ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ವಸತಿ ಶಾಲೆಗಳಲ್ಲಿ ಪಿಯುಸಿವರೆಗೆ ಶಿಕ್ಷಣ: ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ರಾಜ್ಯದ ವಸತಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಪ್ರಸ್ತುತ 6 ನೇ ತರಗತಿಯಿಂದ 10 ತರಗತಿಯವರೆಗೆ ಉಚಿತ ಶಿಕ್ಷಣ ನೀಡಲಾಗುತ್ತಿದ್ದು, ಅದನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಪಿಯುಸಿ ವರೆಗೆ ಶಿಕ್ಷಣ ನೀಡುವ ಉದ್ದೇಶದಿಂದ ಮೇಲ್ದಜೇಗೇರಿಸಲು ನಿರ್ಧರಿಸಲಾಗಿದ್ದು, ಇದರಿಂದ ವಸತಿ ಶಾಲೆಯಲ್ಲಿ ಕಲಿಯುತ್ತಿರುವ ರಾಜ್ಯದ 40,000 ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಶನಿವಾರ ಕಳತ್ತೂರುನಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ […]

ಬನ್ನಂಜೆ ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ ಸಂಪನ್ನ

ಉಡುಪಿ: ಬನ್ನಂಜೆ ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಹಾಗೂ ವಾರ್ಷಿಕ ರಥೋತ್ಸವ ಭಕ್ತಿ ಸಡಗರದಿಂದ ಸಂಪನ್ನವಾಯಿತು. ಶ್ರೀನಿವಾಸ ತಂತ್ರಿಗಳ ನೇತೃತ್ವದಲ್ಲಿ ವಾಸುದೇವ ಉಪಾಧ್ಯಾಯ ಹಾಗೂ ಅರ್ಚಕ ವೃಂದ ಶತರುದ್ರಾಭಿಷೇಕ, ನವಕ ಪ್ರಧಾನ ಹೋಮ, ಎಳನೀರಿನ ಅಭಿಷೇಕ ನೆಡೆಸಿಕೊಟ್ಟರು. ವಿವಿಧ ಭಜನಾ ತಂಡಗಳಿಂದ ಭಜನೆ ಹಾಗೂ ಸಾಮೂಹಿಕ ಶಿವ ಮಂತ್ರ ಪಠಣ ಜರಗಿತು. ವಿಶೇಷ ಹೂವಿನ ಅಲಂಕಾರ ಹಾಗೂ ಉತ್ಸವ ಬಲಿ, ರಥೋತ್ಸವ, ವಸಂತಪೂಜೆ, ಪ್ರಸಾದ ವಿತರಣೆ, ಮನೋರಂಜನಾ ಕಾರ್ಯಕ್ರಮ ನಡೆಯಿತು. ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್ ರಾಮ್ ಬನ್ನಂಜೆ […]

ಬಿಜೆಪಿ ಹೊಸ ಶಕ್ತಿ ತುಂಬಲಿರುವ ಜೆ.ಪಿ. ನಡ್ಡಾ ಭೇಟಿ: ವೀಣಾ ಎಸ್.ಶೆಟ್ಟಿ

ಉಡುಪಿ: ಭಾರತೀಯಜನತಾ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾರವರು ಬೂತ್ ಸಮಿತಿ ಅಧ್ಯಕ್ಷರೊಂದಿಗೆ ನಡೆಸುವ ಸಭೆಯು ಉಡುಪಿ ಜಿಲ್ಲಾ ಬಿಜೆಪಿಗೆ ಹೊಸ ಶಕ್ತಿ ತುಂಬಲಿದೆ ಎಂದು ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ತಿಳಿಸಿದರು. ಅವರು ರಾಷ್ಟ್ರೀಯ ಅಧ್ಯಕ್ಷರ ಭೇಟಿಯ ಬಗ್ಗೆ ಜಿಲ್ಲಾ ಮಹಿಳಾ ಮೋರ್ಚಾದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಉಡುಪಿ ಜಿಲ್ಲೆಯ 5 ಸ್ಥಾನಗಳ ಬಿಜೆಪಿ ಗೆಲುವಿನ ಅಂತರ ಈ ಸಭೆಯಿಂದ ಹೆಚ್ಚಲಿದೆ ಎಂದು ತಿಳಿಸಿದರು. ಮಂಗಳೂರು ಪ್ರಭಾರಿ ಉದಯಕುಮಾರ್ ಶೆಟ್ಟಿ, ಜಿಲ್ಲಾಧ್ಯಕ್ಷ […]

ಎರಡನೆ ಬಾರಿಗೆ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಭಾಜನವಾದ ಶಿರ್ವ ಗ್ರಾಮ ಪಂಚಾಯತ್

ಬೆಳ್ಮಣ್: ಶಿರ್ವ ಗ್ರಾಮ ಪಂಚಾಯಿತಿಗೆ ಎರಡನೆ ಬಾರಿಗೆ ಗಾಂಧಿ ಗ್ರಾಮ ಪುರಸ್ಕಾರ ದೊರೆತಿರುವುದು ತುಂಬಾ ಸಂತಸದ ವಿಚಾರ. ಈ ಹಿಂದೆ 2020 ರಲ್ಲಿ ಶಿರ್ವ ಗ್ರಾಮ ಪಂಚಾಯಿತಿಯ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಾರಿಜಾ ಪೂಜಾರಿ ಹಾಗೂ ಉಪಾಧ್ಯಕ್ಷ ದೇವದಾಸ್ ನಾಯಕ್ ಅವಧಿಯಲ್ಲಿ ಗಾಂಧಿ ಗ್ರಾಮ ಗೌರವಕ್ಕೆ ಪಾತ್ರವಾಗಿದೆ. ವಾರಿಜಾ ಪೂಜಾರಿಯವರ ಅಧಿಕಾರಾವಧಿಯಲ್ಲಿ ಶಿರ್ವ ಗ್ರಾಮ ಪಂಚಾಯತ್ ಸ್ವಚ್ಛತೆಯನ್ನು ಪಾಲಿಸುವ ಸಲುವಾಗಿ ವಿಶೇಷ ಗಮನ ಹರಿಸಿ ಸಮಗ್ರವಾಗಿ ಹಸಿ ಕಸ ಹಾಗೂ […]

13ನೇ ವರ್ಷದ ಜಪ್ಪಿನಮೊಗರು “ಜಯ – ವಿಜಯ” ಜೋಡುಕರೆ ಕಂಬಳ ಕೂಟದ ಫಲಿತಾಂಶ

ಫೆ.18 ರಂದು ನಡೆದ 13ನೇ ವರ್ಷದ ಜಪ್ಪಿನಮೊಗರು “ಜಯ – ವಿಜಯ” ಜೋಡುಕರೆ ಕಂಬಳ ಕೂಟದ ಫಲಿತಾಂಶ ಇಂತಿದೆ. ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಕನೆಹಲಗೆ: 05 ಜೊತೆ ಅಡ್ಡಹಲಗೆ: 06 ಜೊತೆ ಹಗ್ಗ ಹಿರಿಯ: 14 ಜೊತೆ ನೇಗಿಲು ಹಿರಿಯ: 30 ಜೊತೆ ಹಗ್ಗ ಕಿರಿಯ: 23 ಜೊತೆ ನೇಗಿಲು ಕಿರಿಯ: 66 ಜೊತೆ ಒಟ್ಟು ಕೋಣಗಳ ಸಂಖ್ಯೆ: 144 ಜೊತೆ ಕನೆಹಲಗೆ: ( ನೀರು ನೋಡಿ ಬಹುಮಾನ ) ಪ್ರಥಮ: ಬೋಳಾರ ತ್ರಿಶಾಲ್ […]