ಕೋಟ: ರಾ.ಹೆ 66 ರಲ್ಲಿ ಅಪಘಾತ ತಡೆಗೆ ಉಡುಪಿ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಅಧೀಕ್ಷಕರಿಂದ ಕಾರ್ಯಾಚರಣೆ

ಕೋಟ: ರಾ.ಹೆ 66 ರಲ್ಲಿ ದಿನದಿಂದ ದಿನಕ್ಕೆ ಅಪಘಾತಗಳು ಹೆಚ್ಚಾಗುತ್ತಿದ್ದು, ಅಪಘಾತದಿಂದ ಜೀವಹಾನಿ ಸಂಭವಿಸಿದಲ್ಲಿ ಇದಕ್ಕೆ ರಾ.ಹೆ ನಿರ್ಮಾಣದ ಗುತ್ತಿಗೆದಾರರಾದ ನವಯುಗ ಕಂಪನಿಯನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ ಮತ್ತು ಪೊಲೀಸ್ ಅಧೀಕ್ಷಕ ಅಕ್ಷಯ್ ಮಚ್ಚೀಂದ್ರ ಖಡಕ್ ಎಚ್ಚರಿಕೆ ನೀಡಿದ್ದಾರೆ. ಅವರು ಗುರುವಾರದಂದು ಕೋಟ ಅಮೃತೇಶ್ವರಿ ದೇವಸ್ಥಾನದ ಜಂಕ್ಷನ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ರಸ್ತೆ ಅಪಘಾತಗಳ ಕುರಿತು ರಾ.ಹೆ ಅಧಿಕಾರಿಗಳೊಂದಿಗೆ ಚರ್ಚಿಸಿ ಅಪಘಾತ ನಿಯಂತ್ರಿಸಲು ಅನುಸರಿಸಬೇಕಾದ ನಿಯಮಗಳನ್ನು ಕಡ್ಡಾಯವಾಗಿ ಜಾರಿಗೊಳಿಸುವಂತೆ […]

ಸಂಸದ ತೇಜಸ್ವಿ ಸೂರ್ಯ ಬೇಜವಾಬ್ದಾರಿಯುತ ವರ್ತನೆ ರಿಯಲ್ ಪಪ್ಪುವಿನಂತಾಗಿದೆ: ಪ್ರಖ್ಯಾತ್ ಶೆಟ್ಟಿ

ಉಡುಪಿ: ಚೆನ್ನೈ ವಿಮಾನ ನಿಲ್ದಾಣದಲ್ಲಿ ಯಾವುದೇ ಅನುಮತಿಯಿಲ್ಲದೆ ವಿಮಾನದ ತುರ್ತು ನಿರ್ಗಮನದ ಬಾಗಿಲನ್ನು ತೆರೆದಿರುವ ಆರೋಪ ಹೊಂದಿರುವ ಬೆಂಗಳೂರು ದಕ್ಷಿಣ ಲೋಕಸಭಾ ಸಂಸದ ತೇಜಸ್ವಿ ಸೂರ್ಯ ವರ್ತನೆ ರಿಯಲ್ ಪಪ್ಪುವಿನಂತಾಗಿದೆ. ಹಿಂದೆ ಒಬ್ಬ ಜವಾಬ್ದಾರಿಯುತ ನಾಯಕರಾದ ರಾಹುಲ್ ಗಾಂಧಿಯವರನ್ನು ಹೀಯಾಳಿಸಿಕೊಂಡು ಕಾಲ ಕಳೆಯುತ್ತಿದ್ದ ಬಿಜೆಪಿಗರಿಗೆ ತೇಜಸ್ವಿ ಸೂರ್ಯನ ವರ್ತನೆ ಯಾವ ರೀತಿ ಕಾಣುತ್ತದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ ಪ್ರಶ್ನಿಸಿದ್ದಾರೆ. ಒಬ್ಬ ಜವಾಬ್ದಾರಿಯುತ ಸಂಸದನಾಗಿ ತಾನು ಹೇಗೆ ವರ್ತಿಸಬೇಕು ಎನ್ನುವ ಕನಿಷ್ಠ ಪ್ರಜ್ಞೆ […]

ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ಹೆಗ್ಗಳಿಕೆಗೆ ಪಾತ್ರವಾಗಲಿದ್ದಾರೆ ಎಂದೂ ಆಸ್ಪತ್ರೆಗೆ ಹೋಗದ 115 ವರ್ಷದ ಸ್ಪ್ಯಾನಿಷ್ ಮುತ್ತಜ್ಜಿ!

