ವಿಕಲಚೇತನರ/ಹಿರಿಯನಾಗರಿಕರ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿಕಲಚೇತನರಿಗೆ ಇಲಾಖೆಯ ಸೌಲಭ್ಯಗಳನ್ನು ತಲುಪಿಸುವ ಸಲುವಾಗಿ ಜಿಲ್ಲೆಯ ನಗರಸಭೆ ವ್ಯಾಪ್ತಿಯಲ್ಲಿ – 2, ಪುರಸಭೆ ಮತ್ತು ಪಟ್ಟಣ ಪಂಚಾಯತ್‌ಗಳಲ್ಲಿ ತಲಾ ಒಬ್ಬರಂತೆ ನಗರ ಪುನರ್ವಸತಿ ಕಾರ್ಯಕರ್ತರ ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಲಾ ಒಬ್ಬರಂತೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಾತಿಗೆ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣ ಹಾಗೂ ಅನುತ್ತೀರ್ಣರಾಗಿರುವ, ಶೇ.40 ಕ್ಕಿಂತ ಮೇಲ್ಪಟ್ಟು ವಿಕಲತೆ ಇರುವ ಬಗ್ಗೆ ವೈದ್ಯಕೀಯ […]
ರಾಷ್ಟ್ರೀಯ ಹೆದ್ದಾರಿ ಬಳಿ ವಾಹನ ಚಾಲಕರ ಮೂಲ ಸೌಕರ್ಯಕ್ಕಾಗಿ ಖಾಲಿ ನಿವೇಶನ ಬೇಕಾಗಿದೆ

ಉಡುಪಿ: ರಾಜ್ಯ ಸರಕಾರದ ವೇ ಸೈಡ್ ಅಮೇನಿಟೀಸ್ (ದಾರಿ ಬದಿ ಸೌಕರ್ಯ) ಯೋಜನೆಯಡಿ ವಾಹನದ ಚಾಲಕರಿಗೆ ರಾಷ್ಟ್ರೀಯ ಹೆದ್ದಾರಿಯ ಬಳಿ ಮೂಲ ಸೌಕರ್ಯ ಒದಗಿಸಲು ಜಿಲ್ಲೆಯ ಕುಂದಾಪುರ ಮತ್ತು ಬೈಂದೂರು ಹಾಗೂ ಪಡುಬಿದ್ರೆ ಮತ್ತು ಹೆಜಮಾಡಿಯ ಮಧ್ಯೆ ರಾಷ್ಟ್ರೀಯ ಹೆದ್ದಾರಿಯ 2 ಬದಿ ಸುಮಾರು 5 ರಿಂದ 10 ಎಕರೆ ಖಾಲಿ ನಿವೇಶನದ ಅವಶ್ಯಕತೆ ಇದ್ದು, ಆಸಕ್ತಿಯುಳ್ಳ ಜಾಗದ ಮಾಲೀಕರು ಮಾರಾಟ ಮಾಡಲು ಇಚ್ಚಿಸಿದ್ದಲ್ಲಿ ಪ್ರಕಟಣೆಯ ಒಂದು ವಾರದ ಒಳಗಾಗಿ ತಮ್ಮ ಜಾಗದ ಮೂಲ ದಾಖಲೆಗಳೊಂದಿಗೆ ಪ್ರಾದೇಶಿಕ […]
ಚಿತ್ರನಟ ಅನಂತ್ ನಾಗ್ ಇಂದು ಬಿಜೆಪಿಗೆ ಸೇರ್ಪಡೆ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಖ್ಯಾತ ನಟ ಅನಂತ್ ನಾಗ್ ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಳ್ಳುತ್ತಿದ್ದಾರೆ. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸಂಜೆ 4.30ಕ್ಕೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಬಿಜೆಪಿಗೆ ಸೇರುತ್ತಿದ್ದಾರೆ ಎಂದು ವರದಿಯಾಗಿದೆ. 1980 ರಲ್ಲೇ ರಾಜಕೀಯ ರಂಗಕ್ಕೆ ಪಾದಾರ್ಪಣೆ ಮಾಡಿರುವ ಅನಂತ್ ನಾಗ್ 1983ರಲ್ಲಿ ಜನತಾ ಪಕ್ಷದ ಪ್ರಚಾರಕರಾಗಿದ್ದರು. 1985 ಮತ್ತು 1989 ರಲ್ಲಿಯೂ ಪಕ್ಷದ ಪ್ರಚಾರಕರಾಗಿ ಗುರುತಿಸಿಕೊಂಡ ಇವರು, 1983ರಲ್ಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಶಿವರಾಮ ಕಾರಂತರ […]
ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿಅತಿರುದ್ರ ಮಹಾಯಾಗ ಪ್ರಾರಂಭ

ಶಿವಪಾಡಿ: ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಬುಧವಾರದಂದು ಋತ್ವಿಜರಿಂದ ಪೂಜೆಯೊಂದಿಗೆ ಅತಿರುದ್ರ ಮಹಾಯಾಗ ಶುಭಾರಂಭಗೊಂಡಿತು. ಬೆಳಿಗ್ಗೆ ಅತಿರುದ್ರ ಯಾಗಮಂಟಪದಲ್ಲಿ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ಶತಚಂಡಿಕಾ ಯಾಗಮಂಟಪದಲ್ಲಿ ಶತಚಂಡಿಕಾ ಯಾಗ ಪ್ರಾರಂಭಗೊಂಡಿತು. ಈ ಸಂದರ್ಭದಲ್ಲಿ ಅತಿರುದ್ರ ಮಹಾಯಾಗ ಸಮಿತಿಯ ಅಧ್ಯಕ್ಷ ಶಾಸಕ ರಘುಪತಿ ಭಟ್, ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಮಹೇಶ್ ಠಾಕೂರ್, ಬೆಂಗಳೂರಿನ ಮಾಜಿ ವಿಧಾನಸಭಾ ಸದಸ್ಯ ದಯಾನಂದ ರೆಡ್ಡಿ, ಡಾ. ಜಿ. ಶಂಕರ್, ನಟ ರಕ್ಷಿತ್ ಶೆಟ್ಟಿ ಮತ್ತು ಕುಂದಾಪುರ […]
ಬ್ರಹ್ಮಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪನೆ: ಜಿಲ್ಲಾ ಬಿಜೆಪಿ ಅಭಿನಂದನೆ

ಉಡುಪಿ: ಈಡಿಗ-ಬಿಲ್ಲವ ಸೇರಿ 26 ಜಾತಿಗಳ ಸಮಗ್ರ ಅಭಿವೃದ್ಧಿಗಾಗಿ ‘ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ’ವನ್ನು ಸ್ಥಾಪಿಸಿ ಆದೇಶ ಹೊರಡಿಸುವ ಮೂಲಕ ನುಡಿದಂತೆ ನಡೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಅಭಿನಂದನೆ ಸಲ್ಲಿಸಿದೆ. ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪಿಸಿ ಆದೇಶ ದೊರಕಿರುವ ಹಿನ್ನೆಲೆಯಲ್ಲಿ ಬಿಲ್ಲವ, ಈಡಿಗ ಸಹಿತ 26 ಜಾತಿಗಳ ಶೈಕ್ಷಣಿಕ ಮತ್ತು ಔದ್ಯೋಗಿಕ ಸವಲತ್ತುಗಳ ಜೊತೆಗೆ ಈ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ ಅನೇಕ ವರ್ಷಗಳಿಂದ ಕೇಳಿ ಬಂದಿರುವ […]