ರೂಪಾ-ರೋಹಿಣಿ ವಾಗ್ವಾದ: ಹುದ್ದೆ ಇಲ್ಲದೆ ವರ್ಗಾವಣೆಗೆ ಆದೇಶ ನೀಡಿದ ರಾಜ್ಯ ಸರ್ಕಾರ
ಬೆಂಗಳೂರು: ಐಪಿಎಸ್ ಅಧಿಕಾರಿ ಡಿ ರೂಪ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಸಾರ್ವಜನಿಕ ವಾಗ್ವಾದದ ನಂತರ, ರಾಜ್ಯ ಸರ್ಕಾರ ಮಂಗಳವಾರ ಇಬ್ಬರು ಅಧಿಕಾರಿಗಳನ್ನೂ ವರ್ಗಾವಣೆ ಮಾಡಿದೆ. ಸರ್ಕಾರದ ಆದೇಶದ ಪ್ರಕಾರ ಅವರಿಗೆ ಯಾವುದೇ ಹುದ್ದೆ ನೀಡಿಲ್ಲ. ಇಬ್ಬರು ಅಧಿಕಾರಿಗಳಿಗೆ ನೋಟಿಸ್ ಸಹ ಜಾರಿ ಮಾಡಲಾಗಿದ್ದು, ಸಹೋದ್ಯೋಗಿಗಳ ವಿರುದ್ಧ ಯಾವುದೇ ಆರೋಪಗಳನ್ನು ಮಾಡಲು ಮಾಧ್ಯಮಗಳನ್ನು ಸಂಪರ್ಕಿಸದಂತೆ ಸೂಚಿಸಲಾಗಿದೆ. ರೂಪಾ ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕಿಯಾಗಿ ಸೇವೆ ಸಲ್ಲಿಸುತ್ತಿದ್ದರೆ, ಸಿಂಧೂರಿ ಅವರನ್ನು […]
ಫೆ. 22 ರಿಂದ ಮಾರ್ಚ್ 05 ರವರೆಗೆ ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅತಿರುದ್ರಯಾಗ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು
ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಭಿವೃದ್ಧಿ ಟ್ರಸ್ಟ್ ಮತ್ತು ಅತಿರುದ್ರ ಮಹಾಯಾಗ ಸಮಿತಿಯ ಜಂಟಿ ಆಶ್ರಯದಲ್ಲಿ ಫೆಬ್ರವರಿ 22 ರಿಂದ ಮಾರ್ಚ್ 05 ರವರೆಗೆ ನಡೆಯಲಿದ್ದು ಶೃಂಗೇರಿ ಶಾರದಾಪೀಠಾಧೀಶ್ವರ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳ ನೇತೃತ್ವದಲ್ಲಿ ಜರುಗಲಿದೆ. ಕಾರ್ಯಕ್ರಮಗಳ ವಿವರ 22 ಬುಧವಾರ ಧಾರ್ಮಿಕ ಸಭಾ ಕಾರ್ಯಕ್ರಮ : ಸಂಜೆ 5ರಿಂದ ಧಾರ್ಮಿಕ ಉಪನ್ಯಾಸ : ಕು. ಅಕ್ಷಯಾ ಗೋಖಲೆ, ಉಪನ್ಯಾಸಕರು, ಕಾರ್ಕಳ ಸಾಂಸ್ಕೃತಿಕ ಕಾರ್ಯಕ್ರಮ : ಸಂಜೆ 7 ರಿಂದ ‘ಯಕ್ಷ ಗಾಯನ ವೈಭವ’ […]
ಉಡುಪಿಯಲ್ಲಿ ಪ್ರಥಮ ಬಾರಿಗೆ ಡ್ರ್ಯಾಗನ್ ಬೋಟ್ ರೇಸ್ ಆಯೋಜನೆ
