ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ 21 ದೊಡ್ಡ ಹೆಸರಿಸದ ದ್ವೀಪಗಳಿಗೆ ಪರಮವೀರ ಚಕ್ರ ಪುರಸ್ಕೃತರ ಹೆಸರು
ನವದೆಹಲಿ: ಪರಾಕ್ರಮ್ ದಿವಸ್ ದಿನದಂದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ 21 ಪರಮವೀರ ಚಕ್ರ ಪ್ರಶಸ್ತಿ ಪುರಸ್ಕೃತರ ಹೆಸರನ್ನು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ 21 ದೊಡ್ಡ ಹೆಸರಿಸದ ದ್ವೀಪಗಳನ್ನು ಹೆಸರಿಸುವ ಸಮಾರಂಭದಲ್ಲಿ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ದ್ವೀಪದಲ್ಲಿ ನಿರ್ಮಿಸಲಿರುವ ನೇತಾಜಿಯ ರಾಷ್ಟ್ರೀಯ ಸ್ಮಾರಕದ ಮಾದರಿಯನ್ನು ಪ್ರಧಾನಿ ಅನಾವರಣಗೊಳಿಸಿದರು. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ಇಂದು ಐತಿಹಾಸಿಕ ದಿನವಾಗಿದೆ ಎಂದ ಪ್ರಧಾನಿ ಮೋದಿ, “ಇತಿಹಾಸವನ್ನು ರಚಿಸುವಾಗ, ಭವಿಷ್ಯದ […]
ಹಿಜಾಬ್ ಅರ್ಜಿ ಆಲಿಕೆಗೆ ಸುಪ್ರೀಂ ಕೋರ್ಟ್ ನಿಂದ ತ್ರಿಸದಸ್ಯ ಪೀಠ ಸ್ಥಾಪನೆ ಸಾಧ್ಯತೆ
ನವದೆಹಲಿ: ಕಳೆದ ವರ್ಷದ ವಿಭಜಿತ ತೀರ್ಪಿನ ನಂತರ ಕರ್ನಾಟಕ ಶಾಲೆಗಳಲ್ಲಿ ಹಿಜಾಬ್ ಧರಿಸುವುದಕ್ಕೆ ಸಂಬಂಧಿಸಿದ ಪ್ರಕರಣದ ತೀರ್ಪು ನೀಡಲು ತ್ರಿಸದಸ್ಯ ಪೀಠವನ್ನು ಸ್ಥಾಪಿಸಲು ಪರಿಗಣಿಸುವುದಾಗಿ ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. ಸುಪ್ರೀಂ ಕೋರ್ಟ್ನ ದ್ವಿಸದಸ್ಯ ಪೀಠವು ಕಳೆದ ವರ್ಷ ಅಕ್ಟೋಬರ್ 13 ರಂದು ಹಿಜಾಬ್ ವಿವಾದದಲ್ಲಿ ವಿರುದ್ಧ ತೀರ್ಪುಗಳನ್ನು ನೀಡಿತ್ತು ಮತ್ತು ಪ್ರಕರಣದ ತೀರ್ಪು ನೀಡಲು ಸೂಕ್ತ ಪೀಠವನ್ನು ರಚಿಸುವಂತೆ ಸಿಜೆಐ ಅವರನ್ನು ಒತ್ತಾಯಿಸಿತ್ತು. ಫೆಬ್ರವರಿ 6 ರಿಂದ ರಾಜ್ಯದಲ್ಲಿ ಕೆಲವು ತರಗತಿಗಳಿಗೆ ನಿಗದಿಯಾಗಿರುವ ಪ್ರಾಯೋಗಿಕ ಪರೀಕ್ಷೆಗಳನ್ನು […]
ಪಕ್ಷೇತರ ಅಭ್ಯರ್ಥಿಯಾಗಿ ಕಾರ್ಕಳದಿಂದ ಪ್ರಮೋದ್ ಮುತಾಲಿಕ್ ಸ್ಪರ್ಧೆ: ಅಧಿಕೃತ ಘೋಷಣೆ
