ಸಂಸತ್ತಿನಲ್ಲಿ ಪ್ರಧಾನಿ ಮೋದಿ ಧರಿಸಿದ್ದು ಪ್ಲಾಸ್ಟಿಕ್ ಬಾಟಲಿಗಳ ಮರುಬಳಕೆಯಿಂದ ಮಾಡಿದ ಜಾಕೆಟ್!
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಸಂಸತ್ತಿನಲ್ಲಿ ಪ್ಲಾಸ್ಟಿಕ್ ಬಾಟಲಿಗಳಿಂದ ಮರುಬಳಕೆ ಮಾಡಿದ ವಸ್ತುಗಳಿಂದ ತಯಾರಿಸಿದ ತೋಳಿಲ್ಲದ ಜಾಕೆಟ್ ಧರಿಸಿದ್ದರು. ಬುಧವಾರ ಲೋಕಸಭೆಯಲ್ಲಿ ಪ್ರಧಾನಿಯವರು ತಿಳಿ ನೀಲಿ ಬಣ್ಣದ “ಸದ್ರಿ” ಜಾಕೆಟ್ ಧರಿಸಿ ಬಂದಿದ್ದರು. ಮೋದಿ ಧರಿಸಿರುವ ಈ ಜಾಕೆಟ್ ಪ್ಲಾಸ್ಟಿಕ್ ಬಾಟಲಿಗಳಿಂದ ಮರುಬಳಕೆ ಮಾಡಲಾದ ವಸ್ತುಗಳಿಂದ ಮಾಡಲ್ಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಮವಾರ ಬೆಂಗಳೂರಿನಲ್ಲಿ ನಡೆದ ಇಂಡಿಯಾ ಎನರ್ಜಿ ವೀಕ್‌ನಲ್ಲಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಅವರು ಕಂಪನಿಯ “ಅನ್‌ಬಾಟಲ್ಡ್” ಉಪಕ್ರಮದ ಅಡಿಯಲ್ಲಿ ಸಮವಸ್ತ್ರವನ್ನು ಬಿಡುಗಡೆ […]
ಜೂಲಿ-ರೋಮಿಯೋ-ಹನಿ-ರಾಂಬೊ: ಟರ್ಕಿಯಲ್ಲಿ ಭಾರತೀಯ ಶ್ವಾನದಳದ ನಾಲ್ಕು ಹೀರೋಗಳು
ಸೈಪ್ರಸ್: ಫೆಬ್ರವರಿ 6 ರಂದು ಟರ್ಕಿ ಮತ್ತು ಸಿರಿಯಾದಲ್ಲಿ 7.8 ತೀವ್ರತೆಯ ಭೂಕಂಪನದ ನಂತರ, 5,000 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದು, ವಿಶ್ವದ ಬಹುತೇಕ ದೇಶಗಳು ಟರ್ಕಿಗೆ ಸಹಾಯ ಹಸ್ತ್ ಚಾಚಿವೆ. ಭಾರತವೂ ಕೂಡಾ ಶ್ವಾನದಳ ಮತ್ತು 101 ಸದಸ್ಯರ ಎನ್.ಡಿ.ಆರ್.ಎಫ್ ತಂಡವನ್ನು ಕಳುಹಿಸಿದ್ದು, ತಂಡವು ಅದಾಗಲೇ ರಕ್ಷಣಾ ಕಾರ್ಯದಲ್ಲಿ ನಿರತವಾಗಿದೆ. ಈ ಮಧ್ಯೆ ಶ್ವಾನದಳದಲ್ಲಿ ಜೂಲಿ, ರೋಮಿಯೋ, ಹನಿ ಮತ್ತು ರಾಂಬೊ ಎನ್ನುವ ನಾಲ್ಕು ಶ್ವಾನಗಳು ರಕ್ಷಣಾ ಕಾರ್ಯಾಚರಣೆಯ ಭಾಗವಾಗಿವೆ. ಈ ಲ್ಯಾಬ್ರಡಾರ್ ತಳಿಯ […]
ರಾಷ್ಟ್ರೀಯ ಯುವ ಸಂಸತ್ ಉತ್ಸವ ಭಾಷಣ ಸ್ಪರ್ಧೆ: ಜಿಲ್ಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
