ್ಲಿ ದಾಖಲಿಸುವ ಸಂದರ್ಭದಲ್ಲಿ ಮಾಹಿತಿಗಳನ್ನು ಪೂರ್ಣವಾಗಿ ಪರಿಶೀಲಿಸಿ, ನಿಖರವಾದ ಮಾಹಿತಿ ಅಳವಡಿಸುವುದರೊಂದಿಗೆ ತಿದ್ದುಪಡಿಗಳನ್ನು ಸಾಧ್ಯವಾದಷ್ಟು ಕಡಿಮೆಗೊಳಿಸುವಂತೆ ಸೂಚಿಸಿದರು. ಅವರು ಶುಕ್ರವಾರ ಅಪರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜನನ ಮರಣ ನೋಂದಣಿ ಕುರಿತ […]
ಕರಾವಳಿಯುದ್ದಕ್ಕೂ ಸಾಗಲಿದೆ ಜಿಲ್ಲೆಯ ಪ್ರಗತಿ-ಸಂಸ್ಕೃತಿಯನ್ನು ಬಿಂಬಿಸುವ ರಜತರಥ: ರಘುಪತಿ ಭಟ್

ಉಡುಪಿ: ಉಡುಪಿ ಜಿಲ್ಲೆಯ ರಜತ ಉತ್ಸವದ ಅಂಗವಾಗಿ ಜಿಲ್ಲೆಯನ್ನು ಮುಂದಿನ 25 ವರ್ಷಗಳಲ್ಲಿ ಎಲ್ಲಾ ಕ್ಷೇತ್ರದಲ್ಲಿ ಸಮಗ್ರವಾಗಿ ಅಭಿವೃದ್ದಿಪಡಿಸುವ ಬಗ್ಗೆ ಯೋಜನೆ ಮತ್ತು ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ, ದಿಕ್ಸೂಚಿ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ವಿವಿಧ ಕ್ಷೇತ್ರಗಳ ತಜ್ಞರು ನೀಡಿರುವ ಸಲಹೆಗಳನ್ನು ದಾಖಲೀಕರಣ ಮಾಡಿ, ಅದರಂತೆ ಜಿಲ್ಲೆಯನ್ನು ಅಭಿವೃದ್ದಿಗೊಳಿಸಲಾಗುವುದು. ರಜತ ಉತ್ಸವ ಅಂಗವಾಗಿ ಜಿಲ್ಲೆಯ ಪ್ರಗತಿ ಮತ್ತು ಸಂಸ್ಕೃತಿಯನ್ನು ಬಿಂಬಿಸುವ ರಥವನ್ನು ಸಿದ್ದಪಡಿಸಲಾಗಿದ್ದು, ಕರಾವಳಿಯ ಎಲ್ಲಾ ಕಡೆಗಳಲ್ಲಿ ಸಂಚರಿಸುವ ಈ ರಥವು ಜಿಲ್ಲೆಯ ಪ್ರಗತಿಯನ್ನು ಎಲ್ಲೆಡೆ ಸಾರಲಿದೆ ಎಂದು ಶಾಸಕ […]