ಪಾಣೆಮಂಗಳೂರು: ನೇತ್ರಾವತಿ ನದಿಯಲ್ಲಿ ಭಜರಂಗದಳ ಪ್ರಮುಖನ ಮೃತದೇಹ ಪತ್ತೆ
ಬಂಟ್ವಾಳ: ತಾಲೂಕಿನ ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಭಜರಂಗದಳ ಕಲ್ಲಡ್ಕ ಪ್ರಖಂಡದ ಗೋ ರಕ್ಷಾ ಪ್ರಮುಖ್ ರಾಜೇಶ್ ಪೂಜಾರಿ (26) ಎಂಬವರ ಮೃತದೇಹ ಪತ್ತೆಯಾಗಿದೆ. ಪಾಣೆಮಂಗಳೂರಿನ ಹಳೆಯ ಸೇತುವೆಯ ಬಳಿ ನೇತ್ರಾವತಿ ನದಿಯಲ್ಲಿ ಮೃತದೇಹ ಪತ್ತೆಯಾಗಿದೆ. ಸೇತುವೆಯ ಮೇಲೆ ದ್ವಿಚಕ್ರವಾಹನ ಪತ್ತೆಯಾದ ಹಿನ್ನೆಲೆಯಲ್ಲಿ ಸಂಶಯಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಳಿಕ ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳ ಹಾಗೂ ಮುಳುಗು ತಜ್ಞರ ತಂಡವು ಆಗಮಿಸಿ ಶೋಧ ನಡೆಸಿದೆ. ಈ ಸಂದರ್ಭ ನದಿಯಲ್ಲಿ ಮೃತದೇಹ ಪತ್ತೆಯಾಗಿದೆ. ರಾಜೇಶ್ ಪೂಜಾರಿ […]
ಅಸಂಘಟಿತ ಹಾಗೂ ವಲಸೆ ಕಾರ್ಮಿಕರು ಇ-ಶ್ರಮ್ ನಲ್ಲಿ ಹೆಸರು ನೋಂದಾಯಿಸಿಕೊಳ್ಳಿ: ಜಿಲ್ಲಾಧಿಕಾರಿ
ಉಡುಪಿ: ಅಸಂಘಟಿತ ಕಾರ್ಮಿಕರು ಹಾಗೂ ವಲಸೆ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಯೋಜನೆಗಳನ್ನು ರೂಪಿಸಲು, ಕಾರ್ಮಿಕರ ದತ್ತಾಂಶವನ್ನು ಇ-ಶ್ರಮ್ ನಲ್ಲಿ 379 ವಿವಿಧ ವರ್ಗಗಳ ಕಾರ್ಮಿಕರ ನೊಂದಣಿ ನಡೆಯುತ್ತಿದ್ದು, ಇದರಲ್ಲಿ ಪ್ರತಿಯೊಬ್ಬ ಕಾರ್ಮಿಕನೂ ಹೆಸರು ನೊಂದಾಯಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕಾರ್ಮಿಕ ಇಲಾಖೆಯ ವಿವಿಧ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದೇಶದಾದ್ಯಂತ 38 ಕೋಟಿಗೂ ಅಧಿಕ ಕಾರ್ಮಿಕರು ಅಸಂಘಟಿತ ವರ್ಗಗಳಲ್ಲಿ ತೊಡಗಿಕೊಂಡಿದ್ದು ಜಿಲ್ಲೆಯಲ್ಲಿ ಇವರ ಸಂಖ್ಯೆ 3 ಲಕ್ಷಕ್ಕೂ […]
ಪರ್ಯಾಯ ವಿದ್ಯುಚ್ಛಕ್ತಿಯ ಪಿತಾಮಹ ನಿಕೋಲಾ ಟೆಸ್ಲಾನ ಆವಿಷ್ಕಾರಗಳಿಗೆ ಸೂರ್ತಿ ಸ್ವಾಮಿ ವಿವೇಕಾನಂದರು!
