ಜ.31 ರಿಂದ ಏ. 6ರವರೆಗೆ ಕೇಂದ್ರ ಬಜೆಟ್ ಅಧಿವೇಶನ: ಪ್ರಹ್ಲಾದ್ ಜೋಶಿ

ನವದೆಹಲಿ: 2023ರ ಬಜೆಟ್ ಅಧಿವೇಶನ ಜನವರಿ 31ರಂದು ಆರಂಭಗೊಂಡು ಎಪ್ರಿಲ್ 6ರ ವರೆಗೆ ನಡೆಯಲಿದೆ. 27 ಅವಧಿಯ ಅಧಿವೇಶನ ಒಟ್ಟು 66 ದಿನಗಳವರೆಗೆ ನಡೆಯಲಿದ್ದು, ಸ್ವಾತಂತ್ರ್ಯದ ಅಮೃತ ಮಹೋತ್ಸದ ಈ ವಿಶೇಷ ಸಂದರ್ಭದಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯ, ಬಜೆಟ್ ಮಂಡನೆ ಹಾಗೂ ಇತರ ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಸಲಾಗುವುದು. ಈ ಅಧಿವೇಶನದ ಸಂದರ್ಭದಲ್ಲಿ, ಸಂಸತ್ತಿನ ಸ್ಥಾಯಿ ಸಮಿತಿ ಎದುರಿರುವ ಹಲವು ರಾಜ್ಯಗಳ ಅನುದಾನಗಳ ಬೇಡಿಕೆ ಕುರಿತು ನಿರ್ಣಯ ಕೈಗೊಳ್ಳಲು ಹಾಗೂ ವಿವಿಧ ಸಚಿವಾಲಯಗಳಿಗೆ ಸಂಬಂಧಪಟ್ಟ […]

ಅಮೇರಿಕಾದಲ್ಲಿ ಭಾರತದ ಚಿನ್ನದ ಹಕ್ಕಿ: ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಮಿಂಚುತ್ತಿದ್ದಾರೆ ನಮ್ಮ ಕುಡ್ಲದ ಕುವರಿ ದಿವಿತಾ ರೈ

71 ನೇ ವಾರ್ಷಿಕ ವಿಶ್ವ ಸುಂದರಿ ಜನವರಿ 14 ರಂದು ಅಮೇರಿಕಾದ ನ್ಯೂ ಓರ್ಲಿಯನ್ಸ್, ಲೂಯಿಸಿಯಾನದಲ್ಲಿರುವ ಅರ್ನೆಸ್ಟ್ ಎನ್. ಮೋರಿಯಲ್ ಕನ್ವೆನ್ಷನ್ ಸೆಂಟರ್‌ ನಲ್ಲಿ ನಡೆಯಲಿದ್ದು, 86 ಕ್ಕೂ ಹೆಚ್ಚು ಮಹಿಳೆಯರು ವಿಶ್ವ ಸುಂದರಿ ಪಟ್ಟಕ್ಕಾಗಿ ಸ್ಪರ್ಧಿಸಲಿದ್ದಾರೆ. ಈಗಾಗಾಲೇ ಪೂರ್ವಾಭಾವಿ ಸುತ್ತುಗಳು ನಡೆಯುತ್ತಿದ್ದು, ಭಾರತದ ಪ್ರತಿನಿಧಿ ಮಿಸ್ ಯೂನಿವರ್ಸ್ ಇಂಡಿಯಾ ದಿವಿತಾ ರೈ ಕೂಡಾ ಸ್ಪರ್ಧೆಯಲ್ಲಿದ್ದಾರೆ. ದಿವಿತಾ ರೈ ಕಾಸ್ಟೂಮ್ ವಿಭಾಗದಲ್ಲಿ ಬಂಗಾರವರ್ಣದ ‘ಚಿನ್ನದ ಹಕ್ಕಿ’ಯ ಉಡುಗೆ ತೊಟ್ಟಿದ್ದು, ಇದು ಭಾರತದ ಅಪಾರ ಸಂಪತ್ತನ್ನು ಪ್ರತಿನಿಧಿಸುವ ಉಡುಗೆಯಾಗಿದೆ. […]

ಕೊಂಕಣ ರೈಲ್ವೆಯಲ್ಲಿ ಕಳ್ಳತನ: ಗಂಭೀರ ಪರಿಗಣನೆಗೆ ಕೇಂದ್ರ ಸಚಿವೆ ಸೂಚನೆ

ಉಡುಪಿ: ಕರಾವಳಿ ಜಿಲ್ಲೆಗಳನ್ನು ಹಾದು ಹೋಗುವ ಕೊಂಕಣ ರೈಲ್ವೆ ವ್ಯಾಪ್ತಿಯ ರೈಲುಗಳಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಳ್ಳತನ ಪ್ರಕರಣಗಳು ನಡೆಯುತ್ತಿದ್ದು, ರೈಲ್ವೆ ಇಲಾಖೆ ಈ ಬಗ್ಗೆ ಅತ್ಯಂತ ಗಂಭೀರವಾಗಿ ಪರಿಗಣಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಸೂಚನೆ ನೀಡಿದರು. ಅವರು ಬುಧವಾರ ನಗರದ ಜಿಲ್ಲಾ ಪಂಚಾಯತ್‍ನ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ದಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ […]

ಸಂತೆಕಟ್ಟೆ ಓವರ್ ಪಾಸ್ ಕಾಮಗಾರಿ ತ್ವರಿತಗತಿಯಲ್ಲಿ ಮುಕ್ತಾಯ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಉಡುಪಿ: ಉಡುಪಿಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯ ಸಂತೆಕಟ್ಟೆಯಲ್ಲಿ ವಾಹನ ದಟ್ಟಣೆ ಮತ್ತು ಅಪಘಾತಗಳನ್ನು ತಪ್ಪಿಸಲು ಹಾಗೂ ವಾಹನಗಳ ಸುಗಮ ಸಂಚಾರಕ್ಕಾಗಿ 21.26 ಕೋಟಿ ವೆಚ್ಚದಲ್ಲಿ ಓವರ್ ಪಾಸ್ ನಿರ್ಮಾಣ ಮಾಡಲಾಗುತ್ತಿದ್ದು,ಅತ್ಯಂತ ತ್ವರಿತಗತಿಯಲ್ಲಿ ಕಾಮಗಾರಿ ಮುಕ್ತಾಯಗೊಳ್ಳಲಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಅವರು ಗುರುವಾರ ನಗರದ ಸಂತೆಕಟ್ಟೆ ಜಂಕ್ಷನ್ ನಲ್ಲಿ ಓವರ್ ಪಾಸ್ ಕಾಮಗಾರಿಯ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿ ಮಾತನಾಡಿದರು. ರಾಷ್ಟ್ರೀಯ ಹೆದ್ದಾರಿಯಲ್ಲಿನ ಸಂತೆಕಟ್ಟೆ ಜಂಕ್ಷನ್ […]

ಕರಂಬಳ್ಳಿ ಅಯ್ಯಪ್ಪವೃತಧಾರಿಗಳಿಂದ ಶಬರಿಮಲೆ ಯಾತ್ರೆ

ಉಡುಪಿ: ಶ್ರೀ ವೆಂಕಟರಮಣ ದೇವಸ್ಥಾನ ವಠಾರದಲ್ಲಿ ಕರಂಬಳ್ಳಿ ಶ್ರೀ ಅಯ್ಯಪ್ಪ ಸ್ವಾಮೀ ಭಕ್ತ ವೃಂದದವರ ಶಬರಿಮಲೆ ಯಾತ್ರೆಯ ವಿಧಿವಿಧಾನಗಳು ಮಂಜುಗುರುಸ್ವಾಮಿ ನೇತೃತ್ವದಲ್ಲಿ ಜರುಗಿತು. ವಿಶೇಷ ಅಲಂಕಾರ, ಹೂವಿನ ಮಂಟಪದಲ್ಲಿ ಮಹಾಪೂಜೆ, ಇರುಮುಡಿ ಕಟ್ಟುವಿಕೆ, ಸಾರ್ವಜನಿಕ ಅನ್ನಸಂತರ್ಪಣೆ, ಧಾರ್ಮಿಕ ಪೂಜಾ ವಿಧಾನ ನಡೆಸಿದ ಬಳಿಕ ವೃತಧಾರಿಗಳು ಶಬರಿಮಲೆ ಯಾತ್ರೆಗೆ ತೆರಳಿದರು.