ತೆರಿಗೆ ರಿಯಾಯತಿ ಮಿತಿ 5 ಲಕ್ಷದಿಂದ 7 ಲಕ್ಷಕ್ಕೆ ಹೆಚ್ಚಳ: ಏಳು ಆದ್ಯತೆಗಳನ್ನು ಹೊಂದಿರುವ ಸಪ್ತರ್ಷಿ ಬಜೆಟ್

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಸಂಸತ್ತಿನಲ್ಲಿ ತಮ್ಮ ಐದನೇ ಬಜೆಟ್ ಭಾಷಣವನ್ನು ಮಂಡಿಸಿದರು. ಸಚಿವೆಯು ಇದನ್ನು ‘ಅಮೃತ್ ಕಾಲದ ಮೊದಲ ಬಜೆಟ್’ ಮತ್ತು ಭಾರತ @ 100 ರ ನೀಲನಕ್ಷೆ ಎಂದು ಕರೆಯುತ್ತಾ, ಬಜೆಟ್ ಏಳು ಆದ್ಯತೆಗಳನ್ನು ಹೊಂದಿರುತ್ತದೆ ಹಾಗಾಗಿ ಇದು ‘ಸಪ್ತರ್ಷಿ’ ಬಜೆಟ್ ಎಂದು ಅವರು ಹೇಳಿದರು. ಬಜೆಟ್ ಪ್ರಮುಖ ಅಂಶಗಳು ಹೊಸ ತೆರಿಗೆ ಪದ್ಧತಿಯಲ್ಲಿ ಆದಾಯ ತೆರಿಗೆ ರಿಯಾಯಿತಿ ಮಿತಿಯನ್ನು 5 ಲಕ್ಷದಿಂದ 7 ಲಕ್ಷಕ್ಕೆ ಸರ್ಕಾರ ಹೆಚ್ಚಿಸಿದೆ. ಹೊಸ ತೆರಿಗೆ […]

ದ.ಕ ಜಿಲ್ಲೆ ಹೊಸ ಎಸ್ಪಿಯಾಗಿ ಅಮಾತೆ ವಿಕ್ರಮ್ ನೇಮಕ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿ ಋಷಿಕೇಷ್ ಸೋನಾವಾಣೆ ಭಗವಾನ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಜಿಲ್ಲೆಗೆ ಐಪಿಎಸ್ ಅಧಿಕಾರಿ ಅಮಾತೆ ವಿಕ್ರಮ್ ಅವರನ್ನು ಎಸ್ಪಿ ನಿಯೋಜಿಸಿ ಸರಕಾರ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ನಾಲ್ವರು ಎಸ್ಪಿ ದರ್ಜೆಯ ಐಪಿಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಎಸ್ಪಿ ಋಷಿಕೇಷ್ ಸೋನವಾಣೆ ಭಗವಾನ್ ಅವರನ್ನು ಗುಪ್ತಚರ ವಿಭಾಗದ ಎಸ್ಪಿಯಾಗಿ ವರ್ಗಾಯಿಸಲಾಗಿದ್ದು, ಇಲ್ಲಿಗೆ ಗುಪ್ತಚರ ವಿಭಾಗದಲ್ಲಿದ್ದ ಅಮಾತೆ ವಿಕ್ರಮ್ ಅವರನ್ನು ನೇಮಕ ಮಾಡಲಾಗಿದೆ. ಅಮಾತೆ ವಿಕ್ರಮ್ […]

ಕ್ಯಾಂಪ್ಕೋ ಸಂಸ್ಥೆಯ 50ನೇ ವರ್ಷಾಚರಣೆ ಹಿನ್ನೆಲೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗಿ

