ಮುಂಡ್ಕೂರು: ಇನ್ನಾ ಗ್ರಾಮದಲ್ಲಿ ರಾಜ್ ಬಿ ಶೆಟ್ಟಿ; ಕನ್ನಡ ಚಿತ್ರದ ಚಿತ್ರೀಕರಣ
ಮುಂಡ್ಕೂರು: ತುಳುನಾಡಿನ ಸೊಗಡನ್ನು ವಿಶ್ವದಾದ್ಯಂತ ಪಸರಿಸುತ್ತಿರುವ ರಾಜ್ ಬಿ ಶೆಟ್ಟಿ ಇವರ ನಿರ್ದೇಶನದ ಮುಂದಿನ ಕನ್ನಡ ಚಿತ್ರದ ಚಿತ್ರೀಕರಣ ಮುಂಡ್ಕೂರು ಬಳಿ ಇನ್ನಾ ಗ್ರಾಮದಲ್ಲಿ ನಡೆದಿದ್ದು, ಈ ಸಂದರ್ಭದಲ್ಲಿ ಸಮಸ್ತ ಇನ್ನಾ ಗ್ರಾಮಸ್ಥರ ಪರವಾಗಿ ಸದ್ಗುರು ಶ್ರೀ ನಿತ್ಯಾನಂದ ಭಜನಾ ಮಂದಿರದಲ್ಲಿ ಅವರನ್ನು ಗೌರವಿಸಲಾಯಿತು.
ಕಟ್ಟಡ ಕಾರ್ಮಿಕರ ಯೋಜನೆಗೆ ಸುಳ್ಳು ದಾಖಲೆ ನೀಡಿದಲ್ಲಿ ಕಾನೂನು ಕ್ರಮ: ಜಿಲ್ಲಾ ಕಾರ್ಮಿಕ ಅಧಿಕಾರಿ
ಉಡುಪಿ: ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಣಿ ಆಗಿರುವ ಫಲಾನುಭವಿಗಳಿಗೆ ವಿವಿಧ ಆರ್ಥಿಕ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ವೃತ್ತಿಯಲ್ಲಿ ತೊಡಗದೆ ಇರುವ ಪುರುಷ ಮತ್ತು ಮಹಿಳೆಯರು ಸೌಲಭ್ಯ ಪಡೆಯುವ ನಿಟ್ಟಿನಲ್ಲಿ ನೋಂದಣಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುತ್ತಿರುವುದು ಕಂಡುಬಂದಿದ್ದು, ಇದನ್ನು ಪರಿಶೀಲಿಸಿ ಅನರ್ಹರೆಂದು ಪತ್ತೆಹಚ್ಚಿ ರದ್ದುಗೊಳಿಸಲಾಗುತ್ತಿದೆ. ಅನರ್ಹರು ನೋಂದಣಿ ಮಾಡಿಸಿಕೊಂಡಿದ್ದಲ್ಲಿ ಕೂಡಲೇ ಗುರುತಿನ ಚೀಟಿಯನ್ನು ಸಂಬಂಧಪಟ್ಟ ಕಾರ್ಮಿಕ ನಿರೀಕ್ಷಕರ ಕಚೇರಿಗೆ ಹಿಂದಿರುಗಿಸಿ ಸದಸ್ಯತ್ವವನ್ನು […]
ಇ-ಆಸ್ತಿ ತಂತ್ರಾಂಶ: ನಗರಸಭೆ ಸಿಬ್ಬಂದಿ ಮನೆ ಮನೆ ಭೇಟಿ ಕಾರ್ಯಕ್ರಮ
ಉಡುಪಿ: ಇ-ಆಸ್ತಿ ತಂತ್ರಾಂಶವನ್ನು ಸರಳೀಕರಣಗೊಳಿಸಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕೆ.ಎಂ.ಎಫ್ -24 ಗಣಕೀಕರಣ ಕಾರ್ಯವನ್ನು 2023 ರ ಫೆಬ್ರವರಿ ಅಂತ್ಯದ ಒಳಗೆ ಕಾಲೋಚಿತಗೊಳಿಸಬೇಕಾಗಿರುವುದರಿಂದ ಉಡುಪಿ ನಗರಸಭೆಯ ಸಿಬ್ಬಂದಿಗಳು ಮನೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಾರ್ವಜನಿಕರು ಕುಟುಂಬದ ದಾಖಲೆಯ ಹೆಸರು, ಮಾಲೀಕರ ಭಾವಚಿತ್ರ, ಸ್ವತ್ತಿನ ಭಾವಚಿತ್ರ, ಮಾಲೀಕರ ಗುರುತಿನ ದಾಖಲೆ, ತೆರಿಗೆ ಪಾವತಿ ರಶೀದಿ, ಮಾಲೀಕತ್ವದ ದಾಖಲಾತಿ, ಕಟ್ಟಡ ಪರವಾನಿಗೆ, ದಸ್ತಾವೇಜು, ಅಕ್ಯುಪೆನ್ಸಿ ಸರ್ಟಿಫಿಕೇಟ್ ಹಾಗೂ ಇನ್ನಿತರ ದಾಖಲೆ ನೀಡಿ ಸದರಿ ಸರ್ವೇ ಕಾರ್ಯದಲ್ಲಿ ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ […]
ಹೆಬ್ರಿ ಠಾಣಾ ವತಿಯಿಂದ ಅಪಘಾತ ಸ್ಥಳಗಳಲ್ಲಿ ಸೂಚನಾ ಫಲಕ ಅಳವಡಿಕೆ
ಹೆಬ್ರಿ: ಇಲ್ಲಿನ ಠಾಣಾ ಸರಹದ್ದಿನಲ್ಲಿ ಪ್ರತಿನಿತ್ಯ ಹೆಚ್ಚಿನ ರಸ್ತೆ ಅಪಘಾತಗಳು ನಡೆಯುತ್ತಿದ್ದು, ಇಂತಹ ಸ್ಥಳಗಳಲ್ಲಿ ಹೆಬ್ರಿ ಪೊಲೀಸ್ ಠಾಣಾ ವತಿಯಿಂದ ಮುನ್ನೆಚ್ಚರಿಕಾ ಫಲಕಗಳನ್ನು ಅಳವಡಿಸಲಾಗಿದೆ. ಈ ಬಗ್ಗೆ ಜಿಲ್ಲಾ ಎಸ್.ಪಿ ಅಕ್ಷಯ್ ಹಾಕೆ ಮಚ್ಚೀಂದ್ರ ಅವರು ಟ್ವೀಟ್ ಮಾಡಿದ್ದಾರೆ. ಹೆಬ್ರಿ ಪೊಲೀಸ್ ಠಾಣಾ ವತಿಯಿಂದ ಹೆಬ್ರಿ ಠಾಣಾ ಸರಹದ್ದಿನಲ್ಲಿ ಹೆಚ್ಚಾಗಿ ಅಪಘಾತ ಸಂಭವಿಸಿ ಜೀವ ಹಾನಿ ಆಗುವಂತಹ ಸ್ಥಳಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಅಪಘಾತ ಸೂಚನಾ ಫಲಕಗಳನ್ನು ಅಳವಡಿಸಿ ಅಪಘಾತ ನಿಯಂತ್ರಣದ ಬಗ್ಗೆ ಕ್ರಮ ಕೈಗೊಳ್ಳಲಾಯಿತು ಎಂದು ಅವರು […]
ಜ. 22 ರಿಂದ 26 ವರೆಗೆ ಅತ್ತೂರು ಸಂತ ಲಾರೆನ್ಸ್ ಬಸಿಲಿಕಾ ಕ್ಷೇತ್ರದ ವಾರ್ಷಿಕ ಉತ್ಸವ
ಕಾರ್ಕಳ: ಅತ್ತೂರು ಸಂತ ಲಾರೆನ್ಸ್ ಬಸಿಲಿಕಾ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವವು ‘ನೀವು ನನಗೆ ಸಾಕ್ಷಿಗಳಾಗುವಿರಿ’ ಎಂಬ ವಿಷಯದೊಂದಿಗೆ ಜ. 22 ರಿಂದ 26 ರವರೆಗೆ ಜರಗಲಿದ್ದು ಒಟ್ಟು 35 ಬಲಿ ಪೂಜೆಗಳು ನಡೆಯಲಿದೆ. ಜ. 22ರ ಬೆಳಿಗ್ಗೆ 10 ಗಂಟೆಗೆ (ಕೊಂಕಣಿ) ಉಡುಪಿಯ ಧರ್ಮಾಧ್ಯಕ್ಷ ರೈ| ರೆ| ಡಾ| ಜೆರಾಲ್ಡ್ ಐಸಾಕ್ ಲೋಬೋ, ಜ. 23 ರಂದು ಬೆಳಿಗ್ಗೆ 10ಕ್ಕೆ (ಕನ್ನಡ) ಪುತ್ತೂರಿನ ಧರ್ಮಾಧ್ಯಕ್ಷ ರೈ| ರೆ| ಡಾ| ಗೀವರ್ಗೀಸ್ ಮಾರ್ ಮಕಾರಿಯೋಸ್ ಕಲಯಿಲ್, ಜ. 24 […]