ಅತ್ತೂರು ಬಸಿಲಿಕಾ ಚರ್ಚ್ ನಲ್ಲಿ ವಾರ್ಷಿಕ ಮಹೋತ್ಸವ

ಕಾರ್ಕಳ: ಇಲ್ಲಿನ ಅತ್ತೂರು ಬಸಿಲಿಕಾ ಚರ್ಚ್ ನಲ್ಲಿ ವಾರ್ಷಿಕ ಮಹೋತ್ಸವವು ಜ. ೨೨ ರಂದು ಆರಂಭಗೊಂಡಿತು. ಬಲಿಪೂಜೆ ನೆರವೇರಿಸಿ ಮಾತನಾಡಿದ ಉಡುಪಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ರೆ.ಡಾ. ಜೆರಾಲ್ಡ್ ಲೋಬೋ ಮಾತನಾಡಿ ದೇವರ ವಾಕ್ಯವನ್ನು ಆಲಿಸಿ ಅದನ್ನು ಧ್ಯಾನಿಸಿ ಜೀವನದಲ್ಲಿ ಪಾಲಿಸಿದಾಗ ಸದ್ಗುಣಗಳ ಫಲ ದೊರಕುತ್ತದೆ ಎಂದರು. ಶಿವಮೊಗ್ಗ ಧರ್ಮ ಪ್ರಾಂತ್ಯದ ಧರ್ಮಗುರು ವಂ. ಸ್ವಾಮಿ ಪಿಯುಶ್ ಡಿ’ಸೋಜಾ ಮಕ್ಕಳಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಅತ್ತೂರು ಬಸಿಲಿಕಾದ ಪ್ರಧಾನ ಧರ್ಮಗುರು ವಂ. ಅಲ್ಬನ್ ಡಿ’ಸೋಜಾ ಸಂತ ಲಾರೆನ್ಸರ […]
ಜ. 29 ರಂದು ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಯೋಗ ಮೇಳ

ಉಡುಪಿ: ಜಿಲ್ಲಾ ಕೌಶಲ್ಯ ಮಿಷನ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಾಪು ಇವರ ಸಂಯುಕ್ತ ಆಶ್ರಯದಲ್ಲಿ ಉದ್ಯೋಗ ಮೇಳ ಕಾರ್ಯಕ್ರಮವು ಜನವರಿ 29 ರಂದು ಬೆಳಗ್ಗೆ 9 ಗಂಟೆಗೆ ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ. ಉದ್ಯೋಗ ಮೇಳದಲ್ಲಿ ವಿವಿಧ ಕಂಪೆನಿ ಹಾಗೂ ಸಂಸ್ಥೆಗಳು ಭಾಗವಹಿಸಿ, ತಮ್ಮ ಸಂಸ್ಥೆಗಳಲ್ಲಿ ಖಾಲಿ ಇರುವ ಉದ್ಯೋಗಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದು, ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಪದವಿ, ಡಿಪ್ಲೋಮಾ, ಐ.ಟಿ.ಐ, ಸ್ನಾತಕೋತ್ತರ ಹಾಗೂ ವಿವಿಧ […]