ಬೈಂದೂರು: ಜ. 21 ರಂದು ಕಿರಿಮಂಜೇಶ್ವರದಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ

ಉಡುಪಿ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿಗಳು ಜನವರಿ 21 ರಂದು ಬೆಳಗ್ಗೆ 11 ಗಂಟೆಗೆ ಬೈಂದೂರು ತಾಲೂಕು ಕಿರಿಮಂಜೇಶ್ವರ ಗ್ರಾಮದ ನಾಗೂರು ಒಡೆಯರ ಮಠ ಶ್ರೀ ಕೃಷ್ಣ ಲಲಿತ ಕಲಾಮಂದಿರದ ಇಲ್ಲಿ ಗ್ರಾಮ ವಾಸ್ತವ್ಯ ನಡೆಸಲಿದ್ದು, ಸದ್ರಿ ಗ್ರಾಮಕ್ಕೆ ಒಳಪಡುವ ಗ್ರಾಮಸ್ಥರು ತಮ್ಮ ಅಹವಾಲುಗಳನ್ನು ಮುಂಚಿತವಾಗಿ ಗ್ರಾಮದ ಗ್ರಾಮ ಕರಣಿಕರ ಕಚೇರಿಗೆ ನೀಡುವಂತೆ ಹಾಗೂ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಇದರ ಸದುಪಯೋಗಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಉಡುಪಿ ರಜತಮಹೋತ್ಸವ: ಕಾಪು- ಮಲ್ಪೆ ಬೀಚ್ ನಲ್ಲಿ ಸಮಾರಂಭ

ಉಡುಪಿ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ರಜತ ಉಡುಪಿ- ಬೀಚ್ ಉತ್ಸವ ಕಾರ್ಯಕ್ರಮವು ಜನವರಿ 20 ರಿಂದ 22 ರ ವರೆಗೆ ಮಲ್ಪೆಯಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ರಾಜ್ಯದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಉದ್ಘಾಟಿಸಲಿದ್ದು, ಶಾಸಕ ಕೆ ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಾಪು ತಾಲೂಕು ಆಡಳಿತ ಇವರ ವತಿಯಿಂದ ಉಡುಪಿ […]