ಕಡಂದಲೆಯಲ್ಲಿ ವಿದ್ಯುತ್ ಕೇಂದ್ರ ಸ್ಥಾಪನೆಗೆ 2229 ಮರಗಳ ತೆರವು: ಅಹವಾಲು ಸಭೆ
ಉಡುಪಿ: ಮೂಡಬಿದ್ರೆ ತಾಲೂಕು ಕಡಂದಲೆ ಗ್ರಾಮದ ಸ.ನಂ. 308/ಪಿ1 ರಲ್ಲಿ ವಿದ್ಯುತ್ ಕೇಂದ್ರದ ಸ್ಥಾಪನೆಗಾಗಿ ಕಾಯ್ದಿರಿಸಿದ ಸ್ಥಳದಲ್ಲಿನ ಒಟ್ಟು 2229 ಮರಗಳನ್ನು ತೆರವುಗೊಳಿಸುವ ಹಿನ್ನೆಲೆ, ಫೆಬ್ರವರಿ 20 ರಂದು ಬೆಳಗ್ಗೆ 11 ಗಂಟೆಗೆ ಮೂಡಬಿದ್ರೆ ವಲಯ ಅರಣ್ಯಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸಭೆ ನಡೆಯಲಿದೆ. ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು ಸಭೆಯಲ್ಲಿ ಹಾಜರಾಗಿ ಅಥವಾ ಸದ್ರಿ ದಿನಾಂಕದ ಒಳಗೆ ವೃಕ್ಷ ಅಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ, ಕುಂದಾಪುರ ವಿಭಾಗ ಇವರಿಗೆ ಲಿಖಿತ ರೂಪದಲ್ಲಿ ಅಥವಾ […]
ತೆರಿಗೆ ವಂಚನೆ ತನಿಖೆ: ಬಿಬಿಸಿ ಯ ದೆಹಲಿ, ಮುಂಬೈ ಕಚೇರಿಗಳಲ್ಲಿ ಆದಾಯ ತೆರಿಗೆ ಇಲಾಖೆಯಿಂದ ಸಮೀಕ್ಷೆ
ನವದೆಹಲಿ: ಆದಾಯ ತೆರಿಗೆ ಇಲಾಖೆಯ 15 ಅಧಿಕಾರಿಗಳ ತಂಡ ಮಂಗಳವಾರ ದೆಹಲಿ ಮತ್ತು ಮುಂಬೈನಲ್ಲಿರುವ ಬಿಬಿಸಿ ಕಚೇರಿಗಳಲ್ಲಿ ಸಮೀಕ್ಷೆ ನಡೆಸಿತು. ಅಂತಾರಾಷ್ಟ್ರೀಯ ತೆರಿಗೆ ಮತ್ತು ವರ್ಗಾವಣೆ ಬೆಲೆ ಅಕ್ರಮಗಳ ಆರೋಪಗಳಿಗೆ ಸಂಬಂಧಿಸಿದಂತೆ ಬಿಬಿಸಿ ಕಚೇರಿಗಳಲ್ಲಿ ಶೋಧ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಇಲಾಖೆಯು ಕಂಪನಿಯ ವ್ಯವಹಾರ ಕಾರ್ಯಾಚರಣೆಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಮತ್ತು ಅದರ ಭಾರತೀಯ ಅಂಗಕ್ಕೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ. ಸಮೀಕ್ಷೆಯ ಭಾಗವಾಗಿ, ಆದಾಯ ತೆರಿಗೆ ಇಲಾಖೆಯು ಕಂಪನಿಯ […]
ಸುಪ್ರೀಂ ಕೋರ್ಟ್ ನೂತನ ನ್ಯಾಯಮೂರ್ತಿ ಅರವಿಂದ ಕುಮಾರ್ ಇವರಿಗೆ ಅಭಿನಂದನೆ
