ಕೊಚ್ಚಿನ್ ಶಿಪ್ಯಾರ್ಡ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಉಡುಪಿ: ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್, ಮಲ್ಪೆ ಇದರಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಮ್ಯಾನೆಜರ್-1 ಹುದ್ದೆ, ಸೂಪರ್ವೈಸರ್ ಹಾಗೂ ಡ್ರಾಫ್ಟ್ ಮ್ಯಾನ್ಗಳ ತಲಾ 2 ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಫೆಬ್ರವರಿ 4 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ www.cochinshipyard.in career ಅಥವಾ ದೂರವಾಣಿ ಸಂಖ್ಯೆ: 9900959933 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿವಾಹ ಬಂಧನದಲ್ಲಿ ಕೆ.ಎಲ್ ರಾಹುಲ್-ಅಥಿಯಾ ಶೆಟ್ಟಿ

ಮುಂಬೈ: ಭಾರತೀಯ ಕ್ರಿಕೆಟ್ ತಂಡದ ಆಟಗಾರ ಕನ್ನಡಿಗ ಕೆ.ಎಲ್ ರಾಹುಲ್ ಮತ್ತು ಬಾಲಿವುಡ್ ನಟ ಸುನೀಲ್ ಶೆಟ್ಟಿಯವರ ಮಗಳು ಚಿತ್ರ ನಟಿ ಅಥಿಯಾ ಶೆಟ್ಟಿ ಜ.23 ರಂದು ಖಂಡಾಲಾ ನಿವಾಸದಲ್ಲಿ ಸರಳವಾಗಿ ವಿವಾಹವಾಗಿದ್ದಾರೆ. ಕೇವಲ ಕೆಲವೇ ಜನಗಳಿಗೆ ಸೀಮಿತವಾಗಿದ್ದ ಈ ಮದುವೆಯು ಸಾಂಗವಾಗಿ ನಡೆದಿದ್ದು, ಮಗನನ್ನು ಮನೆಗೆ ಬರಮಾಡಿಕೊಂಡಿದ್ದೇನೆ ಎಂದು ಸುನೀಲ್ ಶೆಟ್ಟಿ ಹೇಳಿದ್ದಾರೆ. ಮಂಗಳೂರು ಶೈಲಿಯ ವೇಸ್ಟಿ ಉಟ್ಟ ಸುನೀಲ್ ಶೆಟ್ಟಿ ಮಗಳ ಮದುವೆಯಲ್ಲಿ ಮಿಂಚಿದ್ದಾರೆ. #WATCH | Athiya Shetty and KL Rahul […]
ಕಿಡ್ ಝೀ ನಲ್ಲಿ ಪ್ರೀ-ಸ್ಕೂಲ್ ಟೀಚರ್ ಹುದ್ದೆ ಖಾಲಿ

ಮಣಿಪಾಲ: ಕಿಡ್ ಝೀ ನಲ್ಲಿ ಪ್ರೀ-ಸ್ಕೂಲ್ ಟೀಚರ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ: 9591982777/8660301259 ಸಂಖ್ಯೆ ಅನ್ನು ಸಂಪರ್ಕಿಸಿ
ಕೋಟ: ನಿಶಾಚರಿ ಕಳ್ಳರ ಬಂಧನ; 15 ಲಕ್ಷ ರೂ ಮೌಲ್ಯದ ಚಿನ್ನಾಭರಣ ಸಹಿತ ವಾಹನ ವಶ

ಕೋಟ: ರಾತ್ರಿ ಹೊತ್ತು ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿ ಕೋಟ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ 15 ಲಕ್ಷ ರೂ. ಮೌಲ್ಯದ ಬೆಲೆ ಬಾಳುವ ಚಿನ್ನಾಭರಣ ಹಾಗೂ 3 ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಕಾಪು ಎಲ್ಲೂರು ನಿವಾಸಿ ರಾಜೇಶ್ ದೇವಾಡಿಗ (38) ಮತ್ತು ಕಾರ್ಕಳ ಹೊಸ್ಮಾರು ಈದು ನಿವಾಸಿ ಮೊಹಮ್ಮದ್ ರಿಯಾಜ್ ಹೊಸ್ಮಾರ್ ಯಾನೆ ರಿಯಾಜ್ (39) ಎಂದು ಗುರುತಿಸಲಾಗಿದೆ. ಬ್ರಹ್ಮಾವರ ವೃತ್ತದ ಕೋಟ ಠಾಣಾ ವ್ಯಾಪ್ತಿಯ ಬ್ರಹ್ಮಾವರ ತಾಲೂಕು ಪಾಂಡೇಶ್ವರ ಗ್ರಾಮದ ಮಠದ ತೋಟ […]
ಮರವಂತೆ: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿ ಹುದ್ದೆ ಖಾಲಿ

ಮರವಂತೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಬೈಂದೂರು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ವೈದ್ಯಾಧಿಕಾರಿ – 2 ಹುದ್ದೆಗಳಿಗೆ (ಪ.ಜಾತಿ-1, ಸಾ.ಅ-1 ಹುದ್ದೆ) ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಅಥವಾ ನೇರ ನೇಮಕಾತಿ ಆಗುವವರೆಗೆ / ಖಾಯಂ ವೈದ್ಯರು ವರ್ಗಾವಣೆಯಿಂದ ಹುದ್ದೆ ಭರ್ತಿಯಾಗುವವರೆಗೆ ನೇಮಕಾತಿ ಮಾಡಿಕೊಳ್ಳಲು ಎಂ.ಬಿ.ಬಿ.ಎಸ್ ವಿದ್ಯಾರ್ಹತೆ ಹೊಂದಿದ ಅರ್ಹ ವೈದ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 27 […]