ರಾಜ್ಯಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನ: ಶಾಸಕರಿಂದ ಪೂರ್ವತಯಾರಿ ನಿರೀಕ್ಷಣೆ
ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಾಜ್ಯಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನವು ಫೆಬ್ರವರಿ 11 ಮತ್ತು 12 ರಂದು ಉಡುಪಿಯ ಎಂ.ಜಿ.ಎಂ ಕಾಲೇಜು ಮೈದಾನದಲ್ಲಿ ನಡೆಯಲಿದ್ದು, ಈ ಹಿನ್ನೆಲೆ ಶಾಸಕ ಕೆ. ರಘುಪತಿ ಭಟ್ ಮಂಗಳವಾರ ಕಾಲೇಜು ಮೈದಾನಕ್ಕೆ ಭೇಟಿ ನೀಡಿ ಪೂರ್ವ ತಯಾರಿಯ ಕುರಿತು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನ ಕಾರ್ಯಾಧ್ಯಕ್ಷ ಡಾ. ಜಿ.ಎಲ್. ಹೆಗಡೆ, ಪ್ರಧಾನ ಸಂಚಾಲಕ ಪಿ.ಕಿಶನ್ ಹೆಗ್ಡೆ, ಸಂಚಾಲಕ ಮುರಳಿ ಕಡೆಕಾರ್, ಸದಸ್ಯರಾದ ನಾರಾಯಣ್ […]
ಕಾರ್ಕಳ: ಸಂಜೀವಿನಿ ರಾಷ್ಟ್ರಮಟ್ಟದ ಕರಕುಶಲ ವಸ್ತು ಪ್ರದರ್ಶನ-ಮಾರಾಟ ಮಳಿಗೆ ಉದ್ಘಾಟನೆ
ಕಾರ್ಕಳ :ಆಚಾರ-ವಿಚಾರ ಪದ್ಧತಿಗಳು ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ಭಿನ್ನವಾಗಿರುತ್ತವೆ. ಒಂದು ವೇದಿಕೆಯಡಿ ಎಲ್ಲಾ ಪ್ರದೇಶಗಳ ವಸ್ತುಗಳು ಮತ್ತು ಉತ್ಪನ್ನಗಳನ್ನು ನೋಡುವ ಅವಕಾಶ ದೊರಕಿದೆ. ವಿವಿಧ ಜಿಲ್ಲೆಗಳ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟದಿಂದ ಸಬಲೀಕರಣದ ಸಫಲತೆ ಫಲ ಕಂಡು ಬರುತ್ತಿದೆ. ಇಲ್ಲಿ ಒಂದು ರೀತಿಯಲ್ಲಿ ಭಾರತ ದರ್ಶನ ಆಗಿದೆ ಎಂದು ಇಂಧನ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು. ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಭಾರತ ಸರಕಾರ-ಗಾಂಧೀ ಸಿಲ್ಕ್ ಬಜಾರ್, ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ […]
ನಾಳೆ(ಜ. 27) ಜಡ್ಕಲ್ ವ್ಯವಸಾಯ ಸೇವಾ ಸಹಕಾರ ಸಂಘದ ನೂತನ ಕಟ್ಟಡ ‘ಸಹಕಾರ ಸಿರಿ’ ಉದ್ಘಾಟನೆ
ಕುಂದಾಪುರ: ಜಡ್ಕಲ್ ವ್ಯವಸಾಯ ಸೇವಾ ಸಹಕಾರ ಸಂಘದ ನೂತನ ಕಟ್ಟಡ ಸಹಕಾರ ಸಿರಿ ಇದರ ಉದ್ಘಾಟನಾ ಸಮಾರಂಭವು ಜ. 27 ಶುಕ್ರವಾರದಂದು ಬೆಳಿಗ್ಗೆ ಗಂಟೆ 10:30ಗೆ ಸಂಘದ ವಠಾರ ಬೀಸಿನಪಾರೆಯಲ್ಲಿ ನಡೆಯಲಿದೆ. ನೂತನ ಕಟ್ಟಡ ಉದ್ಘಾಟನೆಯನ್ನು ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಡಾ|ಎಂ.ಎನ್. ರಾಜೇಂದ್ರ ಕುಮಾರ್ ಮಾಡಲಿದ್ದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಡ್ಕಲ್ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಶೆಟ್ಟಿ ವಹಿಸಲಿದ್ದಾರೆ. ಭದ್ರತಾ ಕೊಠಡಿಯನ್ನು ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ಉದ್ಘಾಟಿಸಲಿದ್ದಾರೆ. ಪ್ರಧಾನ […]