ಕರ್ನಾಟಕ ಚುನಾವಣೆ: ಬಿಜೆಪಿಗೆ ಪ್ರಧಾನ್-ಅಣ್ಣಾಮಲೈ ಸಾರಥ್ಯ

ನವದೆಹಲಿ: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷವು ಶನಿವಾರ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಉಸ್ತುವಾರಿಯನ್ನಾಗಿ ನೇಮಿಸಿದೆ. ಪಕ್ಷ ಸಂಘಟನೆಯಲ್ಲಿ ಅನುಭವವಿರುವ ಪ್ರಧಾನ್, ಈ ಹಿಂದೆಯೂ ಹಲವು ಚುನಾವಣೆಗಳನ್ನು ನಿಭಾಯಿಸುವ ಜವಾಬ್ದಾರಿಯನ್ನು ಹೊತ್ತಿದ್ದಾರೆ. ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಅವರನ್ನು ಚುನಾವಣೆಯ ಸಹ ಉಸ್ತುವಾರಿಯನ್ನಾಗಿ ಮಾಡಲಾಗಿದೆ. ಕರ್ನಾಟಕಕ್ಕೆ ಅಣ್ಣಾಮಲೈ ಹೊಸಬರೇನಲ್ಲ. ರಾಜ್ಯದಲ್ಲಿ ಪೊಲೀಸ್ ಅಧಿಕಾರಿಯಾಗಿ ಕರ್ನಾಟಕದ ಸಿಂಘಂ ಎಂದು ಖ್ಯಾತಿವೆತ್ತಿದ್ದ ಅಣ್ಣಾಮಲೈ ಇಲ್ಲಿನವರಿಗೆ ಚಿರಪರಿಚಿತ ಹೆಸರು. ಕರ್ನಾಟಕದಲ್ಲಿ ಈ ವರ್ಷದ ಮಧ್ಯಭಾಗದಲ್ಲಿ ಚುನಾವಣೆ […]

ಚೆನ್ನೈ ಹೈಕೋರ್ಟ್ ನ್ಯಾಯಾಧೀಶ ಜ. ಎನ್.ಶೇಷಶಾಯಿ ಇವರಿಂದ ಶ್ರೀಕೃಷ್ಣ ಮಠ ಭೇಟಿ

ಉಡುಪಿ: ಶ್ರೀಕೃಷ್ಣಮಠಕ್ಕೆ ಚೆನ್ನೈ ಹೈಕೋರ್ಟಿನ ನ್ಯಾಯಾಧೀಶರಾದ ನ್ಯಾಯಮೂರ್ತಿ ಎನ್. ಶೇಷಶಾಯಿ ಇವರು ಕುಟುಂಬ ಸಮೇತರಾಗಿ ಆಗಮಿಸಿ ಕೃಷ್ಣದೇವರ ದರ್ಶನ ಮಾಡಿ ಪರ್ಯಾಯ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು. ಈ ಸಂದರ್ಭದಲ್ಲಿ ಉದ್ಯಮಿಗಳಾದ ಬಾಲಾಜಿ ರಾಘವೇಂದ್ರ ಆಚಾರ್ಯ ಉಪಸ್ಥಿತರಿದ್ದರು.

ಹಿರಿಯ ನಾಗರಿಕರ ಸೌಲಭ್ಯಗಳ ಕುರಿತು ಮಾಹಿತಿ ಕಾರ್ಯಕ್ರಮ

ಉಡುಪಿ: ವೃದ್ಧಾಪ್ಯವು ಪ್ರಕೃತಿ ಸಹಜ ಪ್ರಕ್ರಿಯೆಯಾಗಿದ್ದು, ಹಿರಿಯ ನಾಗರಿಕರನ್ನು ಕಡೆಗಣಿಸದೇ ಅವರ ಸಂಧ್ಯಾ ಕಾಲದಲ್ಲಿ ಹೊಂದಾಣಿಕೆಯ ಜೀವನ ನಡೆಸುವುದು ಅತ್ಯವಶ್ಯಕವಾಗಿದೆ ಎಂದು ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದ ಯೋಜನಾ ಸಂಯೋಜಕಿ ಅಶ್ವಿನಿ ಹೇಳಿದರು. ಅವರು ಇತ್ತೀಚೆಗೆ ಬಡಾನಿಡಿಯೂರು ಗ್ರಾಮ ಪಂಚಾಯತ್‌ನಲ್ಲಿ, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉಡುಪಿ ಇವರ ವತಿಯಿಂದ ನಡೆದ ಅರಿವಿನ ಸಿಂಚನ ಕಾರ್ಯಕ್ರಮದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರಿಗೆ ಸರಕಾರದಿಂದ ದೊರಕುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿ, ಮಾತನಾಡಿದರು. ಹಿರಿಯ […]

ಮುಲ್ಕಿ: ಹಿಟ್ ಎಂಡ್ ರನ್ ಪ್ರಕರಣದ ಆರೋಪಿ ಬಂಧನ

ಮುಲ್ಕಿ: ಮಂಗಳೂರು ಹೊರ ವಲಯದ ಮುಲ್ಕಿ ಸಮೀಪದ ಪಡುಪಣಂಬೂರು ಪೆಟ್ರೋಲ್ ಬಂಕ್ ಬಳಿ ಮಂಗಳವಾರ ಮಧ್ಯರಾತ್ರಿ ಕಾರು ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪರಾರಿಯಾಗಿದ್ದ ಆರೋಪಿ ಕಾರು ಚಾಲಕನನ್ನು ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಕಾರು ಸಮೇತ ಬಂಧಿಸಿರುವುದಾಗಿ ವರದಿಯಾಗಿದೆ. ಮಧ್ಯಪ್ರದೇಶದ ಇಂದೋರ್‌ನಿಂದ ಕೇರಳ ಕಡೆಗೆ ಹೋಗುತ್ತಿದ್ದ ಲಾರಿ ಪಡುಪಣಂಬೂರು ಬಳಿ ಟಯರ್ ಪಂಚರ್ ಆಗಿದ್ದು ಲಾರಿಯಲ್ಲಿದ್ದ ಮಧ್ಯಪ್ರದೇಶ ನಿವಾಸಿಗಳಾದ ಬಬುಲು(23), ಆಚಲ್ ಸಿಂಗ್ (30) […]

ಯುಜಿಸಿ-ನೆಟ್ ಮತ್ತು ಕೆ-ಸೆಟ್ ಪರೀಕ್ಷೆಗೆ ತರಬೇತಿ

ಉಡುಪಿ: ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕ.ರಾ.ಮು.ವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ಕಿರಿಯ ಶಿಷ್ಯವೇತನ ಸಂಶೋಧಕ ಸಹಾಯಕರ (ಜೆ.ಆರ್.ಎಫ್), ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ರಾಷ್ಟ್ರ ಮಟ್ಟದ ಅರ್ಹತಾ ಪರೀಕ್ಷೆ (ಯುಜಿಸಿ-ನೆಟ್) ಹಾಗೂ ರಾಜ್ಯ ಮಟ್ಟದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್)ಗೆ 45 ದಿನಗಳ ತರಬೇತಿ ಶಿಬಿರ ಏರ್ಪಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 8 ರ ಒಳಗೆ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ […]