ವಾರಂಬಳ್ಳಿಯಲ್ಲಿ ಮರಗಳ ತೆರವು: ಸಾರ್ವಜನಿಕ ಅಹವಾಲು ಸಭೆ

ವಾರಂಬಳ್ಳಿ: ಬ್ರಹ್ಮಾವರ ತಾಲೂಕು ವಾರಂಬಳ್ಳಿ ಗ್ರಾಮದ ಸ.ನಂ. 150 ರಲ್ಲಿ ನಿವೇಶನಕ್ಕಾಗಿ ಕಾಯ್ದಿರಿಸಿದ ಸ್ಥಳದಲ್ಲಿನ ವಿವಿಧ ಜಾತಿಯ 445 ಮರಗಳನ್ನು ತೆರವುಗೊಳಿಸುವ ಹಿನ್ನೆಲೆ, ಫೆಬ್ರವರಿ 20 ರಂದು ಬೆಳಗ್ಗೆ 11 ಗಂಟೆಗೆ ಉಡುಪಿ ವಲಯ ಅರಣ್ಯಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸಭೆ ನಡೆಯಲಿದೆ. ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು ಸಭೆಯಲ್ಲಿ ಹಾಜರಾಗಿ ಅಥವಾ ಸದ್ರಿ ದಿನಾಂಕದ ಒಳಗೆ ವೃಕ್ಷ ಅಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ, ಕುಂದಾಪುರ ವಿಭಾಗ ಇವರಿಗೆ ಲಿಖಿತ ರೂಪದಲ್ಲಿ ಅಥವಾ ಇ-ಮೇಲ್ […]

ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರದಲ್ಲಿ ಪ್ರಯೋಗಶಾಲಾ ತಂತ್ರಜ್ಞರ ಹುದ್ದೆಗೆ ಅರ್ಜಿ ಆಹ್ವಾನ

ಉಡುಪಿ: ನಗರದ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರದಲ್ಲಿ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದಡಿ ನೇರ ಗುತ್ತಿಗೆ ಆಧಾರದಲ್ಲಿ ಪ್ರಯೋಗಶಾಲಾ ತಂತ್ರಜ್ಞರ ಹುದ್ದೆಯ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ Udupi.nic.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಟರ್ಕಿ ಭೂಕಂಪಕ್ಕೂ ಮುನ್ನ ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದ ನೆದರ್ಲ್ಯಾಂಡಿನ ಸಂಶೋಧಕ: ಭವಿಷ್ಯ ಅಲ್ಲಗಳೆದ ಭೂಕಂಪಶಾಸ್ತ್ರಜ್ಞರು

ಆಮ್ಸ್ಟರ್ಡ್ಯಾಮ್: ಫೆಬ್ರವರಿ 3 ರಂದು ನೆದರ್ಲ್ಯಾಂಡಿನ ಸಂಶೋಧಕ ಫ್ರಾಂಕ್ ಹೂಗರ್‌ಬೀಟ್ಸ್ ತಮ್ಮ ಟ್ವೀಟ್ ನಲ್ಲಿ 7.5 ಕ್ಕಿಂತ ಹೆಚ್ಚು ತೀವ್ರತೆಯ ಭೂಕಂಪವು ಈ ಪ್ರದೇಶವನ್ನು ಅಪ್ಪಳಿಸುತ್ತದೆ ಎಂದು ಭವಿಷ್ಯ ನುಡಿದಿದ್ದರು. ಮೂರು ದಿನಗಳ ಬಳಿಕ ಅವರ ಭವಿಷ್ಯ ನಿಜವಾಗಿದ್ದು, ಸೋಮವಾರದಂದು ಭಾರಿ ಭೂಕಂಪವು ಟರ್ಕಿ ಮತ್ತು ಸಿರಿಯಾದಲ್ಲಿ ಸಾವಿರಾರು ಜನರನ್ನು ಬಲಿತೆಗೆದುಕೊಂಡಿತು. ಅಷ್ಟೇ ಅಲ್ಲ. ಫ್ರಾಂಕ್ ತಮ್ಮ ಸಂಶೋಧನಾ ಏಜೆನ್ಸಿಯ ಪೋಸ್ಟ್ ಅನ್ನು ಮರುಟ್ವೀಟ್ ಮಾಡಿದ್ದರು. ಅದರಲ್ಲಿ ಮೊದಲನೆಯ ಭೂಕಂಪವನ್ನು ಅನುಸರಿಸಿ ದೊಡ್ಡ ಭೂಕಂಪನ ನಡೆಯಲಿದೆ ಎಂದು […]

