ಫೆ.11 ರಿಂದ15 ರ ವರೆಗೆ ಜಿಲ್ಲೆಯ ವಿವಿಧೆಡೆಗಳಲ್ಲಿ ವಿದ್ಯುತ್ ವ್ಯತ್ಯಯ
ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಫೆಬ್ರವರಿ 11 ರಿಂದ 14 ರ ವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. ಫೆ. 11 ರಂದು ಬೆಳಗ್ಗೆ 8 ರಿಂದ ಸಂಜೆ 6 ರ ವರೆಗೆ ಕಾಪು ತಾಲೂಕಿನ ಬೆಳಪು ಗ್ರಾಮದಲ್ಲಿ 2*10 ಎಂ.ವಿ.ಎ, 110/11 ಕೆ.ವಿ ವಿದ್ಯುತ್ ಕೇಂದ್ರ ಮತ್ತು 110/11 ಕೆ.ವಿ ವಿದ್ಯುತ್ ಕೇಂದ್ರ ನಂದಿಕೂರಿನಿಂದ 110/11 ಕೆ.ವಿ ವಿದ್ಯುತ್ ಕೇಂದ್ರ ಬೆಳಪುವರೆಗೆ 110 […]
ಫೆ.11 ರಂದು ವಿಕಲಚೇತನರಿಗೆ ಉಚಿತವಾಗಿ ಸಾಧನ ಸಲಕರಣೆಗಳ ವಿತರಣೆ
ಉಡುಪಿ: ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ವಿಕಲಾಂಗ ವ್ಯಕ್ತಿಗಳ ಸಬಲೀಕರಣ ಇಲಾಖೆ ಹಾಗೂ ಆರ್ಟಿಫಿಶಿಯಲ್ ಲಿಂಬ್ಸ್ ಮ್ಯಾನುಫ್ಯಾಕ್ಚರಿಂಗ್ ಕಾರ್ಪೋರೇಷನ್ ಆಫ್ ಇಂಡಿಯಾ (ಅಲಿಮ್ಕೋ) ಇವರ ಸಹಯೋಗದಲ್ಲಿ ಸಾಮಾಜಿಕ ಅಧಿಕಾರಿತಾ ಶಿಬಿರ ಕೇಂದ್ರ ಸರ್ಕಾರದ ವಿಶೇಷ ಅಡಿಪ್ ಯೋಜನೆಯಡಿ ವಿಕಲಚೇತನರಿಗೆ ಉಚಿತವಾಗಿ ಸಾಧನ ಸಲಕರಣೆಗಳ ಸಮರ್ಪಣೆ ಕಾರ್ಯಕ್ರಮವು ಫೆಬ್ರವರಿ 11 ರಂದು ಬೆಳಗ್ಗೆ 11.30 ಕ್ಕೆ ನಗರದ ಮಿಷನ್ ಕಾಂಪೌಂಡ್ ಬೆಸೆಲ್ ಮಿಷನರೀಸ್ ಮೆಮೋರಿಯಲ್ ಆಡಿಟೋರಿಯಮ್ ನಲ್ಲಿ ನಡೆಯಲಿದೆ.
