ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಯುವ ಸಹಕಾರಿ ಧುರೀಣ ಯಶ್ ಪಾಲ್ ಎ ಸುವರ್ಣ ಅವರಿಗೆ ಸಾರ್ವಜನಿಕ ಅಭಿನಂದನೆ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಮಂಗಳೂರು ವತಿಯಿಂದ ಅವಿಭಜಿತ ದಕ ಜಿಲ್ಲೆಯ ವಿವಿಧ ಸಹಕಾರಿ ಸಂಘಗಳ ಹಾಗೂ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಯುವ ಸಹಕಾರಿ ಧುರೀಣ ಸಾಮಾಜಿಕ, ಧಾರ್ಮಿಕ, ರಾಜಕೀಯ ಮುಂದಾಳು ಯಶಪಾಲ್ ಎ ಸುವರ್ಣ ಅವರಿಗೆ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಶಾಲಿನಿ ಡಾ|ಜಿ.ಶಂಕರ್ ತೆರೆದ ಸಭಾಂಗಣದಲ್ಲಿ ಇಂದು ಸಾರ್ವಜನಿಕ ಅಭಿನಂದನೆಯನ್ನು ಮಾಡಲಾಯಿತು. ಅಭಿನಂದನೆ ನೆರವೇರಿಸಿ ಮಾತನಾಡಿದ ನಾಡೋಜ ಡಾ. ಜಿ ಶಂಕರ್ ಅವರು, […]

ಸಹಕಾರ ರತ್ನ ಯಶ್ ಪಾಲ್ ಸುವರ್ಣ ಅಭಿನಂದನಾ ಕಾರ್ಯಕ್ರಮ

ಉಚ್ಚಿಲ:  ಸಹಕಾರ ರತ್ನ ಯಶ್ ಪಾಲ್ ಎ. ಸುವರ್ಣ ಅಭಿನಂದನಾ ಸಮಿತಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ನಿ. ಮಂಗಳೂರು ವತಿಯಿಂದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಸಹಕಾರಿ ಸಂಘಗಳ ಹಾಗೂ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಬುಧವಾರ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಶ್ರೀಮತಿ ಶಾಲಿನಿ ಡಾ. ಜಿ. ಶಂಕರ್ ಸಭಾಂಗಣದಲ್ಲಿ ಆಯೋಜಿಸಲಾದ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಯಶ್ ಪಾಲ್ ಎ. ಸುವರ್ಣ ಅವರ “ಯಶೋಭಿನಂದನ” ಕಾರ್ಯಕ್ರಮವು […]

ಸರ್ವ ಸ್ಪರ್ಶಿ ಸರ್ವ ವ್ಯಾಪಿ ಹಸಿರು ಬಜೆಟ್: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ರವರು ಈ ಬಾರಿ ಮಂಡಿಸಿರುವ ಬಜೆಟ್ ಯುವಸ್ನೇಹಿ, ರೈತ ಸ್ನೇಹಿಯಾಗಿ ಸಪ್ತ ಸೂತ್ರಗಳೊಂದಿಗೆ ಸರ್ವ ಸ್ಪರ್ಶಿ ಸರ್ವ ವ್ಯಾಪಿ ಹಸಿರು ಬಜೆಟ್ ಆಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಕರ್ನಾಟಕದಲ್ಲಿ ಭಧ್ರಾ ಮೇಲ್ದಂಡೆ ಯೋಜನೆಗೆ ರೂ.5,300 ಕೋಟಿ ವಿನಿಯೋಗಿಸುವ ಉತ್ತಮ ದೂರದರ್ಶಿತ್ವದ ಯೋಜನೆ ಹಾಕಲಾಗಿದೆ. ಜಗತ್ತಿನೆಲ್ಲೆಡೆ ಆರ್ಥಿಕ ಹಿಂಜರಿತ ಇದ್ದರೂ ದೇಶದ ಆರ್ಥಿಕತೆಯನ್ನು ಮೇಲೆತ್ತುವ ಸಲುವಾಗಿ ದಿಟ್ಟ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೋವಿಡ್ ಸಂದರ್ಭದಲ್ಲಿ […]

ಅವಿಭಜಿತ ದ.ಕ ಜಿಲ್ಲೆಯಲ್ಲಿ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಂಗಳೂರು/ಉಡುಪಿ: ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಹತ್ತನೇ ತರಗತಿ ಉತ್ತೀರ್ಣರಾಗಿರುವವರು ಅರ್ಜಿ ಸಲ್ಲಿಸಬಹುದು. ಮಂಗಳೂರು ವಿಭಾಗದಲ್ಲಿ 95 ಸೇರಿದಂತೆ ಅವಿಭಜಿತ ದ.ಕ ಜಿಲ್ಲೆಯಲ್ಲಿ ಒಟ್ಟು 273 ಹುದ್ದೆಗಳಿವೆ. ಅರ್ಜಿಗಳನ್ನು https://indiapostgdsonline.gov.in ಗೆ ಫೆಬ್ರವರಿ 16 ರೊಳಗೆ ಸಲ್ಲಿಸಬೇಕು. ಅಭ್ಯರ್ಥಿಯ ವಯಸ್ಸು 18 ರಿಂದ 40 ವಯೋಮಿತಿಯೊಳಗಿರಬೇಕು. ಹೆಚ್ಚಿನ ಮಾಹಿತಿಗಾಗಿ https://indiapost.gov.in ಗೆ ಲಾಗಿನ್ ಆಗಬಹುದು.

ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಜಿಲ್ಲೆಗೆ 1 ಕೋಟಿ 15 ಲಕ್ಷಕ್ಕೂ ಅಧಿಕ ಮೊತ್ತ ಮಂಜೂರು

ಉಡುಪಿ: ಜನವರಿ 2020 ರಿಂದ ಡಿಸೆಂಬರ್‌ 2022 ರ ತನಕ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ(PMNRF) ಯಿಂದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಡುಪಿ ಜಿಲ್ಲೆಗೆ ಮಾನ್ಯ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರ ಶಿಫಾರಸ್ಸಿನ ಮೇರೆಗೆ ಸುಮಾರು ರೂಪಾಯಿ 1,15,60,000(ಒಂದು ಕೋಟಿ ಹದಿನೈದು ಲಕ್ಷದ ಅರ್ವತ್ತು ಸಾವಿರ ರೂಪಾಯಿ)ಮೊತ್ತವನ್ನು ರೋಗಿಗಳ ಚಿಕಿತ್ಸೆಗೆ ಮಂಜೂರು ಮಾಡಲಾಗಿದೆ ಎಂದು ಸಂಸದರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.