ಜೆಇಇ ಮೈನ್ಸ್ ಪರೀಕ್ಷೆ: ಹೆಮ್ಮಾಡಿಯ ಜನತಾ ಸ್ವ.ಪ.ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅಪ್ರತಿಮ ಸಾಧನೆ
ಹೆಮ್ಮಾಡಿ: ರಾಷ್ಟ್ರ ಮಟ್ಟದಲ್ಲಿ ನಡೆದ ಜೆಇಇ ಮೈನ್ಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಕಾಲೇಜು ಪ್ರಾರಂಭದ ಪ್ರಥಮ ವರ್ಷದಲ್ಲೇ ಅಪ್ರತಿಮ ಸಾಧನೆ ಮೆರೆದಿದ್ದಾರೆ. ಗ್ರಾಮೀಣ ಭಾಗದ ಪರಿಸರದಲ್ಲಿ ಆರಂಭಗೊಂಡಿರುವ ಶಿಕ್ಷಣ ಸಂಸ್ಥೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಉತ್ತಮ ಶಿಕ್ಷಣ ನೀಡುತ್ತಿದೆ. ಜೆಇಇ ಮೈನ್ಸ್ 2023 ಪರೀಕ್ಷೆಯಲ್ಲಿ ಕ್ರಮವಾಗಿ ಸುಮಂತ್ 96 ಪರ್ಸಂಟೈಲ್ ( 99.12 ಪರ್ಸಂಟೈಲ್ ರಸಾಯನ ಶಾಸ್ತ್ರ), ಆಯುಷ್ ಜೆ.ಸಿ 95 ಪರ್ಸಂಟೈಲ್ ( 97.01 ಪರ್ಸಂಟೈಲ್ […]
ಕಾಮಗಾರಿಗೆ ಪಿಕ್ಕಾಸು ಬೀಳಬೇಕಾದ್ರೆ ಮೊದಲು 40% ಕಮಿಷನ್ ಕೊಡಬೇಕು: ಬಿಜೆಪಿ ಸರಕಾರದ ವಿರುದ್ಧ ಸೊರಕೆ ವಾಗ್ದಾಳಿ
ಉಡುಪಿ: ರಸ್ತೆ ಸೇರಿದಂತೆ ಯಾವುದೇ ಅಭಿವೃದ್ಧಿ ಕಾಮಗಾರಿ ಆಗಬೇಕಾದ್ರೆ ಮೊದಲು 40 ಪರ್ಸೆಂಟ್ ಕಮಿಷನ್ ಪಾವತಿಸಬೇಕು. ಆದಾದ ಬಳಿಕವೇ ಕಾಮಗಾರಿಗೆ ಪಿಕ್ಕಾಸು ಬೀಳುವುದು ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಆರೋಪಿಸಿದರು. ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾಪು ವಿಧಾನಸಭಾ ಕ್ಷೇತ್ರಾದ್ಯಂತ ಹಮ್ಮಿಕೊಳ್ಳಲಾದ ಕರಾವಳಿ ಪ್ರಜಾಧ್ವನಿ ಯಾತ್ರೆಯ ಪ್ರಯುಕ್ತ ಆತ್ರಾಡಿಯಲ್ಲಿ ನಡೆದ ಸಮಾರಂಭದಲ್ಲಿ ಅವರು ಮಾತನಾಡಿದರು. ಯಾವುದೇ ಸರಕಾರಿ ಕಚೇರಿಗಳಿಗೆ ಹೋಗಬೇಕಾದರೂ ದಲ್ಲಾಳಿಗಳ ಮೂಲಕವೇ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಉತ್ಸವಗಳನ್ನು ಮಾಡುವ ಮೂಲಕ ಜನರ ತೆರಿಗೆಯ […]
ಕುಶಲಕರ್ಮಿಗಳಿಗೆ ಸಾಲ-ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಉಡುಪಿ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ವತಿಯಿಂದ ವಿವಿಧ ವರ್ಗದ ಕುಶಲಕರ್ಮಿಗಳಿಗೆ ತಲಾ 50,000 ರೂ. ವರೆಗೆ ಸಾಲ-ಸಹಾಯಧನ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ವಾಣಿಜ್ಯ ಬ್ಯಾಂಕ್, ಸಹಕಾರ ಬ್ಯಾಂಕ್ ಹಾಗೂ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ (ಪತ್ತಿನ ಸಹಕಾರ ಸಂಘಗಳನ್ನು ಹೊರತುಪಡಿಸಿ) ಗಳಿಂದ ಮಂಜೂರಾದ ಸಾಲದ ಮೇಲೆ ಇಲಾಖೆ ವತಿಯಿಂದ ಶೇ. 30 ರಷ್ಟು ಗರಿಷ್ಠ 15,000 ರೂ. ವರೆಗೆ ಸಹಾಯಧನ ನೀಡಲಾಗುವುದು. ಜಿಲ್ಲೆಯ 18 ವರ್ಷ ಮೇಲ್ಪಟ್ಟ ಕಮ್ಮಾರಿಕೆ, ಬುಟ್ಟಿ ಹೆಣೆಯುವವರು, ಗೋಲ್ಡ್ ಸ್ಮಿತ್ (ಆಭರಣ ತಯಾರಿಕೆ), ಕಲ್ಲಿನ […]
ಕಾರ್ಕಳ ಎಂ.ಪಿ.ಎಂ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ನ್ಯಾಕ್ ‘ಎ’ ಗ್ರೇಡ್ ಮಾನ್ಯತೆ
ಕಾರ್ಕಳ: ದೇಶದಲ್ಲಿರುವ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಮೌಲ್ಯಮಾಪನ ಮಾಡುವ ಪ್ರತಿಷ್ಠಿತ ರಾಷ್ಟ್ರೀಯ ಮೌಲ್ಯಾಂಕನ ಮತ್ತು ಮಾನ್ಯತಾ ಮಂಡಳಿ(ನ್ಯಾಕ್) ಯಿಂದ ಎಂ.ಪಿ.ಎಂ ಸ.ಪ್ರ.ದ ಕಾಲೇಜಿನಲ್ಲಿ ಫೆಬ್ರವರಿ 1 ಮತ್ತು 2 ರಂದು ಸಮಗ್ರ ಮೌಲ್ಯಮಾಪನವು ನಡೆದು ಕಾಲೇಜಿಗೆ ‘ಎ’ ಗ್ರೇಡ್ ಮಾನ್ಯತೆ ಲಭಿಸಿರುತ್ತದೆ. ಒಟ್ಟು ಸಿಜಿಪಿಎ 4 ರಲ್ಲಿ 3.21 ಅಂಕಗಳನ್ನು ಪಡೆದ ಈ ಕಾಲೇಜು ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅಗ್ರ ಸ್ಥಾನಿಯಾಗಿರುತ್ತದೆ. ನ್ಯಾಕ್ ತಂಡದಲ್ಲಿ ಖ್ಯಾತ ಶಿಕ್ಷಣ ತಜ್ಞ, ಹಿಮಾಚಲ ಪ್ರದೇಶದ […]
ಅಂತಾರಾಷ್ಟ್ರೀಯ ಕ್ರೀಡಾಸ್ಪರ್ಧೆಯಲ್ಲಿ ಪದಕ ವಿಜೇತ ಕ್ರೀಡಾ ಪಟುಗಳಿಗೆ ನಗದು ಪುರಸ್ಕಾರ: ಅರ್ಜಿ ಆಹ್ವಾನ
ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಂತಾರಾಷ್ಟ್ರೀಯ ಕ್ರೀಡಾಸ್ಪರ್ಧೆಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಂದ ಕೇಂದ್ರ ಸರಕಾರದಿಂದ ನೀಡಲಾಗುವ ನಗದು ಪುರಸ್ಕಾರಕ್ಕೆ ವೆಬ್‌ಸೈಟ್ ಡಿ.ಬಿ.ಟಿ- ಎಂ.ಐ.ಎಸ್ ಪೋರ್ಟಲ್ https://dbtvas-sports.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಮೊ.ನಂ: 9480886467 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.