ಇಂದ್ರಾಳಿ ರೈಲ್ವೆ ಬ್ರಿಡ್ಜ್ ರಸ್ತೆ ಕಾಮಗಾರಿ ಮಾರ್ಚ್ ನೊಳಗೆ ಪೂರ್ಣ: ಜಿಲ್ಲಾಧಿಕಾರಿಗೆ ಸಭೆಯಲ್ಲಿ ರಾ.ಹೆ ಅಧಿಕಾರಿಗಳಿಂದ ಮಾಹಿತಿ

ಉಡುಪಿ: ಮಂಗಳವಾರದಂದು ಉಡುಪಿ ತಾಲೂಕು ಕಚೇರಿಯಲ್ಲಿ, ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ-ಉಡುಪಿ ಚತುಷ್ಪಥ ರಸ್ತೆ ಕಾಮಗಾರಿ ಸಭೆಯು ಜಿಲ್ಲಾಧಿಕಾರಿ ಕೂರ್ಮಾ ರಾವ್ ಅಧ್ಯಕ್ಷತೆಯಲ್ಲಿ ನಡೆಯಿತು. ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬಳಿ ರಸ್ತೆ ಕಾಮಗಾರಿ ನಡೆಸುವ ಕುರಿತಂತೆ ಇದ್ದ ಎಲ್ಲಾ ಸಮಸ್ಯೆಗಳು ಇತ್ಯರ್ಥಗೊಂಡಿದ್ದು, ಕಾಮಗಾರಿ ನಿರ್ವಹಣೆಗೆ ಒಂದು ವಾರದಲ್ಲಿ ಆದೇಶ ಬರಲಿದ್ದು, ಮಾರ್ಚ್ ಒಳಗೆ ಕಾಮಗಾರಿಯನ್ನು ಮುಕ್ತಾಯಗೊಳಿಸಲಾಗುವುದು ಮತ್ತು ಪರ್ಕಳ ವ್ಯಾಪ್ತಿಯಲ್ಲಿ ರಸ್ತೆ ಕಾಮಗಾರಿ ನಡೆಸದಂತೆ ಕೋರ್ಟ್ ನಿಂದ ತಡೆ ಇರುವ ಬಗ್ಗೆ ರಾಷ್ಟ್ರೀಯ ಹೆದ್ದಾರಿ ವಿಭಾಗದ […]

ಕಿದಿಯೂರು ಹೋಟೆಲ್ ನಾಗಸನ್ನಿಧಿಯಲ್ಲಿ ವಾರ್ಷಿಕ ಪೂಜೆ

ಉಡುಪಿ: ಕಿದಿಯೂರು ಹೋಟೆಲ್ ಕಾರ್ಣಿಕ ಕೇತ್ರ ನಾಗ ಸನ್ನಿಧಿಯಲ್ಲಿ ಸೋಮವಾರದಂದು 37ನೇ ವರ್ಷದ ವಾರ್ಷಿಕ ಪೂಜಾ ಮಹೋತ್ಸವ ಕಬಿಯಾಡಿ ಜಯರಾಂ ಆಚಾರ್ಯ ಇವರ ಮಾರ್ಗದರ್ಶನದಲ್ಲಿ, ಮುರಳೀ ಭಟ್ ಬಳಗದವರಿಂದ ಧಾರ್ಮಿಕ ಪೂಜಾ ವಿಧಾನಗಳಾದ ಆಶ್ಲೇಷ ಬಲಿ, ನವಕ ಕಲಶ ಪ್ರಧಾನ ಹೋಮ, ಕ್ಷೀರಾಭಿಷೇಕ ಹಾಗೂ ಗೆಂದಾಳಿ ಬೊಂಡಾಭಿಷೇಕ ನಡೆಯಿತು. ವಿಶೇಷ ಹೂವಿನ ಅಲಂಕಾರ ಮಹಾ ಪೂಜೆ ಬಳಿಕ ಭಕ್ತರು ಅನ್ನಸಂತರ್ಪಣೆಯಲ್ಲಿ ಪಾಲ್ಗೊಂಡರು. ಹೋಟೆಲ್ ಮಾಲಕ ಭುವನೇಂದ್ರ ಕಿದಿಯೂರು, ಶ್ರೀಮತಿ ಹೀರಾ ಬಿ.ಕಿದಿಯೂರು, ಜಿತೇಶ್ ಕಿದಿಯೂರು, ಭವ್ಯಶ್ರೀ ಕಿದಿಯೂರು, […]