ಉಡುಪಿ: ಮೂಲತಃ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿದ್ದು, ಉಡುಪಿ ಜಿಲ್ಲೆಯ ಆಡಳಿತಾತ್ಮಕ ನ್ಯಾಯಮೂರ್ತಿಗಳಾಗಿಯೂ ಸೇವೆ ಸಲ್ಲಿಸಿರುವ ನ್ಯಾಯಮೂರ್ತಿ ಅರವಿಂದ ಕುಮಾರ್ ಇವರು ಅಕ್ಟೋಬರ್ 2021ರಲ್ಲಿ ಗುಜರಾತ್ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯ ಮೂರ್ತಿಗಳಾಗಿ ನೇಮಕಾತಿಗೊಂಡಿದ್ದು,ಇದೀಗ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಪದೋನ್ನತಿ ಹೊಂದಿದ ಇವರಿಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಫೆ. 13ರಂದು ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ಅವರಿಗೆ ಪುಷ್ಪಗುಚ್ಚ ನೀಡಿ ಉಡುಪಿ ವಕೀಲರ ಸಂಘದ ವತಿಯಿಂದ ಅಭಿನಂದಿಸಲಾಯಿತು. ಉಡುಪಿ ವಕೀಲರ ಸಂಘದ […]
ಕರ್ನಾಟಕದಲ್ಲಿ ಪೂರ್ಣ ಬಹುಮತದ ಬಿಜೆಪಿ ಸರಕಾರ ರಚನೆ: ಅಮಿತ್ ಶಾ
ನವದೆಹಲಿ: ಕರ್ನಾಟಕದಲ್ಲಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ. ಕಳೆದ 2 ತಿಂಗಳಲ್ಲಿ ನಾನು ರಾಜ್ಯಕ್ಕೆ 5 ಬಾರಿ ಭೇಟಿ ನೀಡಿದ್ದೇನೆ. ನಾನು ರಾಜ್ಯದ ಜನರ ನಾಡಿಮಿಡಿತವನ್ನು ಗ್ರಹಿಸಿದ್ದೇನೆ ಮತ್ತು ಪ್ರಧಾನಿ ಮೋದಿಯವರ ಜನಪ್ರಿಯತೆಯನ್ನು ನೋಡಿದ್ದೇನೆ. ಕರ್ನಾಟಕದಲ್ಲಿ ಬಿಜೆಪಿಗೆ ಭಾರಿ ಜನಾದೇಶ ಸಿಗಲಿದೆ.ಮಂಡ್ಯದ ಜನತೆ ಕೂಡ ಈಗ ವಂಶ ಪಾರಂಪರ್ಯ ಪಕ್ಷಗಳನ್ನು ಬಿಟ್ಟು ಬಿಜೆಪಿಯ ಅಭಿವೃದ್ಧಿ ರಾಜಕಾರಣವನ್ನು ಒಪ್ಪಿಕೊಳ್ಳುತ್ತಿದ್ದಾರೆ. ಇದು ಕರ್ನಾಟಕಕ್ಕೆ ಶುಭ ಸೂಚನೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಮುಂಬರುವ ರಾಜ್ಯಗಳ […]
ವಿಮೆನ್ ಇಂಡಿಯಾ ಮೂವ್ಮೆಂಟ್ ಉಡುಪಿ ಜಿಲ್ಲಾ ಸಮಿತಿ ಸದಸ್ಯರ ಆಯ್ಕೆ
ಉಡುಪಿ: ವಿಮೆನ್ ಇಂಡಿಯಾ ಮೂವ್ಮೆಂಟ್ (ವಿಮ್) ಉಡುಪಿ ಜಿಲ್ಲಾ ಸಮಿತಿಯು ಸೋಮವಾರದಂದು ಅಸ್ತಿತ್ವಕ್ಕೆ ಬಂದಿದ್ದು ಜಿಲ್ಲಾಧ್ಯಕ್ಷೆಯಾಗಿ ನಾಝಿಯಾ ಕನ್ನಂಗಾರ್ , ಉಪಾಧ್ಯಕ್ಷೆಯಾಗಿ ನಸೀಮಾ ಕಾಪು, ಕಾರ್ಯದರ್ಶಿಯಾಗಿ ರಹೀಮಾ ಕಾಪು, ಜೊತೆ ಕಾರ್ಯದರ್ಶಿಯಾಗಿ ಹಾಜರ, ಕೋಶಾಧಿಕಾರಿಯಾಗಿ ಲುತ್ಫಿಯಾ ಹಾಗೂ ಜಿಲ್ಲಾ ಸಮಿತಿ ಸದಸ್ಯರುಗಳಾಗಿ ನಿಹಾನ ಪರ್ವೀನ್, ಫರಾ, ಝೊಹರಾ, ರೆಹ್ಮತುನ್ನೀಸಾ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ನಸ್ರಿಯಾ ಬೆಳ್ಳಾರೆ ಮಾತನಾಡಿ, ಪ್ರಸಕ್ತ ಭಾರತದಲ್ಲಿ ಮಹಿಳೆಯರು ಎದುರಿಸುತ್ತಿರುವ […]