ಜಿಲ್ಲೆಯಲ್ಲಿ ಗರಿಷ್ಠ ಪ್ರಮಾಣದ ಮತದಾನಕ್ಕೆ ಪ್ರಯತ್ನ: ಪ್ರಸನ್ನ ಹೆಚ್

ಉಡುಪಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಮತದಾರರು ಮತದಾನ ಮಾಡುವ ಮೂಲಕ, ಗರಿಷ್ಠ ಪ್ರಮಾಣದ ದಾಖಲೆಯ ಮತದಾನ  ನಡೆಯುವಂತಾಗಲೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕರಿ ಪ್ರಸನ್ನ ಹೆಚ್ ಹೇಳಿದರು. ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಸ್ವೀಪ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಲ್ಲಾ ಇಲಾಖೆಗಳು ತಮ್ಮ ದೈನಂದಿನ ಕಾರ್ಯಕ್ರಮಗಳಲ್ಲಿ ಮತದಾನದ ಮಹತ್ವ ಕುರಿತ ಕಾರ್ಯಕಮ್ರಗಳನ್ನು ಜೋಡಣೆ ಮಾಡಿಕೊಳ್ಳುವದರ ಜೊತೆಗೆ ತಮ್ಮ ವ್ಯಾಪ್ತಿಯಲ್ಲಿ […]

ಬಡ ಮೀನುಗಾರರ ರಕ್ಷಣೆ ಮಾಡಲು ರಮೇಶ್ ಕಾಂಚನ್ ಮನವಿ

ಕರಾವಳಿ ಕರ್ನಾಟಕದ ಮೀನುಗಾರರ ಮೇಲೆ ಅನ್ಯರಾಜ್ಯದ ಮೀನುಗಾರರು ಮಾಡುತ್ತಿರುವ ಹಲ್ಲೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸುವುದರೊಂದಿಗೆ ರಾಜ್ಯದ ಬಡ ಮೀನುಗಾರರಿಗೆ ರಕ್ಷಣೆ ನೀಡುವಂತೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಆಗ್ರಹಿಸಿದ್ದಾರೆ. ಬಡ ಮೀನುಗಾರರ ಮೇಲೆ ವಿವಿಧ ರೀತಿಯಲ್ಲಿ ಹಲ್ಲೆಗಳು ಆಗುತ್ತಿದ್ದು ನೆರೆ ರಾಜ್ಯದಲ್ಲಿ ತಮ್ಮ ಹೊಟ್ಟೆ ಪಾಡಿಗಾಗಿ ತೆರಳಿದ್ದ ವೇಳೆ ಅವರಿಗೆ ಸೂಕ್ತ ರಕ್ಷಣೆ ಇಲ್ಲದೆ ಕರ್ತವ್ಯ ನಿರ್ವಹಿಸುವ ಪರಿಸ್ಥಿತಿ ಉಂಟಾಗಿರುವುದು ನಿಜಕ್ಕೂ ನೋವಿನ ಸಂಗತಿಯಾಗಿದೆ. ಸಾಹಸಮಯ ಜೀವನದೊಂದಿಗೆ ಸಮುದ್ರದಲ್ಲಿ ಕಾರ್ಯ ನಿರ್ವಹಿಸುವ […]