ಜ.13ಕ್ಕೆ ಬೆಳ್ಳಿತೆರೆಗೆ ಬರಲಿದೆ ಬಿಗ್ ಬಾಸ್ ವಿಜೇತ ರೂಪೇಶ್ ಶೆಟ್ಟಿ ಅಭಿನಯದ ಮಂಕು ಭಾಯಿ ಫಾಕ್ಸಿ ರಾಣಿ
ಬಿಗ್ ಬಾಸ್ ಸೀಸನ್ 9 ವಿಜೇತ ರೂಪೇಶ್ ಶೆಟ್ಟಿ ನಾಯಕ ನಟನಾಗಿ ಅಭಿನಯಿಸಿರುವ ಗಗನ್. ಎಂ ಚೊಚ್ಚಲ ನಿರ್ದೇಶನದ ‘ಮಂಕು ಭಾಯ್ ಫಾಕ್ಸಿ ರಾಣಿ’ ಕನ್ನಡ ಚಿತ್ರವು ಸಿನಿಮಾ ಜನವರಿ13ಕ್ಕೆ ಬೆಳ್ಳಿತೆರೆಗೆ ಬರಲು ಸಜ್ಜಾಗಿದೆ. ಚಿತ್ರದಲ್ಲಿ ರೂಪೇಶ್ ಶೆಟ್ಟಿ ಜೊತೆ ಬ್ರಹ್ಮಗಂಟು ಧಾರಾವಾಹಿ ಖ್ಯಾತಿಯ ಗೀತಾ ಭಾರತಿ, ಪಂಚಮಿ ರಾವ್ ಮುಂತಾದವರು ನಟಿಸಿದ್ದಾರೆ. ಚಿತ್ರದ ಟೀಸರ್ ಈಗಾಗಲೇ ಬಿಡುಗಡೆಯಾಗಿದೆ. ಚಿತ್ರದ ಬಗ್ಗೆ ಸಿನಿ ಎಕ್ಪ್ರೆಸ್ ಜೊತೆ ಮಾಹಿತಿ ಹಂಚಿಕೊಂಡಿರುವ ರೂಪೇಶ್ , ನಾನು ತುಳು ನಟನಾಗಿ ಐದು […]
ಅಪಘಾತ ಸಾವು ಹಿಂಸಾಚಾರ ಪ್ರಕರಣಗಳ ಜವಾಬ್ದಾರಿಯುತ ವರದಿಗಾರಿಕೆ: ಖಾಸಗಿ ಟಿವಿ ಚಾನೆಲ್ ಗಳಿಗೆ ಸಲಹೆ ನೀಡಿದ ಕೇಂದ್ರ
ನವದೆಹಲಿ: ಮಹಿಳೆಯರು, ಮಕ್ಕಳು ಮತ್ತು ವೃದ್ಧರ ಮೇಲಿನ ದೌರ್ಜನ್ಯ ಸೇರಿದಂತೆ ಅಪಘಾತಗಳು, ಸಾವುಗಳು ಮತ್ತು ಹಿಂಸಾಚಾರದ ಘಟನೆಗಳನ್ನು ವರದಿ ಮಾಡುವುದರ ವಿರುದ್ಧ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಖಾಸಗಿ ಟಿವಿ ಚಾನೆಲ್‌ಗಳಿಗೆ ಸೋಮವಾರ ‘ಬಲವಾದ’ ಸಲಹೆಯನ್ನು ನೀಡಿದೆ. 1995 ರ ಅಡಿಯಲ್ಲಿ ಹಾಕಲಾದ ಕೇಬಲ್ ಟೆಲಿವಿಷನ್ ನೆಟ್‌ವರ್ಕ್‌ಗಳ (ನಿಯಂತ್ರಣ) ಕಾಯಿದೆಯ ಪ್ರೋಗ್ರಾಂ ಕೋಡ್‌ಗೆ ಬದ್ಧವಾಗಿರುವಂತೆ ಸರ್ಕಾರವು ಟಿವಿ ಚಾನೆಲ್‌ಗಳಿಗೆ ನಿರ್ದೇಶಿಸಿದೆ. “ಒಳ್ಳೆಯ ಅಭಿರುಚಿ ಮತ್ತು ಸಭ್ಯತೆಯ” ಮೇಲೆ ಸಂಪೂರ್ಣವಾಗಿ ರಾಜಿ ಮಾಡಿಕೊಂಡು ಮತ್ತು “ಸಾಮಾನ್ಯ ವೀಕ್ಷಕರ ಕಣ್ಣು […]
ಪರಶುರಾಮ ಥೀಮ್ ಪಾರ್ಕ್ ಲೋಕಾರ್ಪಣೆ ಕುರಿತ ಪೂರ್ವಾಭಾವಿ ಸಭೆ
ಕಾರ್ಕಳ: ಇಲ್ಲಿ ನಿರ್ಮಾಣವಾಗುತ್ತಿರುವ ಪರಶುರಾಮ ಥೀಮ್ ಪಾರ್ಕ್ ಲೋಕಾರ್ಪಣೆ ಕುರಿತ ಪೂರ್ವಾಭಾವಿ ಸಭೆ ಸೋಮವಾರದಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ನೇತೃತ್ವದಲ್ಲಿ ಜನಸೇವಾ ಕಚೇರಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಸುನಿಲ್ ಕುಮಾರ್ ಜ. 27 ರಿಂದ 30 ರವರೆಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಕಾರ್ಕಳ ಉತ್ಸವಕ್ಕೆ ಸಹಕರಿಸಿದ ರೀತಿಯಲ್ಲಿ ಸಹಕರಿಸಬೇಕು ಎಂದರು. ಪ್ರತಿ ಗ್ರಾ.ಪಂ ನಲ್ಲೂ ಪೂರ್ವಸಿದ್ದತೆ ಬಗ್ಗೆ ಮಾಹಿತಿ ನೀಡಿದ ಅವರು ಜ.18 ರಂದು 10 ಗಂಟೆಗೆ ಥೀಮ್ ಪಾರ್ಕಿನ […]
ಜನವರಿ 12 ರಂದು ರಾಷ್ಟ್ರೀಯ ಯುವ ದಿನದ ಪ್ರಯುಕ್ತ ಉಚಿತ ಮಾಸಿಕ ಉನ್ನತಿ ಉದ್ಯೋಗ ಮೇಳಕ್ಕೆ ಚಾಲನೆ
ಉಡುಪಿ: ಕೌಶಲ್ಯ ಶಿಕ್ಷಣಕ್ಕೆ ಹಾಗೂ ಉದ್ಯೋಗಾಧಾರಿತ ತರಬೇತಿಗಳಿಗೆ ಪ್ರಸಿದ್ಧಿ ಪಡೆದಿರುವ ಉಡುಪಿಯ ಉನ್ನತಿ ಕೆರಿಯರ್ ಅಕಾಡೆಮಿಯು ಜಿಲ್ಲೆಯ ಹಾಗೂ ರಾಜ್ಯದ ಸಾವಿರಾರು ಯುವಕ-ಯುವತಿಯರಿಗೆ ಉದ್ಯೋಗವಕಾಶವನ್ನು ಸೃಷ್ಟಿಸುವ ನಿಟ್ಟಿನಲ್ಲಿ ಇದೀಗ ಜನವರಿ 12ರ “ರಾಷ್ಟ್ರೀಯ ಯುವ ದಿವಸ”ದ ಅಂಗವಾಗಿ ಜನವರಿ 2023ರಿಂದ ಜನವರಿ 2024ರ ವರೆಗೆ ಉಚಿತ ಮಾಸಿಕ “ಉನ್ನತಿ ಉದ್ಯೋಗ ಮೇಳ”ಗಳನ್ನು ಆಯೋಜಿಸಲಿದೆ. ಈ ಮೇಳವು ಪ್ರತಿ ತಿಂಗಳ ಎರಡನೇ ಗುರುವಾರದಂದು ಸಂಸ್ಥೆಯ ಕಚೇರಿಯಲ್ಲಿ ನೇರ ಸಂದರ್ಶನ ಅಥವಾ ಆನ್ ಲೈನ್ ಸಂದರ್ಶನದ ಮೂಲಕ ನಡೆಯಲಿದೆ. ಭಾಗವಹಿಸಲು […]
ಜ. 12 ರಂದು ಶಾಲಾ ಮಕ್ಕಳಿಂದ ‘ಸ್ವಚ್ಛ ಉಡುಪಿ’ ಬೃಹತ್ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ
ಉಡುಪಿ: ಸ್ವಾಮಿ ವಿವೇಕಾನಂದ ಜಯಂತಿಯ ಪ್ರಯುಕ್ತ ಪ್ಲಾಸ್ಟಿಕ್ ಮತ್ತು ಡ್ರಗ್ಸ್ ಮುಕ್ತ ಸಮಾಜಕ್ಕಾಗಿ ಜ. 12 ರಂದು ಭಾರತ ಸೇವಾದಳ ಉಡುಪಿ ಜಿಲ್ಲಾ ಸಮಿತಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ರಜತೋತ್ಸವ ಸಮಿತಿಯ ಸಹಯೋಗದೊಂದಿಗೆ ಜಿಲ್ಲೆಯ ಎಲ್ಲಾ 1096 ಸರಕಾರಿ, ಅನುದಾನಿತ ಮತ್ತು ಖಾಸಗಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಸುಮಾರು 1,60,000 ಶಾಲಾ ಮಕ್ಕಳಿಂದ ಏಕಕಾಲದಲ್ಲಿ ಆಯಾಯ ಶಾಲೆಗಳ ಅಕ್ಕ ಪಕ್ಕದ ವಠಾರದಲ್ಲಿ “ಸ್ವಚ್ಛ ಉಡುಪಿ” ಎಂಬ ಶೀರ್ಷಿಕೆಯೊಂದಿಗೆ […]