ಉಡುಪಿ: ಇಲ್ಲಿನ ಮದಿಸಾಲು ನದಿಯ ಉಪ್ಪೂರುವಿನಲ್ಲಿ ಮಂಗಳವಾರದಂದು ಇದೇ ಮೊದಲ ಬಾರಿಗೆ ಡ್ರ್ಯಾಗನ್ ಬೋಟ್ ರೇಸ್ ಅನ್ನು ಆಯೋಜಿಸಲಾಗಿದೆ. 21 ರಾಜ್ಯಗಳಿಂದ 700 ಕ್ಕೂ ಹೆಚ್ಚು ಜನರು ಈ ಬೋಟ್ ರೇಸ್ ನಲ್ಲಿ ಭಾಗವಹಿಸುತ್ತಿದ್ದಾರೆ ಎಂದು ಶಾಸಕ ರಘುಪತಿ ಭಟ್ ಮಾಹಿತಿ ಹಂಚಿಕೊಂಡಿದ್ದಾರೆ. For the time in Karnataka one of the most enthralling and exciting water sport, Dragon boat race is being held on 21/02/2023 at Upporu, […]
ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಚಿತ್ರನಟ ರಕ್ಷಿತ್ ಶೆಟ್ಟಿ
ಶಿವಪಾಡಿ: ಇಲ್ಲಿನ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆ. 22 ರಿಂದ ಮಾರ್ಚ್ 05 ರವರೆಗೆ ನಡೆಯಲಿರುವ ‘ಅತಿರುದ್ರ ಮಹಾಯಾಗ’ ನಡೆಯಲಿದ್ದು, ಕಾರ್ಯಕ್ರಮದ ತಯಾರಿಗಳು ಭರ್ಜರಿಯಾಗಿ ನಡೆಯುತ್ತಿವೆ. ಈ ಸಂದರ್ಭ ಚಿತ್ರ ನಟ ರಕ್ಷಿತ್ ಶೆಟ್ಟಿ ಸೋಮವಾರದಂದು ಶಿವಪಾಡಿಯ ಉಮಾಮಹೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ದೇವಸ್ಥಾನದ ಅಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷ ಮಹೇಶ್ ಠಾಕೂರ್ ಉಪಸ್ಥಿತರಿದ್ದರು.
21 ಇಂದು ಸಂಜೆ ಬ್ರಹ್ಮಾವರದ ಮದರ್ ಪ್ಯಾಲೇಸ್ ಹೋಟೆಲಿನಲ್ಲಿ ಎಫ್.ಎಸ್.ಎಸ್.ಎ.ಐ ಪರವಾನಿಗೆಯ ಬಗ್ಗೆ ಮಾಹಿತಿ ಕಾರ್ಯಗಾರ
ಬ್ರಹ್ಮಾವರ: ಆಹಾರ ಸುರಕ್ಷಣೆ ಮತ್ತು ಗುಣಮಟ್ಟ ಪ್ರಾಧಿಕಾರ ಉಡುಪಿ ಜಿಲ್ಲೆ ಮತ್ತು ಉಡುಪಿ ಜಿಲ್ಲಾ ಬೇಕರಿ ಮತ್ತು ಖಾದ್ಯ ತಿನಿಸುಗಳ ತಯಾರಕರ ಮತ್ತು ಮಾರಾಟಗಾರರ ಸಂಘ, ಇವರ ಜಂಟಿ ಸಹಯೋಗದಲ್ಲಿ ಅಂಕಿತಾಧಿಕಾರಿಗಳಾದ ಡಾಕ್ಟರ್ ಪ್ರೇಮಾ ನಂದ ಕೆ ಇವರಿಂದ FSSAI ಪರವಾನಿಗೆ ಇದರ ಬಗ್ಗೆ ಮಾಹಿತಿ ಕಾರ್ಯಗಾರವು ಫೆ. 21 ಇಂದು ಸಂಜೆ ಬ್ರಹ್ಮಾವರದ ಮದರ್ ಪ್ಯಾಲೇಸ್ ಹೋಟೆಲಿನ ಸಭಾಂಗಣದಲ್ಲಿ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರೆಲ್ಲರೂ ಭಾಗವಹಿಸಿ, ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕಾಗಿ ಸಂಘದ ಪ್ರಕಟಣೆ ತಿಳಿಸಿದೆ.