ಪ್ರಥಮ ಯಕ್ಷಗಾನ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಉಡುಪಿಯಲ್ಲಿ ಇದೇ ಫೆಬ್ರವರಿ 11 ಮತ್ತು 12ರಂದು ನಡೆಸುತ್ತಿರುವ ರಾಜ್ಯಮಟ್ಟದ ಪ್ರಥಮ ಯಕ್ಷಗಾನ ಸಮ್ಮೇಳನದ ಅಧಿಕೃತ ಆಹ್ವಾನ ಪತ್ರಿಕೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ಅವರು ಉಚ್ಚಿಲದ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಆವರಣದಲ್ಲಿ ಬುಧವಾರ ಬಿಡುಗಡೆಗೊಳಿಸಿದರು. ಈ ಸಮಾರಂಭದಲ್ಲಿ ಕಾಳಹಸ್ತೇಂದ್ರ ಮಹಾಸ್ವಾಮೀಜಿ, ಡಾ. ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಅಧ್ಯಕ್ಷ ಜಿ. ಶಂಕರ್ , ಸಮ್ಮೇಳನದ ಕಾರ್ಯಾಧ್ಯಕ್ಷ , ಡಾ. ಜಿ.ಎಲ್.ಹೆಗಡೆ, ಕಾಪು ಶಾಸಕ ಲಾಲಾಜಿ […]
ಉತ್ಸವಗಳಿಗೆ ದುಂದುವೆಚ್ಚ ನಡೆಸುವ ಸರ್ಕಾರದ ಬಳಿ ಹೊರಗುತ್ತಿಗೆ ನೌಕರರ ನೇರಪಾವತಿಗೆ ಹಣವಿಲ್ಲ ಎನ್ನುವುದು ಹಾಸ್ಯಾಸ್ಪದ: ರಮೇಶ್ ಕಾಂಚನ್

ಉಡುಪಿ: ಕರ್ನಾಟಕ ರಾಜ್ಯ ನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹೊರಗುತ್ತಿಗೆ ನೌಕರರ ಸಂಘ, ಬೆಂಗಳೂರು ಇದರ ನೇತೃತ್ವದಲ್ಲಿ ನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ವಾಹನ ಚಾಲಕರು, ನೀರು ಸರಬರಾಜು ಸಹಾಯಕರು, ಸ್ಯಾನಿಟರಿ ಸೂಪರ್‌ವೈಸರ್, ಲೋಡರ್ಸ್, ಕ್ಲೀನರ್ಸ್, ಒಳಚರಂಡಿ ಕಾರ್ಮಿಕರು, ಡಿ.ಇ.ಓ, ಎಸ್.ಟಿ.ಪಿ ಆಪರೇಟರ್ಸ್, ಕಚೇರಿ ಸಹಾಯಕರು ಸೇರಿದಂತೆ ಎಲ್ಲಾ ಹೊರಗುತ್ತಿಗೆ ನೌಕರರಿಗೆ ಪೌರಕಾರ್ಮಿಕರ ಮಾದರಿಯಲ್ಲಿ ನೇರಪಾವತಿಗೆ ಆಗ್ರಹಿಸಿ ಫೆ.1 ರಿಂದ ರಾಜ್ಯಾದ್ಯಂತ ಅನಿರ್ಧಿಷ್ಟಾವಧಿ ಧರಣಿಯನ್ನು ಜಿಲ್ಲಾ ಹೊರಗುತ್ತಿಗೆ ನೌಕರರ ಸಂಘವು ಉಡುಪಿ ಜಿಲ್ಲಾಧಿಕಾರಿ […]