ಜ.22 ರಂದು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರಜಾಧ್ವನಿ ಯಾತ್ರೆ ಬೃಹತ್ ಸಮಾವೇಶ

ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಜ.22 ರಂದು ಬೆಳಿಗ್ಗೆ 10 ಗಂಟೆಗೆ ಪ್ರಜಾಧ್ವನಿ ಯಾತ್ರೆ ಬೃಹತ್ ಸಮಾವೇಶವನ್ನು ಉಡುಪಿಯ ಕ್ರಿಶ್ಚಿಯನ್ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ. ರಾಜ್ಯ ಬಿಜೆಪಿ ಸರ್ಕಾರದ ವೈಫಲ್ಯಗಳು, ಮಿತಿಮೀರಿದ ಭ್ರಷ್ಟಾಚಾರ, ಪೊಲೀಸ್ ನೇಮಕಾತಿಯಲ್ಲಿ ಲಂಚದ ಬೇಡಿಕೆ, ಭೂ ಕಬಳಿಕೆ ಹಗರಣ, ಕೋವಿಡ್-19 ಮಹಾಮಾರಿ ಸಂದರ್ಭದಲ್ಲಿ ವೈದ್ಯಕೀಯ ಸಲಕರಣೆಗಳಲ್ಲಿ ಅವ್ಯವಹಾರ, ಆಹಾರ ಕಿಟ್‌ನಲ್ಲಿ ಭ್ರಷ್ಟಾಚಾರ, ಮಕ್ಕಳಿಗೆ ಅಂಗನವಾಡಿಯಲ್ಲಿ ನೀಡುತ್ತಿರುವ ಮೊಟ್ಟೆಯಲ್ಲೂ ಹಗರಣ, ಇಂಧನ ಇಲಾಖೆಯಲ್ಲಿ ಭ್ರಷ್ಟಾಚಾರ, ಅಕ್ರಮವಾಗಿ ಶಾಸಕರನ್ನು ಖರೀದಿಸಿ ಜನಬೆಂಬಲವಿಲ್ಲದೆ […]

ಕಾರ್ಕಳ: ಟೀಮ್ ನೇಶನ್ ಫಸ್ಟ್ ವತಿಯಿಂದ ಪರಶುರಾಮ ದೌಡ್

ಕಾರ್ಕಳ: ಉಮಿಕಳ್ ಬೆಟ್ಟದಲ್ಲಿ ಪರಶುರಾಮ ಥೀಮ್ ಪಾರ್ಕ್ ಲೋಕಾರ್ಪಣೆ ಪ್ರಯುಕ್ತ ಕಾರ್ಕಳದಿಂದ ಪರಶುರಾಮ ಥೀಮ್ ಪಾರ್ಕ್ ವರೆಗೆ ಟೀಮ್ ನೇಶನ್ ಫಸ್ಟ್ ವತಿಯಿಂದ ಪರಶುರಾಮ ದೌಡ್ ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಜೋಡುರಸ್ತೆಯಲ್ಲಿ ಭರ್ಜರಿಯಾಗಿ ಸ್ವಾಗತಿಸಿದರು. ಜೋಡುರಸ್ತೆ ಪೂರ್ಣಿಮಾ ಸಿಲ್ಕ್ಸ್ ನ ವತಿಯಿಂದ ತಂಪು ಪಾನೀಯ ಹಾಗೂ ಫಲಾಹಾರದ ವ್ಯವಸ್ಥೆ ಮಾಡಲಾಯಿತು. ಸಚಿವ ಸುನೀಲ್ ಕುಮಾರ್, ಪೂರ್ಣಿಮಾ ಸಿಲ್ಕ್ ನ ಮಾಲೀಕ, ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ರವಿಪ್ರಕಾಶ್ ಪ್ರಭು ಇವರಿಗೆ ಶಾಲು ಹೊದಿಸಿ […]

10 ವರ್ಷಗಳ ಹಿಂದೆ ಆಧಾರ್ ಕಾರ್ಡ್ ಮಾಡಿಸಿಕೊಂಡವರು ನವೀಕರಣ ಮಾಡಿಸಿಕೊಳ್ಳಿ: ಕೂರ್ಮಾ ರಾವ್

ಉಡುಪಿ: ಜಿಲ್ಲೆಯಲ್ಲಿ ಕಳೆದ 10 ವರ್ಷಗಳ ಹಿಂದೆ ಆಧಾರ್ ಕಾರ್ಡ್ ನೋಂದಣಿ ಮಾಡಿಸಿಕೊಂಡ ಪ್ರತಿಯೊಬ್ಬ ಸಾರ್ವಜನಿಕರೂ ತಮ್ಮ ವಿಳಾಸ ದೃಢೀಕರಣ ದಾಖಲೆಯೊಂದಿಗೆ ಆಧಾರ್ ಕೇಂದ್ರಗಳಿಗೆ ಭೇಟಿ ನೀಡಿ ನವೀಕರಣ ಮಾಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಬುಧವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಆಧಾರ್ ನವೀಕರಣ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರ ನೀಡಿರುವ ಆಧಾರ್ ವಿಶಿಷ್ಟ ಗುರುತಿನ ಚೀಟಿಯನ್ನು ಪ್ರತಿಯೊಬ್ಬ ಭಾರತೀಯ ಪ್ರಜೆಗಳೂ ಮಾಡಿಸಿಕೊಳ್ಳಬೇಕು,ಈಗಾಗಲೇ ಆಧಾರ್ ಕಾರ್ಡ್ ನೊಂದಣಿಯನ್ನು 10 ವರ್ಷಗಳ ಹಿಂದೆ […]