ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ: ಉಡುಪಿಯಲ್ಲಿ ನಾಳೆ 19 ನೇ ಶಾಖೆ ಉದ್ಘಾಟನೆ
ಉಡುಪಿ: ಉಡುಪಿಯ ವಿದ್ಯಾ ಸಮುದ್ರ ರಸ್ತೆಯಲ್ಲಿರುವ ವಿಠಲ್ ಆರ್ಕೆಡ್ ನ, 1ನೇ ಮಹಡಿಯಲ್ಲಿ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ 19ನೇ ಶಾಖೆಯನ್ನು ಜ.4 ರಂದು ಬುಧವಾರ ಬೆಳಿಗ್ಗೆ 11:30ಕ್ಕೆ ಒಡಿಯೂರು ಶ್ರೀ ಗುರು ದೇವಾನಂದ ಸ್ವಾಮೀಜಿಯವರು ಉದ್ಘಾಟಿಸಲಿದ್ದಾರೆ. ಸಾಧ್ವಿ ಶ್ರೀ ಮಾತಾನಂದಮಯಿ ಅವರ ಉಪಸ್ಥಿತಿಯಲ್ಲಿ ಶಾಸಕ ಕೆ. ರಘುಪತಿ ಭಟ್, ಮಾಜಿ ಶಾಸಕ ವಿನಯ ಕುಮಾರ್ ಸೊರಕೆ, ಉಡುಪಿ ನಗರ ಸಭಾಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ದ.ಕ. ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಮಹಾಮಂಡಳದ […]
ಕೆ.ಪಿ.ಟಿ.ಸಿ.ಎಲ್ ನೇರ ನೇಮಕಾತಿ ಪರೀಕ್ಷೆಗಳ ಫಲಿತಾಂಶ ಪ್ರಕಟ
ಬೆಂಗಳೂರು: ಕೆಪಿಟಿಸಿಎಲ್ (ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ) ಸಹಾಯಕ ಎಂಜನಿಯರ್ ಮತ್ತು ಕಿರಿಯ ಎಂಜನಿಯರ್ಗಳು ಹಾಗೂ ಜ್ಯೂನಿಯರ್ ಅಸಿಸ್ಟಂಟ್ ಹುದ್ದೆಗಳ ನೇರ ನೇಮಕಾತಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಈ ಬಗ್ಗೆ ಇಂಧನ ಸಚಿವ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ಕೆ.ಪಿ.ಟಿ.ಸಿ.ಎಲ್ ನಲ್ಲಿ ವಿವಿಧ ಹುದ್ದೆಗಳಿಗಾಗಿ ನಡೆದ ನೇರ ನೇಮಕಾತಿ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಆಯ್ಕೆಯಾದ ಎಲ್ಲಾ ಅಭ್ಯರ್ಥಿಗಳಿಗೂ ಹಾರ್ದಿಕ ಅಭಿನಂದನೆಗಳು. ನಿಮ್ಮ ಭವಿಷ್ಯ ಉಜ್ವಲವಾಗಿರಲಿ ಎಂದು ಶುಭ ಹಾರೈಸುತ್ತೇನೆ. ಫಲಿತಾಂಶವನ್ನು ತಿಳಿಯಲು https://cetonline.karnataka.gov.in/kea/kptcl2022 ಲಿಂಕ್ ಅನ್ನು […]
ವಿಶ್ವದ ಅತ್ಯುನ್ನತ ಯುದ್ದ ಭೂಮಿಯಲ್ಲಿ ಪ್ರಪ್ರಥಮ ಮಹಿಳಾ ಅಧಿಕಾರಿಯ ನಿಯೋಜನೆ: ಸಿಯಾಚಿನ್ ನಲ್ಲಿ ಕ್ಯಾಪ್ಟನ್ ಶಿವ ಚೌಹಾಣ್
