ಮರಗಳ ತೆರವು: ಅಹವಾಲು ಸಭೆ

ಉಡುಪಿ: ವಾರಾಹಿ ಏತ ನೀರಾವರಿ ಯೋಜನಾ ಕಾಮಗಾರಿಗೆ ಸಂಬoಧಿಸಿದoತೆ, ಬ್ರಹ್ಮಾವರ ತಾಲೂಕು ಆವರ್ಸೆ ಗ್ರಾಮದ ಸರ್ವೇ ನಂ. 96, 97/*, 98/* ಮತ್ತು 147/* ರಲ್ಲಿ ಕಾಲುವೆ ನಿರ್ಮಾಣಕ್ಕೆ ಅಡಚಣೆಯಾಗುವ ಒಟ್ಟು 471 ಮರಗಳನ್ನು ತೆರವುಗೊಳಿಸುವ ಹಿನ್ನೆಲೆ, ಫೆಬ್ರವರಿ 10 ರಂದು ಮಧ್ಯಾಹ್ನ 3 ಗಂಟೆಗೆ ಶಂಕರನಾರಾಯಣ ವಲಯ ಕಚೇರಿಯ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸಭೆ ನಡೆಯಲಿದೆ. ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು ಸಭೆಯಲ್ಲಿ ಹಾಜರಾಗಿ ಅಥವಾ ಸದ್ರಿ ದಿನಾಂಕದ ಒಳಗೆ ವೃಕ್ಷ ಅಧಿಕಾರಿ ಹಾಗೂ ಉಪ […]

ಸಂಚಾರಿ ಇ- ಚಲನ್ ಪ್ರಕರಣ: ದಂಡದ ಮೊತ್ತದಲ್ಲಿ ಶೇ.50 ರಿಯಾಯತಿ.

ಉಡುಪಿ: ಪೊಲೀಸ್ ಇಲಾಖೆಯ ಸಂಚಾರಿ ಇ- ಚಲನ್ ನಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿ, ಫೆಬ್ರವರಿ 11 ರ ವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ, ಒಂದು ಬಾರಿಯ ಕ್ರಮವಾಗಿ, ದಂಡದ ಮೊತ್ತದಲ್ಲಿ ಶೇ.50 ರಷ್ಟು ರಿಯಾಯತಿ ನೀಡಲಿದ್ದು, ಸಾರ್ವಜನಿಕರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ತಿಳಿಸಿದ್ದಾರೆ.

ಹಿರಿಯ ಯಕ್ಷಗಾನ ಕಲಾವಿದ ಜಂಬೂರು ರಾಮಚಂದ್ರ ಶಾನುಭಾಗ ನಿಧನ

ಉಡುಪಿ: ಉಡುಪಿಯ ಶಿರಿಯಾರ ಗ್ರಾಮದ ಹಿರಿಯ ಯಕ್ಷಗಾನ ಕಲಾವಿದ ಜಂಬೂರು ರಾಮಚಂದ್ರ ಶಾನುಭಾಗ್ (84ವರ್ಷ) ರವಿವಾರ ನಿಧನ ಹೊಂದಿದರು. ಮಂದಾರ್ತಿ, ಮಾರಣಕಟ್ಟೆ, ಅಮೃತೇಶ್ವರೀ, ಇಡಗುಂಜಿ, ಪೆರ್ಡೂರು, ಹಾಲಾಡಿ, ಗುಂಡುಬಾಳ, ಕಮಲಶಿಲೆ ಮೇಳವೂ ಸೇರಿದಂತೆ ಸುಮಾರು ಐದೂವರೆ ದಶಕಗಳ ಕಾಲ ಕಲಾಸೇವೆಗೈದ ಇವರು ಯಕ್ಷಗಾನ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿದ್ದರು. ಮೃತರು ಪತ್ನಿ, ಈರ್ವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಕಳೆದ 13 ವರ್ಷಗಳ ಹಿಂದೆ ಯಕ್ಷಗಾನ ಕಲಾರಂಗ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿತ್ತು. ಇವರ ನಿಧನಕ್ಕೆ […]

600 ಹೊಸ ಉದ್ಯೋಗಿಗಳನ್ನು ವಜಾಗೊಳಿಸಿದ ಇನ್ಫೋಸಿಸ್

ಬೆಂಗಳೂರು: 600 ಹೊಸ ಉದ್ಯೋಗಿಗಳನ್ನು ವಜಾಗೊಳಿಸಿದೆ ಎಂದು ವರದಿಯಾಗಿದೆ. ಆಂತರಿಕ ಫ್ರೆಶರ್ ಮೌಲ್ಯಮಾಪನ (ಎಫ್‌ಎ) ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಿಫಲರಾದ ಕಾರಣ ಅವರನ್ನು ವಜಾಗೊಳಿಸಲಾಗಿದೆ.