ಉಡುಪಿ: ಭಾರತದ ಗಣತಂತ್ರ ದಿವಸದ ಪ್ರಯುಕ್ತ ಬೆಂಗಳೂರಿನಲ್ಲಿ ಆಯೋಜಿಸಲಾದ ರಾಜ್ಯ ಮಟ್ಟದ ಆನ್‌ಲೈನ್- ವರ್ಚುವಲ್ ಮೋಡ್‌ನಲ್ಲಿ ನಡೆದ ರಾಷ್ಟ್ರೀಯ ಯುವ ಸಂಸತ್ ಉತ್ಸವ -2023 ಭಾಷಣ ಸ್ಪರ್ಧೆಯಲ್ಲಿ ಜಿಲ್ಲೆಯ ವೈಕುಂಟ ಬಾಳಿಗ ಕಾನೂನು ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿ ವಾಸುದೇವ ತಿಲಕ್ ಅವರು ‘ಭಾರತದಲ್ಲಿ ಮಹಿಳಾ ಸುರಕ್ಷತೆ – ಸವಾಲುಗಳು ಮತ್ತು ಪರಿಹಾರ’ ವಿಷಯದಲ್ಲಿ ದ್ವಿತೀಯ ಸ್ಥಾನ ಹಾಗೂ ಮಾಹೆ ಮಣಿಪಾಲದ ಸಮೂಹ ಸಂವಹನ ಮತ್ತು ಮಾಧ್ಯಮದ ವಿದ್ಯಾರ್ಥಿನಿ ಲೇರಿಸಾ ಡಿಸೋಜ ಅವರು ‘ಹವಾಮಾನ ಬದಲಾವಣೆ ಮತ್ತು […]
ಗ್ರಾಮ ಪಂಚಾಯತ್ ಉಪ ಚುನಾವಣೆಯ ವೇಳಾಪಟ್ಟಿ ಪ್ರಕಟ
ಉಡುಪಿ: ಗ್ರಾಮ ಪಂಚಾಯತ್ ಉಪ ಚುನಾವಣೆ -2023 ಕ್ಕೆ ಸಂಬಂಧಿಸಿದಂತೆ, ಅವಧಿ ಮುಕ್ತಾಯವಾಗುವ ಗ್ರಾಮ ಪಂಚಾಯತ್‌ಗಳ ಸದಸ್ಯ ಸ್ಥಾನಗಳಿಗೆ ಹಾಗೂ ವಿವಿಧ ಕಾರಣಗಳಿಂದ ತೆರವಾಗಿರುವ ಹಾಗೂ ಖಾಲಿ ಉಳಿದಿರುವ ಗ್ರಾಮ ಪಂಚಾಯತ್‌ಗಳ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗವು ಅಧಿಸೂಚನೆ ಹೊರಡಿಸಿದೆ. ಜಿಲ್ಲೆಯ ಬ್ರಹ್ಮಾವರ ತಾಲೂಕು ಹಾವಂಜೆ ಗ್ರಾಮ ಪಂಚಾಯತ್ ಹಾಗೂ ಕುಂದಾಪುರ ತಾಲೂಕು ಕುಂಭಾಶಿ ಗ್ರಾಮ ಪಂಚಾಯತ್‌ನ ತಲಾ ಒಂದು ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದ್ದು, ನಾಮಪತ್ರಗಳನ್ನು ಸಲ್ಲಿಸಲು ಫೆಬ್ರವರಿ […]
ಫೆಬ್ರವರಿ 14 ರಂದು “ಕೌ ಹಗ್ಗಿಂಗ್ ಡೇ” ಆಚರಿಸಲು ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿ ಮನವಿ
ನವದೆಹಲಿ: ಹಸುಗಳನ್ನು ಅಪ್ಪಿಕೊಳ್ಳುವ ಮೂಲಕ ಭಾವನಾತ್ಮಕ ಶ್ರೀಮಂತಿಕೆ ಮತ್ತು ಸಾಮೂಹಿಕ ಸಂತೋಷವನ್ನು ತರಲು ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯು ಫೆಬ್ರವರಿ 14 ರಂದು “ಕೌ ಹಗ್ಗಿಂಗ್ ಡೇ” ಆಚರಿಸಲು ಬುಧವಾರ ಮನವಿ ಮಾಡಿದೆ. ಗೋವು ಭಾರತೀಯ ಸಂಸ್ಕೃತಿ ಮತ್ತು ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬು ಎಂದು ನಮಗೆಲ್ಲರಿಗೂ ತಿಳಿದಿದೆ, ನಮ್ಮ ಜೀವನದ ಆಧಾರವನ್ನು ಮತ್ತು ಪಶು ಸಂಪತ್ತು ಮತ್ತು ಜೀವವೈವಿಧ್ಯತೆಯನ್ನು ಪ್ರತಿನಿಧಿಸುತ್ತದೆ. ತಾಯಿಯಂತೆ, ಎಲ್ಲವನ್ನು ನೀಡುವ, ಮಾನವೀಯತೆಗೆ ಸಂಪತ್ತನ್ನು ಒದಗಿಸುವ ಅದರ ಪೋಷಣೆಯ ಸ್ವಭಾವದಿಂದಾಗಿ ಇದನ್ನು ‘ಕಾಮಧೇನು’ ಮತ್ತು […]