ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ: ಉಡುಪಿಯಲ್ಲಿ ಎನ್.ಐ.ಎ ತನಿಖೆ

ಉಡುಪಿ: ಬೆಂಗಳೂರಿನ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಇಲ್ಲಿನ ವಿದ್ಯಾರ್ಥಿ ರಿಹಾನ್ ಶೇಖ್‌ ಎಂಬಾತನ ಫ್ಲಾಟ್‌ ಅನ್ನು ಪರಿಶೀಲನೆ ನಡೆಸಿದ್ದಾರೆ. ಕುಕ್ಕರ್ ಸ್ಫೋಟದ ಆರೋಪಿಗಳೊಂದಿಗೆ ರಿಹಾನ್ ಶೇಖ್‌ ನ ಶಂಕಿತ ಸಂಪರ್ಕದ ಆಧಾರದಲ್ಲಿ ಆತನ ಫ್ಲಾಟ್ ಅನ್ನು ಅಧಿಕಾರಿಗಳು ಪರಿಶೀಲಿಸಿದ್ದಾರೆ. ಕೊಣಾಜೆ ನಡುಪದವು ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಲಿಯುತ್ತಿದ್ದ ರಿಹಾನ್ ಉಡುಪಿಯ ಬ್ರಹ್ಮಾವರ ಮೂಲದವನಾಗಿದ್ದಾನೆ. ಆತನ ಪೋಷಕರು ವಾರಂಬಳ್ಳಿಯ ಮೀನಾ ಅನ್ಮೋಲ್ ವಸತಿ ಗೃಹದ ಕಟ್ಟಡದಲ್ಲಿ ವಾಸಮಾಡಿಕೊಂಡಿದ್ದರೆ, ರಿಹಾನ್ ಮಂಗಳೂರಿನ ಬಲ್ಮಠದಲ್ಲಿ ವಾಸವಾಗಿದ್ದನು. ಅಧಿಕಾರಿಗಳು ಕೆಲವು ದಾಖಲೆಗಳನ್ನು […]

ಮಕ್ಕಳ ಹಕ್ಕುಗಳ ಸಮರ್ಪಕ ಅನುಷ್ಠಾನಗೊಳಿಸಿ ಭವಿಷ್ಯದ ಸತ್ಪ್ರಜೆಯಾಗಿಸಿ: ನಾಗಣ್ಣ ಗೌಡ

ಉಡುಪಿ: ಬಾಲ್ಯಾವಸ್ಥೆಯಲ್ಲಿಯೇ ಮಕ್ಕಳಿಗೆ ಉತ್ತಮ ವಾತಾವರಣ ಕಲ್ಪಿಸಿ, ಶಿಕ್ಷಣ ನೀಡುವುದು ಸೇರಿದಂತೆ ತಮ್ಮಲ್ಲಿರುವ ಪ್ರತಿಭೆಗಳನ್ನು ಅನಾವರಣಗೊಳಿಸುವ ನಿಟ್ಟಿನಲ್ಲಿ ಮಕ್ಕಳ ಹಕ್ಕುಗಳನ್ನು ಅನುಷ್ಠಾನಗೊಳಿಸಿ ಅವರುಗಳನ್ನು ಭವಿಷ್ಯದ ಸತ್ಪ್ರಜೆಗಳನ್ನಾಗಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ನಾಗಣ್ಣ ಗೌಡ ಹೇಳಿದರು. ಅವರು ಗುರುವಾರ ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಆರ್.ಟಿ.ಇ-2009, ಬಾಲ ನ್ಯಾಯ ಮಂಡಳಿ (ಮಕ್ಕಳ ಪಾಲನೆ ಪೋಷಣೆ) ಕಾಯ್ದೆ-2015 ಹಾಗೂ ಪೋಕ್ಸೋ ಕಾಯ್ದೆ-2012 ಅನುಷ್ಠಾನ ಕುರಿತು ಭಾಗೀದಾರ ಇಲಾಖೆಗಳೊಂದಿಗಿನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ […]

ಪಡುಬಿದ್ರಿ: ಜ.19 ರಿಂದ ಐತಿಹಾಸಿಕ ಢಕ್ಕೆ ಬಲಿ ಸೇವೆ ಆರಂಭ

ಪಡುಬಿದ್ರಿ: ಇಲ್ಲಿನ ಖಡೇಶ್ವರೀ ಬ್ರಹ್ಮಸ್ಥಾನದಲ್ಲಿ ಎರಡು ವರ್ಷಗಳಿಗೊಮ್ಮೆ ನಡೆಯುವ ಢಕ್ಕೆ ಬಲಿ ಸೇವೆಯು ಜ.19 ರಂದು ಮಂಡಲ ಸೇವೆಯೊಂದಿಗೆ ಆರಂಭಗೊಳ್ಳಲಿದೆ. ಮಾರ್ಚ್ 11 ರಂದು ನಡೆಯುವ ಮಂಡಲ ವಿಸರ್ಜೆಯೊಂದಿಗೆ ಢಕ್ಕೆ ಬಲಿ ಸೇವೆಗಳು ಸಂಪನ್ನವಾಗಲಿವೆ. ಈ ಬಾರಿ ಒಟ್ಟು 36 ಸೇವೆಗಳು ಇರಲಿವೆ. ಹೆಚ್ಚಿನ ಮಾಹಿತಿಗಾಗಿ ಬ್ರಹ್ಮಸ್ಥಾನದ ಕಚೇರಿ ಅಥವಾ ಖಡೇಶ್ವರಿ ವನದುರ್ಗಾ ಟ್ರಸ್ಟ್ ನ ಕಾರ್ಯದರ್ಶಿ ವೈ.ಎನ್. ರಾಮಚಂದ್ರ ರಾವ್ ಅವರನ್ನು ಸಂಪರ್ಕಿಸಲು ಕೋರಲಾಗಿದೆ.

ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಮತದಾರರ ಅಂತಿಮ ಪಟ್ಟಿ ಪ್ರಕಟ: ಜಿಲ್ಲಾಧಿಕಾರಿ

ಉಡುಪಿ: ಚುನಾವಣಾ ಆಯೋಗದ ನಿರ್ದೇಶನ ಅನ್ವಯ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಮತದಾರರ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ವಿವಿಧ ರಾಜಕೀಯ ಪಕ್ಷಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. 2023 ಜನವರಿ 1 ರ ಅರ್ಹತಾ ದಿನಾಂಕವನ್ನಾಗಿಟ್ಟುಕೊಂಡು ಐದು ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯನ್ನು ಜನವರಿ 5 ರಂದು ಎಲ್ಲಾ ಮತಗಟ್ಟೆಗಳಲ್ಲಿ, ಉಪ ವಿಭಾಗೀಯ, ತಾಲೂಕು ಕಚೇರಿ ಸೇರಿದಂತೆ ಜಿಲ್ಲಾಧಿಕಾರಿ ಕಚೇರಿಯ ವೆಬ್‌ಸೈಟ್‌ನಲ್ಲಿ […]

ದುಡುಕುತನದಿಂದ ವಾಹನ ಚಲಾಯಿಸಿ ಅಪಘಾತಕ್ಕೆ ಕಾರಣನಾದ ಆರೋಪಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ

ಉಡುಪಿ: ದುಡುಕುತನ ಹಾಗೂ ನಿರ್ಲಕ್ಯದಿಂದ ಕಾರು ಚಲಾಯಿಸಿ ಪಾದಚಾರಿಗೆ ಡಿಕ್ಕಿ ಹೊಡೆದು, ತೀವ್ರ ಸ್ವರೂಪದ ಗಾಯಗೊಳಿಸಿದ ಆರೋಪಿಗೆ ನಗರದ 1 ನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2020 ಜನವರಿ 7 ರಂದು ಸಂಜೆ 7 ಗಂಟೆಯ ಸುಮಾರಿಗೆ ಕೆಳಾರ್ಕಳ ಬೆಟ್ಟು ನಿವಾಸಿ ಆಲ್ವಿನ್ ಲಾರೆನ್ಸ್ ಎಂಬಾತನು ಪುತ್ತೂರು ಗ್ರಾಮದ ರಾ. ಹೆ 66 ರಲ್ಲಿ ದುಡುಕುತನ ಹಾಗೂ ನಿರ್ಲಕ್ಷ್ಯದಿಂದ ತನ್ನ ಕಾರನ್ನು ಎಡ ಬದಿಗೆ ಚಲಾಯಿಸಿ, ರಸ್ತೆ […]