ಸಿಯಾಚಿನ್: ಫೈರ್ ಅಂಡ್ ಫ್ಯೂರಿ ಕಾರ್ಪ್ಸ್ ಅಧಿಕಾರಿ ಕ್ಯಾಪ್ಟನ್ ಶಿವ ಚೌಹಾಣ್ ಅವರು ಸಿಯಾಚಿನ್ ಹಿಮನದಿಯಲ್ಲಿರುವ ಕುಮಾರ್ ಪೋಸ್ಟ್ನ ಅತ್ಯುನ್ನತ ಯುದ್ಧಭೂಮಿಯಲ್ಲಿ ಕಾರ್ಯಾಚರಣೆಗೆ ನಿಯೋಜಿಸಲ್ಪಟ್ಟ ಮೊದಲ ಮಹಿಳಾ ಅಧಿಕಾರಿಯಾಗಿದ್ದಾರೆ. ಈ ಪೋಸ್ಟ್ ಸಮುದ್ರ ಮಟ್ಟದಿಂದ 15632 ಅಡಿ ಎತ್ತರದಲ್ಲಿದೆ. ಫೈರ್ ಅಂಡ್ ಫ್ಯೂರಿ ಸ್ಯಾಪರ್ಸ್ನ ಕ್ಯಾಪ್ಟನ್ ಶಿವ ಚೌಹಾಣ್ ಅವರು ವಿಶ್ವದ ಅತ್ಯುನ್ನತ ಯುದ್ಧಭೂಮಿ ಸಿಯಾಚಿನ್ ನ ಕುಮಾರ್ ಪೋಸ್ಟ್ನಲ್ಲಿ ಕಾರ್ಯಾಚರಣೆಗೆ ನಿಯೋಜಿಸಲ್ಪಟ್ಟ ಮೊದಲ ಮಹಿಳಾ ಅಧಿಕಾರಿಯಾಗಿದ್ದಾರೆ ಎಂದು ಫೈರ್ ಮತ್ತು ಫ್ಯೂರಿ ಕಾರ್ಪ್ಸ್ ತನ್ನ ಅಧಿಕೃತ […]
ಕೊಲ್ಲೂರು: ಜನವರಿ 6 ರಿಂದ 8 ರ ಕರ್ನಾಟಕ ಹಕ್ಕಿ ಹಬ್ಬ
ಕೊಲ್ಲೂರು: ಕರ್ನಾಟಕ ಅರಣ್ಯ ಇಲಾಖೆ ಹಾಗೂ ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಸಹಯೋಗದಲ್ಲಿ ಕರ್ನಾಟಕ ಹಕ್ಕಿ ಹಬ್ಬ ಕಾರ್ಯಕ್ರಮವು ಜನವರಿ 6 ರಿಂದ 8 ರ ವರೆಗೆ ಕೊಲ್ಲೂರಿನ ಹಲ್ಕಲ್ನಲ್ಲಿ ನಡೆಯಲಿದೆ. ಜ. 6 ರಂದು ಬೆಳಗ್ಗೆ 11 ಗಂಟೆಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಕಾರ್ಯಕ್ರಮ ಉದ್ಘಾಟಿಸಲಿದ್ದು, ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಮತ್ತು […]
ಶ್ರೀವಿದ್ಯಾವಾರಿನಿಧಿತೀರ್ಥ ಸ್ವಾಮಿಜಿಗಳ ಆರಾಧನೆ ಪ್ರಯುಕ್ತ ವೃಂದಾವನ ಪೂಜೆ
ಉಡುಪಿ: ಶ್ರೀಕೃಷ್ಣಮಠದಲ್ಲಿ ಅಷ್ಟಮಠದ ಯತಿಗಳ ವೃಂದಾವನ ಸಮುಚ್ಚಯದಲ್ಲಿ ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಸ್ವಾಮಿಜಿ ಹಾಗೂ ಶ್ರೀ ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮಿಜಿಗಳು ಕಾಣಿಯೂರು ಮಠದ ಪರಮಪೂಜ್ಯ ಶ್ರೀವಿದ್ಯಾವಾರಿನಿಧಿತೀರ್ಥ ಸ್ವಾಮಿಜಿಗಳ ಆರಾಧನೆಯ ಪ್ರಯುಕ್ತ ಅವರ ವೃಂದಾವನಕ್ಕೆ ಪಾದ್ಯವನ್ನಿತ್ತು ವಿಶೇಷ ಪೂಜೆ ಸಲ್ಲಿಸಿದರು.