ಮೊದಲ ಬಾರಿಗೆ ಜಮ್ಮು-ಕಾಶ್ಮೀರದಲ್ಲಿ 5.9 ಮಿಲಿಯನ್ ಟನ್ ಲಿಥಿಯಂ ನಿಕ್ಷೇಪ ಪತ್ತೆ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ದೇಶದಲ್ಲಿ ಮೊದಲ ಬಾರಿಗೆ 5.9 ಮಿಲಿಯನ್ ಟನ್ ಲಿಥಿಯಂ ನಿಕ್ಷೇಪಗಳು ಪತ್ತೆಯಾಗಿವೆ ಎಂದು ಭಾರತದ ಗಣಿ ಸಚಿವಾಲಯ ಗುರುವಾರ ಪ್ರಕಟಿಸಿದೆ. ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ಸಲಾಲ್-ಹೈಮಾನ ಪ್ರದೇಶದಲ್ಲಿ 5.9 ಮಿಲಿಯನ್ ಟನ್‌ಗಳ ಲಿಥಿಯಂ ಊಹಿಸಲಾದ ಸಂಪನ್ಮೂಲಗಳನ್ನು (ಜಿ3) ಮೊದಲ ಬಾರಿಗೆ ಭಾರತದ ಭೂವೈಜ್ಞಾನಿಕ ಸಮೀಕ್ಷೆ ಸ್ಥಾಪಿಸಿದೆ ಎಂದು ಸಚಿವಾಲಯ ತಿಳಿಸಿದೆ. ಲಿಥಿಯಂ ಮತ್ತು ಚಿನ್ನ ಸೇರಿದಂತೆ 51 ಖನಿಜ ಬ್ಲಾಕ್‌ಗಳನ್ನು ಆಯಾ ರಾಜ್ಯ ಸರ್ಕಾರಗಳಿಗೆ ಹಸ್ತಾಂತರಿಸಲಾಗಿದೆ ಎಂದು ಅದು […]
ಗೃಹ ಸಚಿವ ಅಮಿತ್ ಶಾ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವದಲ್ಲಿ ಭಾಗಿ: ಸಂಚಾರ ಮಾರ್ಗದಲ್ಲಿ ಬದಲಾವಣೆ
ಪುತ್ತೂರು: ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವ ಸಮಾರಂಭಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಫೆ.11ರಂದು ಪುತ್ತೂರಿಗೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಕಾರ್ಯಕ್ರಮಗಳ ವಿವರಗಳನ್ನು ನೀಡಲಾಗಿದ್ದು, ಮೊದಲು ಮುಖ್ಯಮಂತ್ರಿ ಬೊಮ್ಮಾಯಿ ವಿವೇಕಾನಂದ ಇಂಜಿನಿಯರ್ ಕಾಲೇಜಿಗೆ ಆಗಮಿಸಿ ಕೃಷಿ ಮೇಳದಲ್ಲಿ ಪಾಲ್ಗೊಂಡು ನಂತರ 3.25 ಗಂಟೆಗೆ ತೆಂಕಿಲ ಸಮಾವೇಶಕ್ಕೆ ತೆರಳಿದ್ದಾರೆ. ಕಣ್ಣೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಗೃಹ ಸಚಿವ ಅಮಿತ್ ಷಾ 2.20 ಕ್ಕೆ ಬಿಎಸ್ಎಫ್ ಹೆಲಿಕಾಪ್ಟರ್ ಮೂಲಕ ಈಶ್ವರಮಂಗಲ ಗಜಾನನ ಶಾಲೆ ಹೆಲಿಪ್ಯಾಡ್ ಗೆ 2.45 ತಲುಪಿ, ಹನುಮಗಿರಿ […]
ವಿದೇಶಕ್ಕೆ ಉದ್ಯೋಗಕ್ಕೆ ತೆರಳುವ ಮುನ್ನ ಎಲ್ಲಾ ಮಾಹಿತಿ ಪಡೆಯಲು ವಲಸೆ ಕೇಂದ್ರದಿಂದ ನೆರವು
ಉಡುಪಿ: ವಿದೇಶಗಳಿಗೆ ಉದ್ಯೋಗ ಅರಸಿ ತೆರಳಿದಾಗ ಅಲ್ಲಿ ಉಂಟಾಗುವ ಎಲ್ಲಾ ರೀತಿಯ ಸಮಸ್ಯೆಗಳನ್ನು ಎದುರಿಸಲು ಯಾರನ್ನು ಸಂಪರ್ಕಿಸಬೇಕು ಎಂಬ ಮಾಹಿತಿಯಿದ್ದಾಗ ಮಾತ್ರ ಅವುಗಳನ್ನು ಎದುರಿಸಲು ಸಾಧ್ಯ ಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್ ಹೇಳಿದರು. ಅವರು ಗುರುವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಮೂಲಕ ಜಾರಿಗೊಳಿಸುತ್ತಿರುವ ಅಂತಾರಾಷ್ಟ್ರೀಯ ವಲಸೆ ಕೇಂದ್ರದ ಕುರಿತು ಭಾಗೀದಾರಿ ಇಲಾಖೆಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ […]