ಸಹಕಾರಿ ರತ್ನ ಪ್ರಶಸ್ತಿ ಪುರಸ್ಕೃತ ಜಯಕರ ಶೆಟ್ಟಿ ಇಂದ್ರಾಳಿಯವರ ಅಭಿನಂದನಾ ಕಾರ್ಯಕ್ರಮ
ಉಡುಪಿ: ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ವತಿಯಿಂದ ‘ಸಹಕಾರಿ ರತ್ನ ಪ್ರಶಸ್ತಿ’ ಪುರಸ್ಕೃತ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಇವರ ಅಭಿನಂದನಾ ಹಾಗೂ ಸೇವಾ ಚಿಂತನಾ ಕಾರ್ಯಕ್ರಮವನ್ನು ರವಿವಾರದಂದು ಉಡುಪಿ ಮಿಷನ್ ಕಾಂಪೌಂಡ್ನ ಬಾಸೆಲ್ ಮಿಷನರೀಸ್ ಅಡಿಟೋರಿಯಂನಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿದ ರಾಜ್ಯ ಸಹಕಾರ ಮಾರಾಟ ಮಂಡಳಿ ಹಾಗೂ ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಮಾತನಾಡಿ, ಮುಳುಗುತ್ತಿರುವ ಸಹಕಾರಿ ಸಂಸ್ಥೆಯನ್ನು ಪ್ರಗತಿ ಪಥದಲ್ಲಿ ಕೊಂಡೊಯ್ಯುವುದರೊಂದಿಗೆ ತಾನೂ ಬಹು ಎತ್ತರಕ್ಕೆ […]
ಉಡುಪಿ ಜಿಲ್ಲೆ: ಜ.24 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ
ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಜನವರಿ 24 ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 110 ಕೆವಿ ಕಾರ್ಕಳ ವಿದ್ಯುತ್ ಉಪಕೇಂದ್ರದಿAದ ಪರಶುರಾಮ ಥೀಮ್ ಪಾರ್ಕ್ ನ ಕಾಮಗಾರಿ ಕಾರ್ಯವನ್ನು ಹಮ್ಮಿಕೊಂಡಿರುವುದರಿoದ 110ಕೆವಿ ಕಾರ್ಕಳ ವಿದ್ಯುತ್ ಉಪಕೇಂದ್ರದಿoದ ಹೊರಡುವ 11ಕೆವಿ ಬೈಲೂರು ಎಕ್ಸ್ ಪ್ರೆಸ್ ಫೀಡರ್ಗಳ ಬೈಲೂರು, ಜಾರ್ಕಳ, ಪಳ್ಳಿ, ನೀರೆ, ಎರ್ಲಪಾಡಿ, ಕೌಡೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ […]
ಉಡುಪಿ: ಜ.24 ರಂದು ನೇರ ಸಂದರ್ಶನ
ಉಡುಪಿ: ನಗರದ ಕುಂಜಿಬೆಟ್ಟು ಶಿವಳ್ಳಿಯ ಮ್ಯಾಟ್ರಿನ್ ದಿಯಾ, ಮ್ಯಾಟ್ರಿಕ್ಸ್ ಆಟೋ ವೆಂಚರ್ಸ್ ಇಲ್ಲಿ ಜನವರಿ 24 ರಂದು ಬೆಳಗ್ಗೆ 10.30 ಕ್ಕೆ ನೇರ ಸಂದರ್ಶನ ಆಯೋಜಿಸಲಾಗಿದೆ. ಐ.ಟಿ.ಐ, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿ ಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ: 8105618291, 9945856670, 8197440155 ಹಾಗೂ 9901472710 […]