ಶ್ರೀರಾಮ ಸೇನೆ ಸಂಘಟನೆಯ ಮುಖಂಡ, ಪ್ರಖರ ಹಿಂದುತ್ವವಾದಿ ಪ್ರಮೋದ್ ಮುತಾಲಿಕ್ ಕಾರ್ಕಳ ಕ್ಷೇತ್ರದಿಂದ ವಿಧಾನಸಭಾ ಚುನಾವಣೆ ಸ್ಪರ್ಧಿಸಲಿದ್ದು ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದಾರೆ. ಕಾರ್ಕಳದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ತಾವು ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ, ಯರು ಏನೇ ಒತ್ತಡ ಹಾಕಿದರೂ ಕಾರ್ಕಳದಲ್ಲೇ ಸ್ಪರ್ಧೆ ಮಾಡುವುದು ನಿಶ್ಚಿತ. ಸಾವಿರಾರು ಕಾರ್ಯಕರ್ತರ ನೀವಿನ ಧ್ವನಿಯಾಗಿ, ಅವರೆಲ್ಲರ ಒತ್ತಡದಿಂದ ತಾವು ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ. ತಾನು ಬಿಜೆಪಿ ಹಾಗೂ ಮೋದಿ ವಿರೋಧಿಯಲ್ಲ. ತಾನು ಕೆಲವು ವ್ಯಕ್ತಿಗಳ ವಿರುದ್ದ, […]
ಕನ್ನಡ ಚಿತ್ರಗಳ ಪೋಷಕ ನಟ ಲಕ್ಷ್ಮಣ್ ಹೃದಯಾಘಾತದಿಂದ ನಿಧನ
ಬೆಂಗಳೂರು: ಕನ್ನಡ ಚಲನಚಿತ್ರಗಳಲ್ಲಿ ಪೋಷಕ ಪಾತ್ರದಿಂದ ಗಮನ ಸೆಳೆದಿದ್ದ ನಟ ಲಕ್ಷ್ಮಣ್ ಅವರು ಇಂದು (ಜನವರಿ 23) ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ಭಾನುವಾರ (ಜನವರಿ 22ರಂದು) ರಾತ್ರಿ ಲಕ್ಷ್ಮಣ್ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಇಂದು ಮುಂಜಾನೆ 3.30 ಸುಮಾರಿಗೆ ಅವರನ್ನು ನಾಗರಬಾವಿಯಲ್ಲಿರುವ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೂ ದುರದೃಷ್ಟವಶಾತ್ ಅವರನ್ನು ಉಳಿಸಿಕೊಳ್ಳಲಾಗಲಿಲ್ಲ. ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಅವರ ಸ್ವಗೃಹದಲ್ಲಿಡಲಾಗಿದೆ. ಲಕ್ಷ್ಮಣ್ ವಿಷ್ಣುದಾದ ಜೊತೆ ಯಜಮಾನ, ಸೂರ್ಯವಂಶ ಸೇರಿದಂತೆ ಅಂಬರೀಷ್, ಶಂಕರ್ […]
ಕೆನರಾ ಬ್ಯಾಂಕ್ ನಿಂದ ಗ್ರಾಹಕರಿಗಾಗಿ ಹೊಸ ಠೇವಣಿ ಯೋಜನೆ ಪ್ರಾರಂಭ
ಬೆಂಗಳೂರು: ವಾಣಿಜ್ಯ ಬ್ಯಾಂಕ್ ಗಳಲ್ಲಿ ಹೆಸರುವಾಸಿಯಾಗಿರುವ ಕೆನರಾ ಬ್ಯಾಂಕ್ ಗ್ರಾಹಕರಿಗಾಗಿ ಹೊಸ ಠೇವಣಿಯೊಂದನ್ನು ಪರಿಚಯಿಸುತ್ತಿದೆ. 400 ದಿನಗಳ ಹೊಸ ಅವಧಿ ಠೇವಣಿ ಯೋಜನೆ ಇದಾಗಿದ್ದು, ಅವಧಿಗೆ ಮೊದಲು ಠೇವಣಿ ಹಿಂಪಡೆಯುವುದು ಅಥವಾ ಇಂತಿಷ್ಟೇ ಪಾಲನ್ನು ಹಿಂಪಡೆಯುವುದು ಸಾಧ್ಯವಿರುವ ಈ ಯೋಜನೆಯಲ್ಲಿ 25 ಸಾವಿರ ರೂ ನಿಂದ 2 ಕೋಟಿ ರೂ ಗಳವರೆಗೆ ತೊಡಗಿಸಬಹುದು. ಇದಕ್ಕೆ 7.15% ಬಡ್ಡಿ ದೊರಕಲಿದೆ. ಅವಧಿಗೆ ಮೊದಲು ಠೇವಣಿ ಹಿಂಪಡೆಯಲು ಅಥವಾ ಇಂತಿಷ್ಟೇ ಪಾಲನ್ನು ಹಿಂದಕ್ಕೆ ಪಡೆಯಲು ಅವಕಾಶವಿಲ್ಲದ ಯೋಜನೆಯಲ್ಲಿ 15 ಲಕ್ಷದಿಂದ […]