ಅಂಗನವಾಡಿ ಕಾರ್ಯಕರ್ತೆಯರ ನೋವಿಗೆ ಸ್ಪಂದಿಸದ ಬೊಮ್ಮಾಯಿಯವರ ಕುರುಡು ಸರ್ಕಾರ: ವೆರೋನಿಕಾ ಕರ್ನೆಲಿಯೋ
ಉಡುಪಿ: ಅಂಗವಾಡಿ ಕಾರ್ಯಕರ್ತೆಯರ ಪ್ರತಿಭಟನೆಗೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡದೆ ಕಣ್ಣಿದ್ದು ಕುರುಡಾಗಿರುವ ಬಸವರಾಜ ಬೊಮ್ಮಾಯಿ ಅವರು ಮಹಿಳೆಯರಿಗೆ ನೀಡುವ ಗೌರವ ಏನು ಎನ್ನುವುದಕ್ಕೆ ಪ್ರತ್ಯಕ್ಷ ಸಾಕ್ಷಿ ಎಂಬಂತಿದೆ ಎಂದು ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೆಲಿಯೊ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿ ತಮ್ಮ ನ್ಯಾಯಯುತ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಕುಳಿತು ಚಳಿಯನ್ನೂ ಲೆಕ್ಕಿಸದೆ ಅಹೋರಾತ್ರಿ ಧರಣಿ ನಡೆಸುತ್ತಿದ್ದು ಅವರ ಬೇಡಿಕೆಗಳನ್ನು ಪರಿಗಣಿಸುವ ಕನಿಷ್ಠ ಪ್ರಯತ್ನ ಕೂಡ […]
ಪುರಾತನ ಸಂಸ್ಕಾರ ಮತ್ತು ಧರ್ಮದಿಂದ ದೇಶದ ಉಳಿವು: ಗುರ್ಮೆ ಸುರೇಶ್ ಶೆಟ್ಟಿ
ಬ್ರಹ್ಮಾವರ: ಪುರಾತನ ಸಂಸ್ಕಾರ ಮತ್ತು ಧರ್ಮದಿಂದ ದೇಶ ಉಳಿದಿದೆ ಎಂದು ಗುರ್ಮೆ ಫೌಂಡೇಷನ್ ನ ಅಧ್ಯಕ್ಷ ಸುರೇಶ್ ಶೆಟ್ಟಿ ಗುರ್ಮೆ ಅಭಿಪ್ರಾಯಪಟ್ಟರು. ಚಾಂತಾರಿನ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಭಾನುವಾರ ನಡೆದ ಚಾಂತಾರಿನ ಚಾನ್ಸ್ ಸ್ಟಾರ್ ಯೂತ್ ಕ್ಲಬ್ ರಜತ ಸಂಭ್ರಮ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆಧುನಿಕ ಮತ್ತು ಯಾಂತ್ರಿಕ ಜೀವನ ಶೈಲಿಯ ನಡುವೆಯೂ ಸಾಮರಸ್ಯದ ಬಾಳು ನಡೆಯುತ್ತಿದ್ದು ಸಮಾನ ಮನಸ್ಕರ ತಂಡದಿಂದ ಗ್ರಾಮಗಳ ಅಭಿವೃದ್ಧಿ ಸಾಧ್ಯ ಎಂದರು. ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿ, ಸಮಾಜಮುಖಿ […]
ಮುಂಡ್ಕೂರು: ಕಾರಿನೊಳಗೆ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿ ವ್ಯಕ್ತಿ ಆತ್ಮಹತ್ಯೆ
ಮುಂಡ್ಕೂರು: ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮುಂಡ್ಕೂರು ಗ್ರಾಮದ ಸಚ್ಚರಿಪೇಟೆ ಎಂಬಲ್ಲಿ ಗುರುವಾರ 54 ವರ್ಷದ ವ್ಯಕ್ತಿಯೊಬ್ಬರು ಸೀಮೆಎಣ್ಣೆ ಸುರಿದು ಕಾರಿಗೆ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಮೃತರನ್ನು ಕೃಷ್ಣ ಮೂಲ್ಯ ಎಂದು ಗುರುತಿಸಲಾಗಿದ್ದು, ಆಸ್ತಿ ವಿವಾದವೇ ಕೃತ್ಯಕ್ಕೆ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ. ಬುಧವಾರ ಕೃಷ್ಣ ಅವರ ಸೊಸೆಯ ಮೆಹಂದಿ ಕಾರ್ಯಕ್ರಮ ನಡೆದಿತ್ತು. ಗುರುವಾರ ಮುಂಜಾನೆ 3 ಗಂಟೆ ಸುಮಾರಿಗೆ ಮೃತರು ಕಾರ್ಯಕ್ರಮ ನಡೆಯುತ್ತಿದ್ದ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ […]
ದೇಶದ ಐಕ್ಯತೆಯನ್ನು ಕಾಪಾಡಿ ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸೋಣ: ಎಸ್.ಅಂಗಾರ
ಉಡುಪಿ: 1950 ಜನವರಿ 26 ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವ ದಿನ. ಸ್ವತಂತ್ರ ಭಾರತವು ತನ್ನ ಸಂವಿಧಾನವನ್ನು ಅನುಷ್ಠಾನಕ್ಕೆ ತಂದು ದೇಶದ ಆಡಳಿತಕ್ಕೆ ಕಾನೂನು ಚೌಕಟ್ಟನ್ನು ರೂಪಿಸಿದ ಈ ದಿನವು ನಮ್ಮೆಲ್ಲರಿಗೂ ಐತಿಹಾಸಿಕವಾಗಿದೆ. ವಿಶ್ವದ ವಿಶಾಲ ಹಾಗೂ ಅತ್ಯಂತ ಬಲಿಷ್ಠ ಪ್ರಜಾಪ್ರಭುತ್ವವನ್ನು ಮುನ್ನೆಡಸಿಕೊಂಡು ಬಂದ ನಮ್ಮ ದೇಶದ ಎಲ್ಲಾ ಧೀಮಂತ ನಾಯಕರನ್ನು ಈ ಸಂದರ್ಭದಲ್ಲಿ ಸ್ಮರಿಸುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಹೇಳಿದರು. ಅವರು ಗಣರಾಜ್ಯೋತ್ಸವದಂದು ನಗರದ ಅಜ್ಜರಕಾಡು ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಸಂಭ್ರಮಾಚರಣೆಯಲ್ಲಿ ಭಾಗಿಯಾಗಿ […]