ಕನ್ನಡ ಚಿತ್ರರಂಗದ ಹಾಸ್ಯ ನಟ ಮನದೀಪ್ ರಾಯ್ (74) ಭಾನುವಾರ ಬೆಳಿಗ್ಗೆ ನಿಧನರಾಗಿದ್ದಾರೆ.
ಇತ್ತೀಚೆಗೆ ಹೃದಯಾಘಾತವಾಗಿ ಆಸ್ಪತ್ರೆ ಸೇರಿದ್ದ ಮನದೀಪ್ ರಾಯ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಚೇತರಿಕೆ ಬಳಿಕ ಮನೆಗೆ ವಾಪಸ್ ಆಗಿದ್ದ ಅವರು ಭಾನುವಾರ ಬೆಳಗ್ಗೆ ನಿಧನರಾಗಿದ್ದಾರೆ.ರಂಗಭೂಮಿ ಕಲಾವಿದರೂ ಆಗಿದ್ದ ಮನದೀಪ್ ರಾಯ್ ಪೋಷಕ ಪಾತ್ರದಲ್ಲಿ ಖ್ಯಾತಿ ಪಡೆದಿದ್ದರು.
ರಾಷ್ಟ್ರಪತಿ ಭವನದ ಮೊಘಲ್ ಗಾರ್ಡನ್ಸ್ ಇನ್ನು ಮುಂದು ‘ಅಮೃತ ಉದ್ಯಾನ’: ಮರುನಾಮಕರಣಕ್ಕೆ ಮುರ್ಮು ಅಸ್ತು
ಹೊಸದಿಲ್ಲಿ: “ಆಜಾದಿ ಕಾ ಅಮೃತ್ ಮಹೋತ್ಸವ್” ಆಚರಣೆಯ ಅಂಗವಾಗಿ ರಾಷ್ಟ್ರಪತಿಗಳ ಅಧಿಕೃತ ನಿವಾಸ, ರಾಷ್ಟ್ರಪತಿ ಭವನದಲ್ಲಿರುವ ಉದ್ಯಾನಗಳಿಗೆ “ಅಮೃತ ಉದ್ಯಾನ” ಎಂದು ಮರುನಾಮಕರಣ ಮಾಡಲಾಗಿದೆ. ಇದುವರೆಗೂ ಇಲ್ಲಿ ತೂಗುಹಾಕಲಾಗಿದ್ದ “ಮೊಘಲ್ ಗಾರ್ಡನ್ಸ್” ಎಂಬ ಹಳೆಯ ರಸ್ತೆ ಫಲಕವನ್ನು ತೆಗೆದು ಹಾಕಲಾಗಿದೆ. ಸ್ವಾತಂತ್ರ್ಯದ 75ನೇ ವರ್ಷವನ್ನು ಆಜಾದಿ ಕಾ ಅಮೃತ್ ಮಹೋತ್ಸವ ಎಂದು ಆಚರಿಸುವ ಸಂದರ್ಭದಲ್ಲಿ, ಭಾರತದ ರಾಷ್ಟ್ರಪತಿಗಳು ರಾಷ್ಟ್ರಪತಿ ಭವನದ ಉದ್ಯಾನಗಳಿಗೆ ಅಮೃತ್ ಉದ್ಯಾನ್ ಎಂದು ಸಾಮಾನ್ಯ ಹೆಸರನ್ನು ನೀಡಿದ್ದಾರೆ ಎಂದು ಅಧ್ಯಕ್ಷರ ಉಪ ಪತ್ರಿಕಾ ಕಾರ್ಯದರ್ಶಿ […]
ಕಾಲೇಜು ಕ್ಯಾಂಪಸ್ ನಲ್ಲಿ ಓಡಾಡುತ್ತಿದ್ದ ನಾಯಿಯನ್ನು ಹೊಡೆದು ಸಾಯಿಸಿದ ವಾರ್ಡನ್ ಗಳ ಮೇಲೆ ಕ್ರಮ
ಕಾಪು: ಕಾಲೇಜು ಕ್ಯಾಂಪಸ್ ನಲ್ಲಿ ಓಡಾಡುತ್ತಿದ್ದ ನಾಯಿಯನ್ನು ಗೋಣಿಚೀಲದಲ್ಲಿ ಹಾಕಿ ಬಡಿದು ಕೊಲೆ ಮಾಡಿರುವ ಅಮಾನವೀಯ ಘಟನೆ ತಾಲೂಕಿನ ಶಿರ್ವ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬಂಟಕಲ್ ಮಧ್ವ ವಾದಿರಾಜ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ ನಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ. ಕ್ಯಾಂಪಸ್ ನಲ್ಲಿ ನಾಯಿ ಓಡಾಡುತ್ತಿದ್ದು ಇದನ್ನು ಕಂಡ ವಿದ್ಯಾರ್ಥಿನಿಯೊಬ್ಬಳು ಹೆದರಿಕೊಂಡು ಈ ಬಗ್ಗೆ ದೂರು ನೀಡಿರುವುದಕ್ಕೆ ಸಂಬಂಧಿಸಿದಂತೆ ಕಾಲೇಜಿನ ವಾರ್ಡನ್ ಗಳು ಈ ನಾಯಿಯನ್ನು ಕೊಂದು ಹಾಕಿದ್ದಾರೆ ಎಂದು ತಿಳಿದು ಬಂದಿದೆ. ಈಗ […]
ಜ.30ರಿಂದ ಫೆ.1ರವರೆಗೆ ಮಾಹೆಯಲ್ಲಿ ಅಮೃತ ಯುವ ಕಲೋತ್ಸವ-ಸಾಂಸ್ಕೃತಿಕ ಉತ್ಸವ
ಮಣಿಪಾಲ: ಕೇಂದ್ರ ಸಂಗೀತ ನಾಟಕ ಅಕಾಡೆಮಿಯು ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ನ ಸಹಯೋಗದೊಂದಿಗೆ ಭಾರತದ 75ನೇ ಸ್ವಾತಂತ್ರೋತ್ಸವದ ನೆನಪಿಗಾಗಿ ಮೂರು ದಿನಗಳ ಯುವ ಸಾಂಸ್ಕೃತಿಕ ಉತ್ಸವ – ‘ಅಮೃತ ಯುವ ಕಲೋತ್ಸವ’ವನ್ನು ಜನವರಿ 30, 31 ಮತ್ತು ಫೆಬ್ರವರಿ 1ರಂದು ಮಣಿಪಾಲದಲ್ಲಿ ವಿಭಿನ್ನ ರೀತಿಯಲ್ಲಿ ಆಯೋಜಿಸುತ್ತಿದೆ. ಭಾರತದಾದ್ಯಂತ 75ನೇ ಸ್ವಾತಂತ್ರೋತ್ಸವದ ವರ್ಷಾಚರಣೆಯ ಸರಣಿಯಲ್ಲಿ ಮೊದಲ ಬಾರಿಗೆ ಕರ್ನಾಟಕದಲ್ಲಿ ಇದು ಆಯೋಜಿಸಲ್ಪಡುತ್ತಿದೆ. ಸಂಗೀತ ನಾಟಕ ಅಕಾಡೆಮಿ ಅಧ್ಯಕ್ಷೆ ಡಾ ಸಂಧ್ಯಾ ಪುರೇಚ […]