ಪುತ್ತೂರು: ಕ್ಯಾಂಪ್ಕೋ ಸಂಸ್ಥೆಯ 50ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವರು ಪುತ್ತೂರಿಗೆ ಆಗಮಿಸುತ್ತಿದ್ದು, ಕ್ಯಾಂಪ್ಕೋ ನೇತೃತ್ವದಲ್ಲಿ ಬೃಹತ್ ಸಹಕಾರಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಫೆ.11 ರಂದು ಸಂಜೆ 3 ಗಂಟೆಗೆ ಸಮಾವೇಶ ನಡೆಯಲಿದೆ. ಅದೇ ದಿನ ಗೃಹ ಸಚಿವರು ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಗೂ ಭೇಟಿ ನೀಡಲಿದ್ದಾರೆ ಎಂದು ಶಾಸಕ ಸಂಜೀವ ಮಠಂದೂರು ತಿಳಿಸಿದರು. ಮಂಗಳವಾರ ಪುತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು “ಪುತ್ತೂರಿನ ತೆಂಕಿಲದಲ್ಲಿರುವ ವಿವೇಕಾನಂದ ವಿದ್ಯಾಸಂಸ್ಥೆಯ ಮೈದಾನದಲ್ಲಿ ಸಮಾವೇಶ ನಡೆಸಲಾಗುವುದು. ಇದರಲ್ಲಿ ಪುತ್ತೂರು, ಸುಳ್ಯ, ಕಡಬ, ಬಂಟ್ವಾಳ, […]

ಮಾಹೆಯಲ್ಲಿ ಅಮೃತ ಯುವ ಕಲೋತ್ಸವ ಉದ್ಘಾಟನೆ

ಮಣಿಪಾಲ: ಮೂರು ದಿನಗಳ ಅಮೃತ ಯುವ ಕಲೋತ್ಸವವನ್ನು ಕೇಂದ್ರ ಸಂಗೀತ ನಾಟಕ ಅಕಾಡೆಮಿ ಅಧ್ಯಕ್ಷೆ ಡಾ.ಸಂಧ್ಯಾ ಪುರೇಚ ಮಂಗಳವಾರದಂದು ಉದ್ಘಾಟಿಸಿದರು. ಡಾ.ಎಚ್.ಎಸ್.ಬಲ್ಲಾಲ್, ಪ್ರೊ.ಎಂ.ಡಿ.ನಲಪಟ್, ಹೆಲೆನ್ ಆಚಾರ್ಯ ಮತ್ತು ಪ್ರೊ.ವರದೇಶ್ ಹಿರೇಗಂಗೆ ಉಪಸ್ಥಿತರಿದ್ದರು.

ಸ್ವರ್ಣ ಕಾರ್ಕಳದ ಭಾಗವಾಗಿ ವಿನೂತನ ಕಾರ್ಯಕ್ರಮ: ವಿ.ಸುನಿಲ್ ಕುಮಾರ್

ಕಾರ್ಕಳ: ಸ್ವರ್ಣ ಕಾರ್ಕಳದ ಭಾಗವಾಗಿ ಕಾರ್ಕಳದಲ್ಲಿ ಹಲವು ವಿನೂತನ ಮತ್ತು ವೈಶಿಷ್ಟ್ಯ ಪೂರ್ಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್ ಹೇಳಿದರು. ಅವರು ಕಾರ್ಕಳ ಸ್ವರಾಜ್ಯ ಮೈದಾನದಲ್ಲಿ ನಡೆದ ಪೊಲೀಸ್ ಪಂಜಿನ ಕವಾಯತು ಕಾರ್ಯಕ್ರಮದಲ್ಲಿ ಮಾತನಾಡಿದರು. ಬೆಂಗಳೂರು ಮತ್ತು ಮೈಸೂರುಗೆ ಸೀಮಿತವಾಗಿದ್ದ ಪೊಲೀಸ್ ಬ್ಯಾಂಡ್ ಮತ್ತು ಮಂಜಿನ ಕವಾಯತು ಕಾರ್ಯಕ್ರಮವನ್ನು ಕಾರ್ಕಳದಲ್ಲಿ ಆಯೋಜಿಸುವ ಮೂಲಕ, ತಾಲೂಕಿಗೆ ಇನ್ನಷ್ಟು ಗರಿಮೆ, ಹೊಸತನ ನೀಡುವ ಪ್ರಯತ್ನವಾಗಿದೆ. ಕಾರ್ಕಳದಲ್ಲಿ ಆಯೋಜಿಸುವ ಎಲ್ಲಾ […]