ಅಪರೂಪದ ಬಾಂಬೆ ನೆಗೆಟಿವ್ ರಕ್ತದ ಗುಂಪಿನ ಗರ್ಭಿಣಿಯ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ ಕೆ.ಎಂ.ಸಿ

ಮಣಿಪಾಲ: ರಕ್ತದ ಗುಂಪು O ನೆಗೆಟಿವ್ ಆಗಿದ್ದು ಹಾಗೂ ಆಂಟಿಬಾಡಿ ಇದೆಯೆಂದು ಮುಂದಿನ ನಿರ್ವಹಣೆಗಾಗಿ ಗರ್ಭಿಣಿ ಮಹಿಳೆಯನ್ನು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಕಳುಹಿಸಲಾಗಿದ್ದು ಇಲ್ಲಿನ ರಕ್ತ ಕೇಂದ್ರದಲ್ಲಿ ಪರೀಕ್ಷೆ ಮಾಡಿದಾಗ ಮಹಿಳೆಗೆ ಅತ್ಯಂತ ಅಪರೂಪದ ಬಾಂಬೆ ನೆಗೆಟಿವ್ ರಕ್ತದ ಗುಂಪು ಇರುವುದು ಕಂಡುಬಂದಿತು. ಇಂತಹ ಸಂದರ್ಭದಲ್ಲಿ ಆಂಟಿ ‘ಡಿ’ ಆಂಟಿಬಾಡಿ ಇರುವಿಕೆಯನ್ನುಪರೀಕ್ಷೆ ಮಾಡಲು ತುಂಬಾ ಕಷ್ಟ. ರಕ್ತದ ಉನ್ನತ ಮಟ್ಟದ ಇಮ್ಮುನೊಹೆಮಟಾಲೋಜಿ ಪರೀಕ್ಷೆಯ ಮೂಲಕ ಆಂಟಿ ‘ಡಿ’ ಆಂಟಿಬಾಡಿ ಇಲ್ಲವೆಂದು ಸಾಬೀತುಪಡಿಸಲಾಯಿತು. ಕಸ್ತೂರ್ಬಾ ಆಸ್ಪತ್ರೆಯ ರಕ್ತ ಕೇಂದ್ರದ […]

ಫೆ.5 ರಂದು ವೇಣುಗಿರಿ ಶ್ರೀ ಕಾಳಿಕಾಂಬಾ ವಿಶ್ವಕರ್ಮೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶಾಭಿಷೇಕ

ಕಟಪಾಡಿ: ತೆಂಕಾರು ಮಾಗಣೆ ವೇಣುಗಿರಿ ಶ್ರೀ ಕಾಳಿಕಾಂಬಾ ವಿಶ್ವಕರ್ಮೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶಾಭಿಷೇಕವು ಫೆ. 6ರ ತನಕ ವಿವಿಧ ಧಾರ್ಮಿಕ, ವೈದಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದ್ದು, ಫೆ.5 ರಂದು ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಜರಗಲಿದೆ. ಫೆ. 4 ರಂದು ಬೆಳಿಗ್ಗೆ 8ಕ್ಕೆ ಅಷ್ಟೋತ್ತರಶತ ಶ್ರೀ ನಾಗಧರ್ಮೇಂದ್ರ ಸ್ವಾಮೀಜಿಗಳು ವೃಂದಾವನದಲ್ಲಿ, ನಾಗದೇವರ ಸಾನ್ನಿಧ್ಯದಲ್ಲಿ ದೈವಗಳ ಸನ್ನಿಧಿಯಲ್ಲಿ ಕಲಶಾಭಿಷೇಕ ಜರಗಲಿದೆ. ಮಧ್ಯಾಹ್ನ 12.30ಕ್ಕೆ ಅನ್ನಸಂತರ್ಪಣೆ, ಸಂಜೆ 3 ರಿಂದ ವೈವಿಧ್ಯಮಯ ಕಾರ್ಯಕ್ರಮ, 4ರಿಂದ ಧಾರ್ಮಿಕ ಸಭೆ, ಸಂಜೆ 6ಕ್ಕೆ ತುಳುನಾಡ ವೈಭವ […]

ಸಿಎ ಫೌಂಡೇಷನ್ ಪರೀಕ್ಷೆಯಲ್ಲಿ ಸ್ವಾತಿ ಸುಭಾಷ್ ಕಾಮತ್ ಉತ್ತೀರ್ಣ

ಉಡುಪಿ: ಹೊಸದಿಲ್ಲಿಯ ಲೆಕ್ಕ ಪರಿಶೋಧಕರ ಸಂಸ್ಥೆ ಡಿಸೆಂಬರ್ 2022ರಲ್ಲಿ ನಡೆದ ಸಿಎ ಫೌಂಡೇಷನ್ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿಯೇ ಸ್ವಾತಿ ಸುಭಾಷ್ ಕಾಮತ್ 327 ಅಂಕಗಳನ್ನು ಪಡೆದು ಉತ್ತೀರ್ಣರಾಗಿದ್ದಾರೆ. ಇವರು ಸಿಎ ಫೌಂಡೇಷನ್ ತರಬೇತಿಯನ್ನು ಉಡುಪಿಯ ತ್ರಿಶಾ ಕ್ಲಾಸಸ್‌ನಲ್ಲಿ ಹಾಗೂ ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ ಆಂಡ್ ಮ್ಯಾನೇಜ್ಮೆಂಟ್‌ನಲ್ಲಿ ಬಿ.ಕಾಂ ಪದವಿಯ ವ್ಯಾಸಂಗವನ್ನು ನಡೆಸುತ್ತಿದ್ದಾರೆ. ಇವರು ಭಟ್ಕಳದ ಸುಭಾಷ್ ಕಾಮತ್ ಮತ್ತು ಸಂಜನಾ ಕಾಮತ್ ದಂಪತಿಯ ಪುತ್ರಿಯಾಗಿರುತ್ತಾರೆ.