ಫೆ. 20 ರಂದು ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ
ಉಡುಪಿ: ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಫೆಬ್ರವರಿ 20 ರಂದು ಬೆಳಗ್ಗೆ 10.30 ಕ್ಕೆ ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ, ಡಿ.ಎಡ್ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ […]
ಕಾಪು ತೇಲುವ ರೆಸ್ಟೋರೆಂಟ್ ಹಾಗೂ ವಸತಿ ಗೃಹ ನಿಯಮ ಪರಿಶೀಲಿಸಿ ಮಂಜೂರಾತಿ
ಕಾಪು: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಉಳಿಯಾರು ಗ್ರಾಮದಲ್ಲಿ ಪ್ರವಾಸಿ ಆಕರ್ಷಣೆಯಾಗಿ ತೇಲುವ ರೆಸ್ಟೋರೆಂಟ್ ಹಾಗೂ ವಸತಿಗೃಹ ನಿರ್ಮಾಣ ಬಗ್ಗೆ ಅಗತ್ಯವಿರುವ ಎಲ್ಲಾ ನಿಯಮಗಳನ್ನು ಪರಿಶೀಲಿಸಿ, ಮಂಜೂರಾತಿ ನೀಡುವಂತೆ ಜಿಲ್ಲಾಧಿಕಾರಿ ಕೂರ್ಮರಾವ್ ಎಂ ಹೇಳಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾಪು ತಾಲೂಕಿನ ಉಳಿಯಾರು ಗ್ರಾಮದ ಹಿನ್ನೀರಿನಲ್ಲಿ ಫ್ಲೋಟಿಂಗ್ ರೆಸ್ಟೋರೆಂಟ್ ಮತ್ತು ವಸತಿ ಗೃಹವನ್ನು ನಿರ್ಮಾಣ ಮಾಡಲು, ನಿಗದಿತ ಶುಲ್ಕ ಪಾವತಿ ಬಗ್ಗೆ […]
ಅನಾಥ ಪ್ರಾಣಿಗಳ ಕಳೇಬರ ವಿಲೇವಾರಿಗೆ ಮೊಬೈಲ್ ಚಿತಾಗಾರದ ವ್ಯವಸ್ಥೆ: ಜಿಲ್ಲಾಧಿಕಾರಿ ಕೂರ್ಮಾರಾವ್
ಉಡುಪಿ: ಜಿಲ್ಲೆಯಲ್ಲಿ ಸಾವಿಗೀಡಾಗುವ ಅನಾಥ ಪ್ರಾಣಿಗಳ ಕಳೇಬರವನ್ನು ಪರಿಸರ ಸ್ವೀಕಾರ್ಹವಾಗಿ ವಿಲೇವಾರಿ ಮಾಡಲು ಮೊಬೈಲ್ ಚಿತಾಗಾರ ವ್ಯವಸ್ಥೆಗಳನ್ನು ಮಾಡುವಂತೆ ಪಶುಪಾಲನಾ ಇಲಾಖಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮರಾವ್ ಎಂ ನಿರ್ದೇಶನ ನೀಡಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಾಣಿ ದಯಾ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಮತ್ತು ರಸ್ತೆ ಬದಿಯಲ್ಲಿ ಅಪಘಾತಕ್ಕೀಡಾಗಿ ಮತ್ತು ಇತರೆ ಕಾರಣಗಳಿಂದಾಗಿ ಸಾವಿಗೀಡಾಗುವ ಪ್ರಾಣಿಗಳ ಕಳೇಬರಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ವಿಲೇವಾರಿ ಮಾಡಲು ಸಾರ್ವಜನಿಕರಿಂದ ಆಕ್ಷೇಪ ವ್ಯಕ್ತವಾಗುತ್ತಿದೆ ಎಂಬ […]
