50,000 ವರ್ಷಗಳ ನಂತರ ಭೂಮಿಗೆ ಭೇಟಿ ನೀಡಿದ ಹಸಿರು ಬಣ್ಣದ ಧೂಮಕೇತು

ಕಾಮೆಟ್ C/2022 E3 (ZTF) ಅಥವಾ ಹಸಿರು ಬಣ್ಣದ ಧೂಮಕೇತುವು ರಾತ್ರಿ ಆಗಸದಲ್ಲಿ ಬುಧವಾರದಂದು ಕಂಡುಬಂದಿದೆ. ಅಮೇರಿಕಾದ ಬಾಹ್ಯಕಾಶ ಸಂಸ್ಥೆ ನಾಸಾ ಪ್ರಕಾರ, ಧೂಮಕೇತು ಸುಮಾರು 50,000 ವರ್ಷಗಳ ನಂತರ ನಮ್ಮ ಗ್ರಹಕ್ಕೆ ಭೇಟಿ ನೀಡಿದೆ. ಪ್ರಪಂಚದಾದ್ಯಂತದ ನಕ್ಷತ್ರ ವೀಕ್ಷಕರು ಮತ್ತು ಖಗೋಳಶಾಸ್ತ್ರಜ್ಞರು ಧೂಮಕೇತುವನ್ನು ವೀಕ್ಷಿಸಿ ಸಂತಸ ಪಟ್ಟಿದ್ದಾರೆ. ಧೂಮಕೇತುವು ಭೂಮಿಯಿಂದ ಕೇವಲ 26 ಮಿಲಿಯನ್ ಮೈಲುಗಳಷ್ಟು (ಅಥವಾ 42 ಮಿಲಿಯನ್ ಕಿಲೋಮೀಟರ್) ದೂರದಿಂದ ಹಾದುಹೋಗಿದೆ. ಕಳೆದ ಕೆಲವು ತಿಂಗಳಿನಿಂದ ಈ ಹಸಿರು ಧೂಮಕೇತು ಆಕಾಶದಲ್ಲಿದ್ದರೂ ಬುಧವಾರದಂದು […]

ಫೆಬ್ರವರಿ 9-10 ರಂದು ವಿದೇಶದಲ್ಲಿ ಉದ್ಯೋಗಾಸಕ್ತರಿಗಾಗಿ ಮಾಹಿತಿ, ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮ

ಉಡುಪಿ: ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ವತಿಯಿಂದ ಜಾರಿಗೊಳಿಸುತ್ತಿರುವ ಅಂತರಾಷ್ಟ್ರೀಯ ವಲಸೆ ಕೇಂದ್ರ-ಕರ್ನಾಟಕ (ಐ.ಎಮ್.ಸಿ-ಕೆ) ಯೋಜನೆಯಡಿ ಪ್ರಾರಂಭಿಸಲಾದ ವಲಸೆ ಮಾಹಿತಿ ಕೇಂದ್ರಗಳ ಮೂಲಕ ಸಾಗರೋತ್ತರ ನೇಮಕಾತಿಗಾಗಿ ಸಂವಹನ ಚಟಿವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ವಿದೇಶಗಳಲ್ಲಿ ಹೆಚ್ಚಿನ ಉದ್ಯೋಗ ಅವಕಾಶವನ್ನು ಕಲ್ಪಿಸಿಕೊಡುವ ವೃತ್ತಿಗಳಾದ ಗೃಹ ಕಾರ್ಮಿಕರು, ಕಟ್ಟಡ ನಿರ್ಮಾಣ ಕೆಲಸಗಾರರು, ದಾದಿಯರು, ಮತ್ತು ಇತರೆ ವರ್ಗಗಳ ಮೇಲೆ ಕೇಂದ್ರೀಕರಿಸಲಾಗಿದೆ. ಜಿಲ್ಲೆಯಲ್ಲಿ 2 ದಿನಗಳ ಮಾಹಿತಿ, ಶಿಕ್ಷಣ ಮತ್ತು ಸಂವಹನ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಫೆಬ್ರವರಿ 9 ರಂದು ಬೆಳಗ್ಗೆ 11 […]