ಬಾರ್ಸಿಲೋನಾ: ಯುನೈಟೆಡ್ ಸ್ಟೇಟ್ಸ್‌ನಲ್ಲಿ ಜನಿಸಿದ ಸ್ಪ್ಯಾನಿಷ್ ಮುತ್ತಜ್ಜಿ 115 ವರ್ಷ ವಯಸ್ಸಿನ ವಿಶ್ವದ ಅತ್ಯಂತ ಹಿರಿಯ ವ್ಯಕ್ತಿಯಾಗುವ ಸಾಧ್ಯತೆಯಿದೆ ಎಂದು ಗಿನ್ನೆಸ್ ವಿಶ್ವ ದಾಖಲೆಗಳ ಸಲಹೆಗಾರರೊಬ್ಬರು ಬುಧವಾರ ಹೇಳಿದ್ದಾರೆ. 118 ವರ್ಷ ವಯಸ್ಸಿನ ಫ್ರೆಂಚ್ ಸನ್ಯಾಸಿನಿ ಲುಸಿಲ್ ರಾಂಡನ್ ಮಂಗಳವಾರದಂದು ನಿಧನರಾದ ನಂತರ ಮಾರಿಯಾ ಬ್ರನ್ಯಾಸ್ ಮೊರೆರಾ ಪ್ರಪಂಚದ ಹಿರಿಯ ವ್ಯಕ್ತಿ ಎನ್ನುವ ಹಿರಿಮೆಗೆ ಪಾತ್ರರಾಗಲಿದ್ದಾರೆ ಎಂದು ಜೆರೊಂಟಾಲಜಿಯ ಹಿರಿಯ ಸಲಹೆಗಾರ ರಾಬರ್ಟ್ ಡಿ ಯಂಗ್ ಹೇಳಿದ್ದಾರೆ. ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್ ಡಾಕ್ಯುಮೆಂಟ್ ಪರಿಶೀಲನೆಗಳನ್ನು ನಡೆಸಿದ ನಂತರ […]

ಮಲ್ಪೆ ಬೀಚ್ ಉತ್ಸವ ಪ್ರಯುಕ್ತ ವಿವಿಧ ಸ್ಪರ್ಧೆಗಳು

ಉಡುಪಿ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಉಡುಪಿ ವತಿಯಿಂದ ಜನವರಿ 20 ರಿಂದ 22 ರ ವರೆಗೆ ಉಡುಪಿ ರಜತ ಉತ್ಸವದ ಪ್ರಯುಕ್ತ ನಡೆಯುವ ಮಲ್ಪೆ ಬೀಚ್ ಉತ್ಸವ ಕಾರ್ಯಕ್ರಮದಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಜ. 20 ರಿಂದ 21 ರ ವರೆಗೆ ಗಾಳಿಪಟ ಉತ್ಸವ, ಆರ್ಟ್ ಕ್ಯಾಂಪ್, ಫೋಟೋ ಎಕ್ಸಿಬಿಷನ್, ಫುಡ್ ಫೆಸ್ಟಿವಲ್ ನಡೆಯಲಿದ್ದು, ಜ. 21 ಮತ್ತು 22 ರಂದು ಈಜು ಸ್ಪರ್ಧೆ, ಪುರುಷರ ಕಬಡ್ಡಿ ಸ್ಪರ್ಧೆಗಳು ನಡೆಯಲಿವೆ. […]

ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳದಿಂದ ದಾಳಿ: 42 ಪ್ರಕರಣ ದಾಖಲು

ಉಡುಪಿ: ಜಿಲ್ಲೆಯಲ್ಲಿ ಕೋಟ್ಪಾ ಕಾಯ್ದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ಇಂದು ಉಡುಪಿ ನಗರ ವ್ಯಾಪ್ತಿ ಪ್ರದೇಶಗಳ ತಂಬಾಕು ಮಾರಾಟದ ಅಂಗಡಿ, ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್‌ಗಳ ಮೇಲೆ ದಾಳಿ ನಡೆಸಿ, ಸೆಕ್ಷನ್ 4 ಮತ್ತು 6(ಎ) ಅಡಿಯಲ್ಲಿ ಒಟ್ಟು 42 ಪ್ರಕರಣ ದಾಖಲಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದೇವಪ್ಪ ಪಟಗಾರ್, ರಾಷ್ಟೀಯ ತಂಬಾಕು ನಿಯಂತ್ರಣ ಘಟಕದ ಜಿಲ್ಲಾ ಸಲಹೆಗಾರ್ತಿ ಮಂಜುಳಾ […]