ನಾಳೆ ಅಂಬಲಪಾಡಿಯಲ್ಲಿ ಉಡುಪಿಯ ಅತಿ ದೊಡ್ಡ ಶೋರೂಂ ‘ಮಾರುತಿ ಟೈಲ್ಸ್’ ಉದ್ಘಾಟನೆ

ಉಡುಪಿ: ಉಡುಪಿ ಅಂಬಲಪಾಡಿಯ ಕನ್ನರ್ಪಾಡಿ ಸರ್ವಿಸ್ ರಸ್ತೆಯ ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲಿ ಫೆ.17 ರಂದು ಸಂಜೆ 4 ಗಂಟೆಗೆ ಉಡುಪಿಯಲ್ಲಿಯೆ ಅತಿ ದೊಡ್ಡ ಶೋರೂಂ ಮಾರುತಿ ಟೈಲ್ಸ್ ಉದ್ಘಾಟನೆಗೊಳ್ಳಲಿದೆ. ಮುಖ್ಯ ಅತಿಥಿಗಳುಯಾಗಿ ಡಾ. ಜೆರ್ರಿ ವಿನ್ಸೆಂಟ್ ಡಯಾಸ್ ಅಧ್ಯಕ್ಷರು, ಬಿಲ್ಡರ್ಸ್ ಅಸೋಸಿಯೇಷನ್, ಕ್ರೆಡೈ, ಉಡುಪಿ, ಸುಧೀರ್ ಶೆಟ್ಟಿ, ವ್ಯವಸ್ಥಾಪಕ ನಿರ್ದೇಶಕರು, ಕೀರ್ತಿ ಕನ್‌ಸ್ಟ್ರಕ್ಷನ್ ಉಡುಪಿ, ಯೋಗೀಶ್ಚಂದ್ರಧರ್ (ವಾಸ್ತುಶಿಲ್ಪಿ) ಕಾರ್ಯದರ್ಶಿ, ಎಸಿಸಿಇಎ ಉಡುಪಿ, ಎಂ.ಡಿ.ಗಣೇಶ್ (ಸಿವಿಲ್ ಇಂಜಿನಿಯರ್) ಉಪಾಧ್ಯಕ್ಷರು, ಎಸಿಸಿಇಎ ಉಡುಪಿ, ವಿ ಗುರುಪ್ರಸಾದ್ ಭಟ್ ಅಧ್ಯಕ್ಷರು, ವಿದ್ಯುತ್ […]

ಫೆ.18ರಂದು ಹಿರಿಯಡ್ಕದಲ್ಲಿ ಸ್ವರ್ಣ ಟ್ರೋಫಿ- 2023 ಕ್ರಿಕೆಟ್ ಪಂದ್ಯಾಟ

ಹಿರಿಯಡ್ಕ: ಎಮ್.ಜೆ. Friends ಮುಂಡಾಜೆ, ಬೊಮ್ಮರಬೆಟ್ಟು, ಹಿರಿಯಡ್ಕ ಇವರ ಆಶ್ರಯದಲ್ಲಿ 5ನೇ ವರ್ಷದ ಸೀಮಿತ ಓವರಿನ 40 ಗಜಗಳ ಹೊನಲು ಬೆಳಕಿನ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಕೂಟ ಸ್ವರ್ಣ ಟ್ರೋಫಿ – 2023 ಫೆ.18ರಂದು ಸಂಜೆ 6 ಗಂಟೆಗೆ ಮುಂಡುಜೆ ಶಾಲಾ ಮೈದಾನದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಪ್ರಥಮ 22,222/- ಹಾಗೂ ಶಾಶ್ವತ ಫಲಕ ದ್ವಿತೀಯ 11,111/- ಹಾಗೂ ಶಾಶ್ವತ ಫಲಕ ನಿರ್ಣಾಯಕರ ಹಾಗೂ ಸಂಘಟಕರ ತೀರ್ಮಾನವೇ ಅಂತಿಮ ತೀರ್ಮಾನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿರಿ: 8151820891, 9900716852, […]

