ಹಿರಿಯ ಉದ್ಯಮಿ, ಸಮಾಜ ಸೇವಕ ಕೆ. ಸೇಸಪ್ಪ ಕೋಟ್ಯಾನ್ ವಿಧಿವಶ
ಬಂಟ್ವಾಳ: ಹಿರಿಯ ಉದ್ಯಮಿ, ಸಮಾಜ ಸೇವಕ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ 2022-23 ರ ಸಾಲಿನ ದ.ಕ.ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಪಚ್ಚಿನಡ್ಕ ಕೆ.ಸೇಸಪ್ಪ ಕೋಟ್ಯಾನ್ (75) ಜನವರಿ 26ರಂದು ಸಂಜೆ ಹೃದಯಾಘಾತದಿಂದ ನಿಧನ ಹೊಂದಿದರು. ಅವರು ಪತ್ನಿ ಚಂದ್ರಾವತಿ, ಪುತ್ರ ಭುವನೇಶ್ ಪಚ್ಚಿನಡ್ಕ, ಹಾಗು ನಾಲ್ಕು ಹೆಣ್ಣುಮಕ್ಕಳ ಸಹಿತ ಬಂಧುಮಿತ್ರರನ್ನು ಅಗಲಿದ್ದಾರೆ. . ಶುಭ ಬೀಡಿಗಳು ಹೆಸರಿನಲ್ಲಿ ಬೀಡಿ ಉದ್ಯಮವನ್ನು ಆರಂಭಿಸಿ ಸಹಸ್ರಾರು ಮಂದಿಗೆ ಉದ್ಯೋಗದಾತರಾದ ಅವರು, ರಿಕ್ಷಾ, ಸ್ಕೂಟರ್ ಮೂಲಕ ಮಾರುಕಟ್ಟೆ […]
ಬುಡಕಟ್ಟು ಜನಾಂಗದವರಿಗಾಗಿ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ
ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಐ.ಟಿ.ಡಿ.ಪಿ ಇಲಾಖೆ, ಆರೋಗ್ಯ ಇಲಾಖೆ, ಬುಡಕಟ್ಟು ಸಮುದಾಯದ ಸಂಘಟನೆಗಳು ಉಡುಪಿ ಹಾಗೂ ಯೆನಪೋಯ ಮಂಗಳೂರು ಇವರ ಸಹಯೋಗದೊಂದಿಗೆ ಜಿಲ್ಲೆಯ ಬುಡಕಟ್ಟು ಜನಾಂಗದವರ ಆರೋಗ್ಯ ತಪಾಸಣೆ ನಡೆಸುವ ಸಲುವಾಗಿ ಮಾರ್ಚ್ 4 ವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ಬೆಳಗ್ಗೆ 9 ರಿಂದ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಜನವರಿ 26 ರಂದು ಹೆಗ್ಗುಂಜೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಮಂದಾರ್ತಿ, ಆವರ್ಸೆ, ಬಿಲ್ಲಾಡಿ, ಹೆಗ್ಗುಂಜೆ, ನಡೂರು ಮತ್ತು ಸೈಬ್ರಕಟ್ಟೆ ವ್ಯಾಪ್ತಿಯವರಿಗೆ, […]
ಮಿತ್ರ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಶ್ರೀಧರ ಹೊಳ್ಳ ನಿಧನ
ಉಡುಪಿ: ನಗರದ ಪ್ರಸಿದ್ದ ವೈದ್ಯ, ಮಿತ್ರ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಶ್ರೀಧರ್ ಹೊಳ್ಳ(67) ಅಲ್ಪ ಕಾಲದ ಅಸೌಖ್ಯದಿಂದ ಇಂದು ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಡಿ.17 ರಂದು ಮನೆಯಲ್ಲಿ ಕುಸಿದು ಬಿದ್ದಿದ್ದ ಇವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೆದುಳಿನ ಕಾಯಿಲೆಗೆ ತುತ್ತಾಗಿದ್ದ ಇವರು ಕಳೆದ ನಲ್ವತ್ತು ದಿನಗಳಿಂದ ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಕೊನೆಯುಸಿರೆಳಿದ್ದಾರೆ. ಮೃತರು ಪತ್ನಿ, ಮೂವರು ಪುತ್ರಿ ಮತ್ತು ಇಬ್ಬರು ಪುತ್ರ ಹಾಗೂ […]
ಎಂ.ಆರ್.ಎಫ್ ಘಟಕಗಳಿಂದ ಕಸ ವಿಲೇವಾರಿ ಸಮಸ್ಯೆಗೆ ಪರಿಹಾರ: ಎಸ್ ಅಂಗಾರ.
ಉಡುಪಿ: ಗ್ರಾಮ ಪಂಚಾಯತ್ಗಳು ಎದುರಿಸುತ್ತಿರುವ ತ್ಯಾಜ್ಯ ವಿಲೇವಾರಿ ಸಮಸ್ಯೆಗಳಿಗೆ ಎಂ.ಆರ್.ಎಫ್ ಘಟಕಗಳು ಸೂಕ್ತ ಪರಿಹಾರ ನೀಡಬಲ್ಲದು ಎಂದು ರಾಜ್ಯದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಹೇಳಿದರು. ಅವರು ಬುಧವಾರ ಬಡಗಬೆಟ್ಟು ಗ್ರಾಮ ಪಂಚಾಯತ್ನ ನೇತಾಜಿ ನಗರ ಮಿನಿ ಎಂ.ಆರ್.ಎಫ್ ಕೇಂದ್ರದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ತಾಲೂಕು ಪಂಚಾಯತ್ ಉಡುಪಿ ಹಾಗೂ 80 ಬಡಗಬೆಟ್ಟು ಗ್ರಾಮ ಪಂಚಾಯತ್ ಇವರ […]
ಹಲವು ಪ್ರಥಮಗಳಿಗೆ ಸಾಕ್ಷಿಯಾದ ಕರ್ತವ್ಯಪಥದ ಗಣರಾಜ್ಯೋತ್ಸವದ ಪಥಸಂಚಲನ
ನವದೆಹಲಿ: ಗುರುವಾರದಂದು ದೇಶವು 74 ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದ್ದು ಈ ಸಂದರ್ಭದಲ್ಲಿ ಹಲವಾರು ‘ಪ್ರಥಮ’ಗಳಿಗೆ ಸಾಕ್ಷಿಯಾಗಿದೆ. ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ನಾಗರಿಕರು ಇದೇ ‘ಮೊದಲ’ ಬಾರಿಗೆ ಹಲವು ವಿಷಯಗಳನ್ನು ನೋಡಿದ್ದಾರೆ. ಇದೇ ಮೊದಲ ಬಾರಿಗೆ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಿದ್ದಾರೆ. ಭಾರತದ ಎರಡನೇ ಮಹಿಳಾ ರಾಷ್ಟ್ರಪತಿ ದ್ರೌಪದಿ ಮುರ್ಮು ರಾಷ್ಟ್ರಧ್ವಜವನ್ನು ಬಿಚ್ಚಿ, ಮೆರವಣಿಗೆ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದ್ದಾರೆ. ಕಳೆದ ವರ್ಷ ಕರ್ತವ್ಯ ಪಥ್ ಎಂದು ಮರುನಾಮಕರಣಗೊಂಡ ರಾಜಪಥದಲ್ಲಿ ಮೊದಲ ಬಾರಿಗೆ ಭಾರತ […]