ಕಳ್ಳತನದ ಆರೋಪಿಗೆ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ
ಉಡುಪಿ: ನಗದು ಹಾಗೂ ಚಿನ್ನಾಭರಣಗಳನ್ನು ಕಳವು ಮಾಡಿದ ಆರೋಪಿಗೆ ನಗರದ ಪ್ರಧಾನ ಸಿ.ಜೆ ಮತ್ತು ಸಿ.ಜೆ.ಎಮ್ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2021 ನವೆಂಬರ್ 17 ರಂದು ರಾತ್ರಿ ಸುಖೇಶ್ ನಾಯ್ಕ್ ಎಂಬಾತನು ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಗುಂಡಿಬೈಲು ದುಗ್ಗಣ್ಣ ಬೆಟ್ಟು ಮಾರ್ಗ ಜುಮಾದಿಕಟ್ಟೆ ದೇವಸ್ಥಾನದ ಹಿಂಬದಿ ರಸ್ತೆಯಲ್ಲಿರುವ ಬಾಬು ಆಚಾರ್ಯ ಅವರ ಮನೆಯ ಬೀಗ ಮುರಿದು ಒಳಗೆ ಪ್ರವೇಶಿಸಿ ಕಪಾಟಿನ ಲಾಕರ್‌ನಲ್ಲಿದ್ದ ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಹಿನ್ನೆಲೆ […]
ನಗರ ಕೇಂದ್ರ ಗ್ರಂಥಾಲಯದಲ್ಲಿ 28ನೇ ಆಯವ್ಯಯ ಸಭೆ
ಉಡುಪಿ: ನಗರ ಕೇಂದ್ರ ಗ್ರಂಥಾಲಯದಲ್ಲಿ ನಗರ ಗ್ರಂಥಾಲಯ ಪ್ರಾಧಿಕಾರದ 28ನೇ ಆಯವ್ಯಯ ಸಭೆಯು ನಗರಸಭೆ ಅಧ್ಯಕ್ಷೆ ಮತ್ತು ನಗರ ಗ್ರಂಥಾಲಯ ಪ್ರಾಧಿಕಾರದ ಪದನಿಮಿತ್ತ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆಯಿತು. ಸಭೆಯಲ್ಲಿ ನಗರ ಗ್ರಂಥಾಲಯ ಪ್ರಾಧಿಕಾರದ ಉಪಾಧ್ಯಕ್ಷೆ ಹಾಗೂ ಡಾ ಜಿ.ಶಂಕರ್ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಭಾಸ್ಕರ ಶೆಟ್ಟಿ, ನಗರಸಭೆ ಸದಸ್ಯರಾದ ಯೋಗೀಶ್ ಸಾಲ್ಯಾನ್ ಮತ್ತು ರಶ್ಮಿ ಚಿತ್ತರಂಜನ್ ಭಟ್, ಸಾಹಿತಿ ಡಾ ನಿಕೇತನ ಹಾಗೂ ನ್ನಿತರ ಸದಸ್ಯರು ಉಪಸ್ಥಿತರಿದ್ದರು. ಯು.ಪಿ.ಎಸ್.ಸಿ ಮತ್ತು […]
ಪುತ್ತೂರು: ಫೆ.10-12 ರವರೆಗೆ ಕ್ಯಾಂಪ್ಕೋ ವತಿಯಿಂದ ಬೃಹತ್ ಕೃಷಿಯಂತ್ರ ಮೇಳ
ಪುತ್ತೂರು: ಕ್ಯಾಂಪ್ಕೋ ನಿಯಮಿತ ಮಂಗಳೂರು, ಅಡಿಕೆ ಸಂಶೋಧನೆ ಮತ್ತು ಅಭಿವೃದ್ದಿ ಪ್ರತಿಷ್ಠಾನ, ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂದ ಎಂಡ್ ಟೆಕ್ನಾಲಜಿ ಪುತ್ತೂರು ಇದರ ಸಂಯುಕ್ತಾಶ್ರಯದಲ್ಲಿ 5 ನೇ ಬೃಹತ್ ಕೃಷಿಯಂತ್ರ ಮೇಳ ಮತ್ತು ಕನಸಿನ ಮನೆ ಕಾರ್ಯಕ್ರಮವು ಫೆ.10 ರಿಂದ 12 ರವರೆಗೆ ಬೆಳಿಗ್ಗೆ 9 ರಿಂದ ಸಂಜೆ 8 ರ ತನಕ ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ನಡೆಯಲಿದ್ದು ಎಲ್ಲರಿಗೂ ಉಚಿತ ಪ್ರವೇಶಾತಿ ಇದೆ ಎಂದು ಪ್ರಕಟಣೆ ತಿಳಿಸಿದೆ.