ಕಾಪುವಿನಲ್ಲಿ ತೇಲುವ ರೆಸ್ಟೋರೆಂಟ್ ಹಾಗೂ ವಸತಿ ಗೃಹ ನಿರ್ಮಾಣ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಉಳಿಯಾರು ಗ್ರಾಮದಲ್ಲಿ ಪ್ರವಾಸಿ ಆಕರ್ಷಣೆಯಾಗಿ ತೇಲುವ ರೆಸ್ಟೋರೆಂಟ್ ಹಾಗೂ ವಸತಿಗೃಹ ನಿರ್ಮಾಣ ಬಗ್ಗೆ ಅಗತ್ಯವಿರುವ ಎಲ್ಲಾ ನಿಯಮಗಳನ್ನು ಪರಿಶೀಲಿಸಿ, ಮಂಜೂರಾತಿ ನೀಡುವಂತೆ ಜಿಲ್ಲಾಧಿಕಾರಿ ಕೂರ್ಮರಾವ್ ಎಂ ಹೇಳಿದರು. ಅವರು ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾಪು ತಾಲೂಕಿನ ಉಳಿಯಾರು ಗ್ರಾಮದ ಹಿನ್ನೀರಿನಲ್ಲಿ ಫ್ಲೋಟಿಂಗ್ ರೆಸ್ಟೋರೆಂಟ್ ಮತ್ತು ವಸತಿ ಗೃಹವನ್ನು ನಿರ್ಮಾಣ ಮಾಡಲು, ನಿಗದಿತ ಶುಲ್ಕ ಪಾವತಿ […]

ಪ್ರಾಣಿಗಳ ಕಳೇಬರ ವಿಲೇವಾರಿಗೆ ಮೊಬೈಲ್ ಚಿತಾಗಾರ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.

ಉಡುಪಿ: ಜಿಲ್ಲೆಯಲ್ಲಿ ಅನಾಥವಾಗಿ ಸಾವಿಗೀಡಾಗುವ ಪ್ರಾಣಿಗಳ ಕಳೇಬರವನ್ನು ಪರಿಸರ ಸ್ವೀಕಾರ್ಹವಾಗಿ ವಿಲೇವಾರಿ ಮಾಡಲು ಮೊಬೈಲ್ ಚಿತಾಗಾರ ವ್ಯವಸ್ಥೆಗಳನ್ನು ಮಾಡುವಂತೆ ಪಶುಪಾಲನಾ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮರಾವ್ ಎಂ ನಿರ್ದೇಶನ ನೀಡಿದರು. ಅವರು ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಾಣಿ ದಯಾ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಮತ್ತು ರಸ್ತೆ ಬದಿಯಲ್ಲಿ ಅಪಘಾತಕ್ಕೀಡಾಗಿ ಮತ್ತು ಇತರೆ ಕಾರಣಗಳಿಂದಾಗಿ ಸಾವಿಗೀಡಾಗುವ ಪ್ರಾಣಿಗಳ ಕಳೇಬರಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ವಿಲೇವಾರಿ ಮಾಡಲು ಸಾರ್ವಜನಿಕರಿಂದ ಆಕ್ಷೇಪ […]

ಸಂತ ಸೇವಾಲಾಲರ ಜೀವನಶೈಲಿ ಮತ್ತು ಆದರ್ಶಗಳನ್ನು ಅಳವಡಿಸಿಕೊಳ್ಳಿ

ಉಡುಪಿ: ಸಂತ ಸೇವಾಲಾಲ್ ಅವರ ಜೀವನಶೈಲಿ ಮತ್ತು ಆದರ್ಶಗಳನ್ನು ಕಾರ್ಯಕ್ಷೇತ್ರದಲ್ಲಿ ಅಳವಡಿಸಿಕೊಂಡು ಜನರಿಗೆ ಉತ್ತಮ ಸೇವೆ ನೀಡುವಂತೆ ನಗರಾಭಿವೃದ್ಧಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಮದನ್ ಮೋಹನ್ ಹೇಳಿದರು. ಅವರು ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮದಲ್ಲಿ ಸೇವಾಲಾಲರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಹಿಂದುಳಿದವರು, ಅಲ್ಪಸಂಖ್ಯಾತರು ಮತ್ತು ಸಣ್ಣ ಸಣ್ಣ ಸಮುದಾಯಗಳ […]