ಇವತ್ತು ಟೆಸ್ಲಾ ಎಂದ ತಕ್ಷಣ ನಮ್ಮ ನಮಗೆ ಥಟ್ ಅಂತ ಏಲೋನ್ ಮಸ್ಕ್ ಮತ್ತು ಅವರ ಟೆಸ್ಲಾ ಇವಿ ಕಾರು ನೆನಪಾಗುತ್ತದೆ. ಆದರೆ ಏಲೋನ್ ಮಸ್ಕ್ ಗೆ ಸ್ಪೂರ್ತಿಯಾಗಿರುವ ನಿಕೋಲಾ ಟೆಸ್ಲಾಗೂ ಸ್ಪೂರ್ತಿಯಾದವರು ನಮ್ಮ ಸ್ವಾಮಿ ವಿವೇಕಾನಂದರು ಎನ್ನುವುದು ಬಹುತೇಕರಿಗೆ ತಿಳಿದಿಲ್ಲ. ವಿದ್ಯುಚ್ಛಕ್ತಿ ಕ್ಷೇತ್ರದಲ್ಲಿ ಪರಿಣತಿ ಹೊಂದಿದ್ದ ಮಹಾನ್ ವಿಜ್ಞಾನಿ ನಿಕೋಲಾ ಟೆಸ್ಲಾ. ಇವತ್ತು ರಸ್ತೆ ತುಂಬೆಲ್ಲಾ ಓಡಾಡುವ ಇವಿ ಕಾರುಗಳ ಹಿಂದಿನ ಶಕ್ತಿ ನಿಕೋಲಾ ಟೆಸ್ಲಾ. ಸರ್ಬಿಯನ್-ಅಮೆರಿಕನ್ ಸಂಶೋಧಕ, ಎಲೆಕ್ಟ್ರಿಕಲ್ ಇಂಜಿನಿಯರ್, ಮೆಕ್ಯಾನಿಕಲ್ ಇಂಜಿನಿಯರ್ ಮತ್ತು […]
ಕಾರ್ಕಳ: ಜ. 13 ರಂದು ವಿದ್ಯುತ್ ವ್ಯತ್ಯಯ
ಕಾರ್ಕಳ: 110 ಕೆ.ವಿ ಕಾರ್ಕಳ ವಿದ್ಯುತ್ ಉಪಕೇಂದ್ರದಿಂದ ಪರಶುರಾಮ ಥೀಮ್ ಪಾರ್ಕಿನ ಕಾಮಗಾರಿ ಕಾರ್ಯ ಹಮ್ಮಿಕೊಂಡಿರುವುದರಿಂದ ಸದರಿ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಬೈಲೂರು ಎಕ್ಸ್ಪ್ರೆಸ್ ಫೀಡರ್ಗಳ, ಬೈಲೂರು, ಜಾರ್ಕಳ, ಪಳ್ಳಿ, ನೀರೆ, ಎರ್ಲಪಾಡಿ, ಕೌಡೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜನವರಿ 13 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.
ಎಸ್.ಡಿ.ಎಂ ಆಯುರ್ವೇದ ಆಸ್ಪತ್ರೆ ವತಿಯಿಂದ ಗರ್ಭಾಶಯ ಹಾಗೂ ಸ್ತನ ಕ್ಯಾನ್ಸರ್ ಉಚಿತ ತಪಾಸಣಾ ಶಿಬಿರ
ಕುತ್ಪಾಡಿ: ಇಲ್ಲಿನ ಎಸ್.ಡಿ.ಎಂ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ಮಹಿಳೆಯರ ಗರ್ಭಾಶಯ ಕೊರಳಿನ ಕ್ಯಾನ್ಸರ್ ಮತ್ತು ಸ್ತನ ಕ್ಯಾನ್ಸರ್ ಉಚಿತ ತಪಾಸಣಾ ಮತ್ತು ಮಾಹಿತಿ ಶಿಬಿರವನ್ನು ಆಸ್ಪತ್ರೆಯ ಆವರಣದಲ್ಲಿ ಫೆ.1 ರಿಂದ 7 ರವರೆಗೆ ಬೆಳಗ್ಗೆ 9 ರಿಂದ ಸಂಜೆ 5 ರವರೆಗೆ ಹಮ್ಮಿಕೊಳ್ಳಲಾಗಿದ್ದು, ಆಸ್ಪತ್ರೆಯ ಪ್ರಸೂತಿ ತಂತ್ರ ಹಾಗೂ ಸ್ತ್ರೀರೋಗ ವಿಭಾಗದ ತಜ್ಞರು ಭಾಗವಹಿಸಲಿದ್ದಾರೆ. ತಜ್ಞ ವೈದರು ಗರ್ಭಾಶಯ ಕೊರಳಿನ ಕ್ಯಾನ್ಸರ್ ಮತ್ತು ಸ್ತನ ಕ್ಯಾನ್ಸರ್ ನ ಬಗ್ಗೆ ಮಾಹಿತಿಯನ್ನು ನೀಡಲಿದ್ದಾರೆ. ಮಹಿಳೆಯರು ಇದರ […]