ಕೇಂದ್ರ ಬಜೆಟ್- ಆತ್ಮ ನಿರ್ಭರದಿಂದ ಅಮೃತ ಕಾಲದತ್ತ ಭಾರತ: ಉಡುಪಿ ಜಿಲ್ಲಾ ಬಿಜೆಪಿ
ಉಡುಪಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ರವರು ಮಂಡಿಸಿರುವ ಕೇಂದ್ರ ಬಜೆಟ್-2023 ಒಂದು ಅತ್ಯುತ್ತಮ ಬಜೆಟ್. ‘ನೀರಸ ಜಗತ್ತಿಗೆ ಭಾರತ ಒಂದೇ ಭರವಸೆ’ ಎಂಬ ಮಾತಿನಂತೆ ಈ ಬಜೆಟ್ ಉತ್ತರದಾಯಿಯಾಗಿ ಮೂಡಿ ಬಂದಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಆರ್ಥಿಕ ಪ್ರಕೋಷ್ಠದ ಜಿಲ್ಲಾ ಸಂಚಾಲಕ ದಿವಾಕರ ಶೆಟ್ಟಿ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ 2023ಬೇ ಸಾಲಿನ ಕೇಂದ್ರ ಬಜೆಟ್ ಕುರಿತು ನಡೆದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಫೆಡರಲ್ ಸಿಸ್ಟಮ್‌ನಲ್ಲಿರುವ ಭಾರತದಂತಹ ದೇಶದಲ್ಲಿ ಇಂತಹ […]
ಅತಿ ವೇಗದ ಬೈಕ್ ಚಲಾವಣೆಯಿಂದ ಅಪಘಾತ ಪಡಿಸಿದ ಆರೋಪಿಗೆ ಶಿಕ್ಷೆ
ಉಡುಪಿ: ಅತೀ ವೇಗ ಹಾಗೂ ಅಜಾಕರೂಕತೆಯಿಂದ ಬೈಕ್ ಚಲಾಯಿಸಿ, ತೀವ್ರ ಸ್ವರೂಪದ ಗಾಯಗೊಳಿಸಿದ ವ್ಯಕ್ತಿಗೆ ಹಾಗೂ ಬೈಕ್‌ಗೆ ವಾಯು ಮಾಲಿನ್ಯ ಪತ್ರ ಹೊಂದಿಲ್ಲದ ವ್ಯಕ್ತಿಗೆ ನಗರದ ಪ್ರಧಾನ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2020 ಅಕ್ಟೋಬರ್ 3 ರಂದು ರಾತ್ರಿ 10.15 ರ ಸುಮಾರಿಗೆ 1ನೇ ಆರೋಪಿಯಾದ ಪ್ರಶಾಂತ್ ಎಂಬಾತನು 2ನೇ ಆರೋಪಿಯಾದ ಶರತ್‌ಗೆ ಸೇರಿದ ಮೋಟಾರ್ ಸೈಕಲ್ ಅನ್ನು ಸಂತೆಕಟ್ಟೆ ಕಡೆಯಿಂದ ಬ್ರಹ್ಮಾವರ ಕಡೆಗೆ ಅತೀವೇಗ ಹಾಗೂ ಅಜಾಕರೂಕತೆಯಿಂದ […]