ಬುಡೋಕಾನ್ ಕರಾಟೆ ಸ್ಪರ್ಧೆ: ವಿದ್ಯೋದಯ ಪಬ್ಲಿಕ್ ಸ್ಕೂಲಿನ ಮಕ್ಕಳ ಅಮೋಘ ಸಾಧನೆ
ಉಡುಪಿ: ಬುಡೋಕಾನ್ ಕರಾಟೆ ಸೆಲ್ಫ್ ಡಿಫೆನ್ಸ್ ಅಸೋಸಿಯೇಶನ್ ಆಫ್ ಇಂಡಿಯಾ ಇವರ ಆಶ್ರಯದಲ್ಲಿ ಜನವರಿ 29 ರಂದು ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನಡೆದ ಬುಡೋಕಾನ್ ಧಮಾಕ ಸೀಸನ್ 3 ರಾಜ್ಯ ಮಟ್ಟದ ಕರಾಟೆ ಸ್ಪರ್ಧಾ ಕೂಟದಲ್ಲಿ ವಿದ್ಯೋದಯ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿಗಳು ಭಾಗವಹಿಸಿ 14 ಪ್ರಥಮ, 10 ದ್ವಿತೀಯ, 8 ತೃತೀಯ ಬಹುಮಾನಗಳನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ವಿದ್ಯೋದಯ ಪಬ್ಲಿಕ್ ಸ್ಕೂಲ್ ನ ಮುಖ್ಯೋಪಾಧ್ಯಾಯೆ ಅನಿತ ಪಿ.ರಾಜ್, ಶಾಲೆಯ ಶಿಕ್ಶಕಿಯಾದ ತುಷಾರ ಪಾಲನ್, […]
ಝೀ ಲರ್ನ್ ಪ್ರಿ ಸ್ಕೂಲ್ ಟೀಚರ್ ಟ್ರೈನಿಂಗ್ ನಲ್ಲಿ ಪ್ರವೇಶಾತಿ ಪ್ರಾರಂಭ
ಮಣಿಪಾಲ: ಪುಟಾಣಿಗಳಿಗೆ ಕಲಿಸುವ ಮನಸ್ಸು ಇದ್ದಲ್ಲಿ ಝೀ ಲರ್ನ್ ಪ್ರಿ ಸ್ಕೂಲ್ ಟೀಚರ್ ಟ್ರೈನಿಂಗ್ ಕಾರ್ಯಕ್ರಮಕ್ಕೆ ಪ್ರವೇಶಾತಿ ಪಡೆಯಿರಿ ಮತ್ತು ನಿಮ್ಮ ಶೈಕ್ಷಣಿಕ ಕೌಶಲ್ಯವನ್ನು ಅಭಿವೃದ್ದಿಪಡಿಸಿಕೊಳ್ಳಿ ವೈಶಿಷ್ಟ್ಯಗಳು: 3 ತಿಂಗಳ ಥಿಯರಿ ತರಗತಿಗಳು 1 ತಿಂಗಳ ಫೀಲ್ಡ್ ಇಂಟರ್ನ್ಶಿಪ್ ಪ್ರತಿ 15 ಟ್ರೈನಿಗಳಿಗೆ ಒಬ್ಬ ಟ್ರೈನರ್ ಅರ್ಹತೆ: ಕೇವಲ ಮಹಿಳೆಯರಿಗೆ ಮಾತ್ರ ಕನಿಷ್ಟ ಎಚ್.ಎಸ್.ಸಿ ಪಾಸಾಗಿರಬೇಕು 18 ವರ್ಷ ಮೇಲ್ಪಟ್ಟಿರಬೇಕು ಆಸಕ್ತರು ಸಂಪರ್ಕಿಸಿ: ನಂ 55ಬಿ, ಗೋಸ್ವಾಲ್ ಆಯುರ್ವೇದಿಕ್ ಸೆಂಟರ್ ಬಳಿ, ಅನಂತ ನಗರ 1 ನೇ […]