ಬಿದನಗೆರೆ ಬಸವೇಶ್ವರ ಮಠ ಶಿವರಾತ್ರಿ ಉತ್ಸವದಲ್ಲಿ ರಾಗಿಣಿ ದ್ವಿವೇದಿ ಭಾಗಿ

ಕುಣಿಗಲ್: ಬಿದನಗೆರೆ ಬಸವೇಶ್ವರ ಮಠದಲ್ಲಿ ವಿಶ್ವದ ಅತಿದೊಡ್ಡ 161 ಅಡಿಯ ಪಂಚಮುಖಿ ಆಂಜನೇಯ ಪ್ರತಿಮೆ ಅನಾವರಣ ಮತ್ತು ಶಿವರಾತ್ರಿ ಉತ್ಸವ ನಡೆಯಿತು. ಚಿತ್ರನಟಿ ರಾಗಿಣಿ ದ್ವಿವೇದಿ ಭಾಗವಹಿಸಿದರು.

ಪುತ್ತೂರು ಆದಿವಾಸಿ ಸಮುದಾಯ ಭವನ ಉದ್ಘಾಟನೆ: ಶಾಸಕರಿಂದ ಪರಿಶೀಲನೆ

ಉಡುಪಿ: ಪುತ್ತೂರಿನಲ್ಲಿ ನೂತನವಾಗಿ ನಿರ್ಮಿಸಿರುವ ಆದಿವಾಸಿ ಸಮುದಾಯ ಭವನದ ಉದ್ಘಾಟನೆಯನ್ನು ಫೆಬ್ರವರಿ 26 ರಂದು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಶ್ರೀರಾಮುಲು ಅವರು ನೆರವೇರಿಸಲಿದ್ದು, ಬುಧವಾರದಂದು ಶಾಸಕ ಕೆ. ರಘುಪತಿ ಭಟ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪೂರ್ವ ತಯಾರಿಯ ಬಗ್ಗೆ ಅಧಿಕಾರಿಗಳು ಹಾಗೂ ಕೊರಗ ಸಮುದಾಯದವರೊಂದಿಗೆ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ನಾಮ ನಿರ್ದೇಶಿತ ಸದಸ್ಯೆ ಸುಬೇದಾ, ಉಡುಪಿ ತಹಶೀಲ್ದಾರ್ ಭೀಮಸೇನ್, ಕಂದಾಯ ನಿರೀಕ್ಷಕ ಉಪೇಂದ್ರ, ಸಮಗ್ರ […]

ಶ್ರೀ ಅನಂತೇಶ್ವರ ದೇವಸ್ಥಾನದ ವಾರ್ಷಿಕ ಉತ್ಸವ ಸಂಪನ್ನ

ಉಡುಪಿ: ಇಲ್ಲಿನ ಇತಿಹಾಸ ಪ್ರಸಿದ್ಧ ಶ್ರೀ ಅನಂತೇಶ್ವರ ದೇವಸ್ಥಾನದ ವಾರ್ಷಿಕ ಉತ್ಸವವು ದೇವಸ್ಥಾನದ ಆಡಳಿತ ಮೊಕೇಸರರಾದ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಶ್ರೀ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಸಂಪನ್ನಗೊಂಡಿತು.

ಕಾಂಗ್ರೆಸ್ ಬೂತ್ ಅಧ್ಯಕ್ಷರ ಮಾಹಿತಿ ಕಾರ್ಯಗಾರ ಸಭೆ

ಉಡುಪಿ: ವಿಧಾನಸಭಾ ಕ್ಷೇತ್ರದ ಬಿ.ಎಲ್.ಎ-2 ಮತ್ತು ಬೂತ್ ಅಧ್ಯಕ್ಷರ ಮಾಹಿತಿ ಕಾರ್ಯಗಾರ ಸಭೆಯು ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಮಂಗಳವಾರದಂದು ನಡೆಯಿತು. ಕಾರ್ಯಕ್ರಮದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಸ್ತುವಾರಿ, ತ್ರಿಶ್ಶೂರಿನ ಸಂಸದ ಟಿ.ಎನ್ ಪ್ರತಾಪನ್, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಬರುವ 132 ಬಿ.ಎಲ್.ಎ-2 ಮತ್ತು ಬೂತ್ ಅಧ್ಯಕ್ಷರು ಹಾಗೂ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಬರುವ 94 ಬಿ.ಎಲ್.ಎ-2 ಮತ್ತು ಬೂತ್ ಅಧ್ಯಕ್ಷರಿಗೆ ಶಾಲು ಹೊದಿಸಿ ಹೂಗುಚ್ಛ ನೀಡಿ ಗೌರವಿಸಿ, ಪಕ್ಷವನ್ನು ತಳಮಟ್ಟದಿಂದ […]

ಬ್ರಹ್ಮಾವರ: 94 ಸಿಸಿ ಅರ್ಜಿಗಳನ್ನು ಆದ್ಯತೆ ಮೇಲೆ ವಿಲೇವಾರಿ ಮಾಡಲು ಜಿಲ್ಲಾಧಿಕಾರಿ ಸೂಚನೆ

ಬ್ರಹ್ಮಾವರ: ತಾಲೂಕು ವ್ಯಾಪ್ತಿಯಲ್ಲಿ ಸಲ್ಲಿಕೆಯಾಗಿರುವ 94 ಸಿಸಿ ಕುರಿತ ಅರ್ಜಿಗಳನ್ನು ಆದಷ್ಟು ಶೀಘ್ರದಲ್ಲಿ ವಿಲೇ ಮಾಡುವಂತೆ ತಹಸೀಲ್ದಾರ್ ಅವರಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು. ಅವರು ಮಂಗಳವಾರ ಕಚ್ಚೂರು ಮಾಲ್ತಿದೇವಿ ಸಭಾಭವನದಲ್ಲಿ ನಡೆದ, ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯ ಸಾರ್ವಜನಿಕರು 94 ಸಿಸಿ ಹಾಗೂ ನಿವೇಶನ ನೀಡುವ ಕುರಿತು ಸಲ್ಲಿಸಿದ್ದ ಅರ್ಜಿಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ವಸತಿ ಮತ್ತು ನಿವೇಶನ ಕುರಿತು ಸಲ್ಲಿಕೆಯಾಗಿರುವ […]