ಹಿರಿಯಡಕದಲ್ಲಿ ಕಾರು- ಆಟೊ ಮಧ್ಯೆ ಅಪಘಾತ: ಮಹಿಳೆಗೆ ಗಾಯ

ಹಿರಿಯಡಕ: ಆಟೊ ರಿಕ್ಷಾ ಹಾಗೂ ಕಾರು ಮಧ್ಯೆ ಮುಖಾಮುಖಿ‌ ಡಿಕ್ಕಿಯಾದ ಪರಿಣಾಮ ಆಟೊದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಗಾಯಗೊಂಡ ಘಟನೆ ಹಿರಿಯಡಕ ಗಣೇಶ್ ಕಲಾಮಂದಿರದ ಹತ್ತಿರ ಇಂದು ಸಂಜೆ ನಡೆದಿದೆ. ಆಟೊ ಚಾಲಕ ಹಿರಿಯಡಕದಿಂದ ಅತ್ರಾಡಿ ಕಡೆಗೆ ತೆರಳುತ್ತಿದ್ದು, ಕಾರು ಚಾಲಕ ಮಣಿಪಾಲದಿಂದ ಹಿರಿಯಡಕ ತೆರಳುತ್ತಿದ್ದ ಎನ್ನಲಾಗಿದೆ. ಕಾರು ಚಾಲಕ ರಾಂಗ್ ಸೈಡ್ ನಲ್ಲಿ ಇದ್ದ ಕಾರಣ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಕಾರಿನ ಮುಂಭಾಗ ಜಖಂಗೊಂಡಿದೆ.

ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿ ವೇದಿಕೆ ಉದ್ಘಾಟನಾ ಕಾರ್ಯಕ್ರಮ

ಉಡುಪಿ: ಅಜ್ಜರಕಾಡು ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ 2022-23ನೇ ಸಾಲಿನ ವಿದ್ಯಾರ್ಥಿ ವೇದಿಕೆ ಮತ್ತು ಪ್ರತಿಭಾ ದಿನಾಚರಣೆಯ ಉದ್ಘಾಟನಾ ಕಾರ್ಯಕ್ರಮ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳಲಾಯಿತು. ಕಾಲೇಜಿನ ಮಹಾ ಪೋಷಕರಾದ ನಾಡೋಜ ಡಾ. ಜಿ.ಶಂಕರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಜಿಲ್ಲೆಯ ಪ್ರಮುಖ ಕಾಲೇಜಾಗಿರುವ ನಮ್ಮ ಕಾಲೇಜಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಡ ಮತ್ತು ಮದ್ಯಮ ವರ್ಗದ ವಿದ್ಯಾರ್ಥಿನಿಯರು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಕಾಲೇಜು ಕೂಡ ಹಂತ ಹಂತವಾಗಿ […]

ಹೆಬ್ರಿ: ಅಡ್ಡ ಬಂದ ಹಸುವನ್ನು ತಪ್ಪಿಸಲು ಹೋಗಿ ಹೊಂಡಕ್ಕೆ ಬಿದ್ದ ಓಮ್ನಿ

ಹೆಬ್ರಿ: ವಾಹನಚಲಾಯಿಸುತ್ತಿದ್ದಾಗ ಹಸುವೊಂದು ಅಡ್ಡಬಂತೆಂದು ಅದನ್ನು ತಪ್ಪಿಸಲು ಹೋಗಿ ಒಮ್ನಿಯೊಂದು ಹೊಂಡಕ್ಕೆ ಬಿದ್ದ ಘಟನೆ ಹೆಬ್ರಿಯ ಎಸ್‌ಆರ್ ಶಾಲೆಯ ಬಳಿ ನಡೆದಿದೆ. ಮಣಿಪಾಲದಿಂದ ಹರಿಹರ ಕಡೆಗೆ ಹೋಗುತ್ತಿದ್ದ ಓಮ್ನಿಯು ಹಸುವನ್ನು ತಪ್ಪಿಸಲು ಹೋದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯಲ್ಲಿದ್ದ ಹೊಂಡಕ್ಕೆ ಬಿದ್ದಿದೆ. ಘಟನೆಯಲ್ಲಿ ಪ್ರಾಣಾಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.  

ಸ್ಮಶಾನ ಕಾರ್ಮಿಕರಿಗೆ ‘ಸತ್ಯ ಹರಿಶ್ಚಂದ್ರ ಬಳಗ’ವೆಂದು ಸಂಬೋಧನೆ: ಮುಖ್ಯಮಂತ್ರಿ ಬೊಮ್ಮಾಯಿ ಆದೇಶ

ಬೆಂಗಳೂರು: ಇನ್ನು ಮುಂದೆ ಸ್ಮಶಾನ ಕಾರ್ಮಿಕರನ್ನು ‘ಸತ್ಯ ಹರಿಶ್ಚಂದ್ರ ಬಳಗ’ ಎಂದು ಸಂಬೋಧಿಸುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಬಿಬಿಎಂಪಿ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ. ಇದರ ಜೊತೆಗೆ ಪೌರ ಕಾರ್ಮಿಕರನ್ನು ಖಾಯಂ ಮಾಡುವ ಬಗ್ಗೆಯೂ ಸೂಚನೆ ನೀಡಿದ್ದಾರೆ. ಸ್ಮಶಾನ ಕಾರ್ಮಿಕರು ಎಲ್ಲರಿಗೂ ಮುಕ್ತಿ ಕೊಡುವ ಕಾರ್ಯಮಾಡುತ್ತಾರೆ. ಅವರಿಗೆ ಸತ್ಯ ಹರಿಶ್ಚಂದ್ರ ಬಳಗ ಎಂದು ನಾಮಕರಣ ಮಾಡಿ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ. ತಮ್ಮ ರೇಸ್ ಕೋರ್ಸ್ ರಸ್ತೆಯ ನಿವಾಸದಲ್ಲಿ ಸ್ಮಶಾನ ಕಾರ್ಮಿಕರೊಂದಿಗೆ ಬೆಳಗ್ಗಿನ ಉಪಾಹಾರ ಸೇವಿಸುವ ಕಾರ್ಯಕ್ರಮದಲ್ಲಿ ಅವರು ಈ […]

ಕ್ರೀಡಾಪಟುಗಳ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸ್ತುತ ಸಾಲಿನ ಕ್ರೀಡಾ ಪ್ರೋತ್ಸಾಹಧನಕ್ಕೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಕ್ರೀಡಾಕೂಟದ ವೈಯಕ್ತಿಕ ಹಾಗೂ ಗುಂಪು ಸ್ಪರ್ಧೆಯಲ್ಲಿ ಭಾಗವಹಿಸಿದ ಹಾಗೂ ಪದಕ ಪಡೆದ ಕ್ರೀಡಾಪಟುಗಳಿಗೆ ಸಹಾಯಧನ ನೀಡಲು ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣ, ಅಜ್ಜರಕಾಡು, ಉಡುಪಿ […]