ಕರಾವಳಿ ತೀರದ ಮೇರು ಕಲೆ ಯಕ್ಷಗಾನಕ್ಕೆ ಮೊದಲ ರಾಷ್ಟ್ರಪ್ರಶಸ್ತಿಯನ್ನು ತಂದಿತ್ತವರು ಹಾರಾಡಿ ರಾಮಗಾಣಿಗರು

ಉಡುಪಿ ಜಿಲ್ಲೆಯ ಬ್ರಹ್ಮಾವರದ ಬಳಿಯ ಹಾರಾಡಿಯಲ್ಲಿ 1902 ಮೇ 27 ರಂದು ಸುಬ್ಬಣ್ಣ ಗಾಣಿಗ ಮತ್ತು ಕೊಲ್ಲು ದಂಪತಿಗಳ 2 ನೇ ಪುತ್ರನಾಗಿ ಜನಿಸಿದ ರಾಮ ಗಾಣಿಗರ ವಿದ್ಯಾಭ್ಯಾಸ ಬೈಕಾಡಿಯ ಐಗಳ ಮಠದಲ್ಲಿ 2 ನೇ ತರಗತಿಯವರೆಗೆ ಮಾತ್ರ . ತನ್ನ 14 ನೇ ವಯಸ್ಸಿನಲ್ಲಿ ಮಾರಣಕಟ್ಟೆ ಮೇಳದಲ್ಲಿ ಬಾಲಗೋಪಾಲನಾಗಿ ಮೊದಲು ಗೆಜ್ಜೆ ಕಟ್ಟಿ, ಯಕ್ಷಗಾನ ರಂಗಕ್ಕೆ ಪಾದಾರ್ಪಣೆ ಮಾಡಿದ ಇವರು, ಒಂದು ವರ್ಷದ ತಿರುಗಾಟದ ಬಳಿಕ ಇತಿಹಾಸ ಪ್ರಸಿದ್ಧ ಮಂದಾರ್ತಿ ಮೇಳಕ್ಕೆ ಸೇರ್ಪಡೆಗೊಂಡರು. ಆ ಮೇಳವೊಂದರಲ್ಲಿ […]