ಡಿ.ದೇವರಾಜ ಅರಸು ನಿಗಮದ ವತಿಯಿಂದ ಹೊಲಿಗೆ ಯಂತ್ರ ಸೌಲಭ್ಯ

ಉಡುಪಿ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹೊಲಿಗೆ ಯಂತ್ರ ವಿತರಣೆ ಯೋಜನೆಯ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳಿಗೆ ಸೇರಿದ ಅರ್ಹ ಫಲಾಪೇಕ್ಷಿಗಳಿಂದ ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಫೆಬ್ರವರಿ 20 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.dbcdc.karnataka.gov.in, ದೂ.ಸಂಖ್ಯೆ: 080-22374832, 8050770004, 7090400100 ಹಾಗೂ 0820-2574882 ಅನ್ನು ಸಂಪರ್ಕಿಸಬಹುದಾಗಿದೆ […]

ಕುಂದಾಪುರ: ಕಳ್ಳತನ ಆರೋಪಿಗಳ ಬಂಧನ; 16 ಲಕ್ಷ ಮೌಲ್ಯದ ಸ್ವತ್ತು ಸ್ವಾಧೀನ

ಕುಂದಾಪುರ: ಕುಂದಾಪುರ ಠಾಣಾ ವ್ಯಾಪ್ತಿಯ ಕೋಟೇಶ್ವರ ಗ್ರಾಮದ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಕುಂದಾಪುರ ಪಿಎಸ್ಐ ಮತ್ತು ತಂಡ ಯಶಸ್ವಿಯಾಗಿದ್ದಾರೆ. ಆರೋಪಿಗಳಿಂದ 15 ಲಕ್ಷ ಮೌಲ್ಯದ ಚಿನ್ನಾಭರಣಗಳು, 1 ಲಕ್ಷ ಮೌಲ್ಯದ ಬೆಳ್ಳಿ ಒಟ್ಟು 16 ಲಕ್ಷ ಮೌಲ್ಯದ ಸ್ವತ್ತುಗಳನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಪ್ರಕರಣ ಕಾಸರಗೋಡಿನ ಹಾಶಿಮ್ ಎ.ಎಚ್ ಮತ್ತು ಅಬೂಬಕ್ಕರ್ ಸಿದ್ದಿಕ್ ಎಂಬ ಕಳ್ಳರಿಬ್ಬರು ಕೋಟೇಶ್ವರದ ಪ್ರಸನ್ನ ನಾರಾಯಣ ಆಚಾರ್ಯರವರ ಮನೆಯ ಬಾಗಿಲು ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ್ದರು. ಈ ಇಬ್ಬರನ್ನೂ […]

ಮಿಯ್ಯಾರು: ಜ. 8 ಮತ್ತು 9 ರಂದು ರಾಜ್ಯಮಟ್ಟದ ಗ್ರಾಮೀಣ ಕಂಬಳ ಕ್ರೀಡಾಕೂಟ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಜಿಲ್ಲೆ, ಮಿಯ್ಯಾರು ಕಂಬಳ ಸಮಿತಿ ಹಾಗೂ ನವೋದಯ ಗ್ರಾಮವಿಕಾಸ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇವರ ಸಹಯೋಗದೊಂದಿಗೆ ರಾಜ್ಯಮಟ್ಟದ ಗ್ರಾಮೀಣ ಕಂಬಳ ಕ್ರೀಡಾಕೂಟ ಮತ್ತು ಲವಕುಶ ಜೋಡುಕೆರೆ ಬಯಲು ಕಂಬಳವು ಜನವರಿ 8 ಮತ್ತು 9 ರಂದು ಮಿಯ್ಯಾರು ಲವಕುಶ ಜೋಡುಕೆರೆ ಬಯಲು ಕಂಬಳದಲ್ಲಿ ನಡೆಯಲಿದೆ. ಜ. 8 ರಂದು ಸಭಾ ವೇದಿಕೆ ಕಾರ್ಯಕ್ರಮವನ್ನು ರಾಜ್ಯದ ಪ್ರವಾಸೋದ್ಯಮ ಮತ್ತು ಪರಿಸರ ಜೀವಿಶಾಸ್ತ್ರ ಇಲಾಖೆ ಸಚಿವ […]

ಚಿಟ್ಪಾಡಿ: ಜ. 9 ರಂದು ಪ್ರಧಾನಮಂತ್ರಿ ರಾಷ್ಟ್ರೀಯ ಶಿಶಿಕ್ಷು ಮೇಳ

ಉಡುಪಿ: ಉಡುಪಿ ಚಿಟ್ಪಾಡಿಯ ಸೈಂಟ್ ಮೇರೀಸ್ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ (ಐ.ಟಿ.ಐ) ಜನವರಿ 9 ರಂದು ಬೆಳಗ್ಗೆ 9.30 ಕ್ಕೆ ಜಿಲ್ಲಾ ಮಟ್ಟದ ಪ್ರಧಾನಮಂತ್ರಿ ರಾಷ್ಟ್ರೀಯ ಶಿಶಿಕ್ಷು ಮೇಳ ಕಾರ್ಯಕ್ರಮ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು https://dgt.gov.in/appmela2022/ ಮೂಲಕ ಹಾಗೂ ಅಭ್ಯರ್ಥಿಗಳಿಗೆ ಶಿಶಿಕ್ಷು ತರಬೇತಿ ನೀಡಲು ಇಚ್ಛಿಸುವ ಕಂಪನಿ ಹಾಗೂ ಕೈಗಾರಿಕೆಗಳು ಮೇಳದಲ್ಲಿ ಭಾಗವಹಿಸಲು https://www.apprenticeshipindia.gov.in/mela-registration ಮೂಲಕ ಮೇಳ ನಡೆಯುವ ದಿನದಂದು ಸಂಸ್ಥೆಯಲ್ಲಿಯೇ ನೇರವಾಗಿ ನೋಂದಣಿ […]

ಹಕ್ಕಿ ಹಬ್ಬದ ಮೂಲಕ ಸ್ಥಳೀಯ ಪಕ್ಷಿಗಳ ಪರಿಚಯ: ಬಿ.ಎಂ ಸುಕುಮಾರ ಶೆಟ್ಟಿ

ಉಡುಪಿ: ಕೊಲ್ಲೂರು ಅಭಯಾರಣ್ಯ ಸೇರಿದಂತೆ ಪಶ್ಚಿಮ ಘಟ್ಟ ವ್ಯಾಪ್ತಿಯಲ್ಲಿರುವ ಹಲವು ಬಗೆಯ ಅಪರೂಪದ ಹಕ್ಕಿಗಳ ಬಗ್ಗೆ ಹಕ್ಕಿ ಹಬ್ಬದ ಮೂಲಕ ನಾಡಿಗೆ ಪರಿಚಯಿಸುವ ಕಾರ್ಯ ಉತ್ತಮವಾದುದು ಎಂದು ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಹೇಳಿದರು. ಅವರು ಶುಕ್ರವಾರ ಕೊಲ್ಲೂರಿನ ಹಲ್ಕಲ್‌ನಲ್ಲಿ ಕರ್ನಾಟಕ ಅರಣ್ಯ ಇಲಾಖೆ ಹಾಗೂ ರಾಜ್ಯ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಸಹಯೋಗದಲ್ಲಿ ನಡೆದ ಕರ್ನಾಟಕ ಹಕ್ಕಿ ಹಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಅರಣ್ಯ ಇಲಾಖೆಯ ಮೂಲಕ ಅರಣ್ಯದ ರಕ್ಷಣೆ ಉತ್ತಮ ರೀತಿಯಲ್ಲಿ ನಡೆಯುತ್ತಿದ್ದು, […]