ಮಾಚೀದೇವರ ಆದರ್ಶಗಳನ್ನು ಅರಿತು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಮಡಿವಾಳ ಮಾಚೀದೇವ ಅವರ ಆದರ್ಶ, ಆಲೋಚನೆ ಮತ್ತು ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದರೊಂದಿಗೆ ಅವರು ಯಾವ ಧ್ಯೇಯಕ್ಕಾಗಿ ಸಮಾಜದಲ್ಲಿ ಶ್ರಮಿಸಿದರು ಎಂದು ನಾವು ಅರಿತುಕೊಳ್ಳಬೇಕಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಬುಧವಾರ ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಮಡಿವಾಳ ಮಾಚೀದೇವ ಜಯಂತಿ ಕಾರ್ಯಕ್ರಮದಲ್ಲಿ […]

ನಕಲಿ ಕಟ್ಟಡ ಕಾರ್ಮಿಕ ಕಾರ್ಡ್ ನೋಂದಣಿ ರದ್ಧತಿ ಅಭಿಯಾನ: ತಪ್ಪಿತಸ್ಥರ ಮೇಲೆ ಕಾನೂನು ಕ್ರಮ

ಉಡುಪಿ: ಕಾರ್ಮಿಕ ಇಲಾಖೆಯ ವತಿಯಿಂದ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಣಿಯಾಗಿರುವ ಫಲಾನುಭವಿಗಳಿಗೆ ವಿವಿಧ ಆರ್ಥಿಕ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಲ್ಲದವರು ನಕಲಿ ದಾಖಲಾತಿ ಸೃಷ್ಠಿಸಿ, ಮಂಡಳಿಯಿಂದ ನೀಡುವ ಕಾರ್ಮಿಕರ ಗುರುತಿನ ಚೀಟಿ ಪಡೆದು, ಸೌಲಭ್ಯಗಳನ್ನು ಪಡೆಯುತ್ತಿರುವುದು ಮಂಡಳಿಯ ಗಮನಕ್ಕೆ ಬಂದಿರುವುದರಿಂದ ಜಿಲ್ಲೆಯಾದ್ಯಂತ ಫೆಬ್ರವರಿ 25 ರ ವರೆಗೆ ಬೋಗಸ್ ಕಾರ್ಡ್ ನೋಂದಣಿ ರದ್ಧತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತದೆ. ಈಗಾಗಲೇ ಕಟ್ಟಡ ಮತ್ತು ಇತರೆ ನಿರ್ಮಾಣ […]

ಸಂಸದರ ನಿಧಿ ಬಳಕೆಯಲ್ಲಿ ಕರ್ನಾಟಕಕ್ಕೆ 16ನೇ ಸ್ಥಾನ

ನವದೆಹಲಿ: ಬಿಜೆಪಿಯ 25 ಸೇರಿದಂತೆ 28 ಸಂಸದರನ್ನು ಹೊಂದಿರುವ ಕರ್ನಾಟಕವು, ಸಂಸದ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಲೋಕಸಭಾ ಸದಸ್ಯರಿಗೆ ಮೀಸಲಿಟ್ಟ 140 ಕೋಟಿ ರೂ.ಗಳಲ್ಲಿ 20 ಕೋಟಿ (ಶೇ. 14) ಮಾತ್ರ ಬಳಸಿಕೊಂಡಿದೆ. ನಿಧಿ ಬಳಕೆಯಲ್ಲಿ ರಾಜ್ಯ 16ನೇ ಸ್ಥಾನದಲ್ಲಿದೆ. ಕೇಂದ್ರ ಅಂಕಿಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯವು ಬುಧವಾರ ಕೇಂದ್ರ ಬಜೆಟ್ ಮಂಡನೆಗೆ ಮುನ್ನ 2022-2023ರಲ್ಲಿ ನಿಧಿಯ ಬಳಕೆಯ ಹೇಳಿಕೆಗಳನ್ನು ಬಿಡುಗಡೆ ಮಾಡಿದೆ. ವರದಿಯ ಪ್ರಕಾರ, ಕರ್ನಾಟಕದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಇಬ್ಬರೂ ಒಟ್ಟಾಗಿ […]