ರಾಷ್ಟ್ರೀಯ ಯುವ ಸ್ವಯಂಸೇವಕರ ನೇಮಕಾತಿಗಾಗಿ ಅರ್ಜಿ ಆಹ್ವಾನ
ಉಡುಪಿ: ಕೇಂದ್ರ ಸರ್ಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರದ ವತಿಯಿಂದ ರಾಷ್ಟ್ರೀಯ ಯುವ ಸ್ವಯಂಸೇವಕರ ನೇಮಕಾತಿಗೆ ಜಿಲ್ಲೆಯ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಕನಿಷ್ಠ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿದ್ದು, 18-29 ವರ್ಷ ವಯೋಮಿತಿ ಒಳಗಿರಬೇಕು ಹಾಗೂ ಯಾವುದೇ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಾಗಿರಬಾರದು. ಅರ್ಜಿ ಸಲ್ಲಿಸಲು ಮಾರ್ಚ್ 9 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.nyks.nic.in ಅಥವಾ ಜಿಲ್ಲಾ ಯುವಜನ ಅಧಿಕಾರಿಗಳು, ನೆಹರು ಯುವ ಕೇಂದ್ರ, […]
ಭಾವನೆಗಳ ಅಭಿವ್ಯಕ್ತಿಗೆ ಮಾತೃಭಾಷೆ ಸೂಕ್ತ: ಪ್ರೊ. ಪಿ. ಗಿರಿಧರ ಕಿಣಿ
ಮಣಿಪಾಲ: ನಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಮಾತೃಭಾಷೆಯಂಥ ಸೂಕ್ತ ಮಾಧ್ಯಮ ಮತ್ತೊಂದಿಲ್ಲ. ಪ್ರಸ್ತುತ ಮಾತೃಭಾಷೆಯಲ್ಲಿ ಪ್ರಾಥಮಿಕ ಶಾಲೆಯ ಬೋಧನಾ ವಿಧಾನಕ್ಕೆ ಸರಕಾರ ಹೆಚ್ಚಿನ ಒತ್ತು ನೀಡುತ್ತಿದೆ. ಈ ನಿಟ್ಟಿನಲ್ಲಿ ಅಂತಾರಾಷ್ಟ್ರೀಯ ಮಾತೃಭಾಷಾ ದಿನವನ್ನು ಬಹುಭಾಷೆಯಲ್ಲಿ ಶಿಕ್ಷಣ ಒದಗಿಸುವ ಧ್ಯೇಯದೊಂದಿಗೆ ಆಚರಿಸುವ ಸಂಕಲ್ಪವನ್ನು ಯುನೆಸ್ಕೋ ಹೊಂದಿದೆ. ಈ ದಿನದಂದು ಸಾಹಿತ್ಯ- ಕಲೆಗಳಿಗೆ ಸಂಬಂಧಿಸಿದ ಅಂತರ್‌ಶಿಸ್ತೀಯ ಮಹತ್ತ್ವದ ಕಾರ್ಯಕ್ರಮಗಳನ್ನು ಪ್ರಸ್ತುತ ಪಡಿಸುತ್ತಿರುವುದು ಅರ್ಥಪೂರ್ಣ ಎಂದು ಮಣಿಪಾಲ್ ಅಕಾಡೆಮಿ ಹೈಯರ್ ಎಜುಕೇಶನ್‌ನ ರಿಜಿಸ್ಟ್ರಾರ್ ಪ್ರೊ. ಪಿ. ಗಿರಿಧರ ಕಿಣಿ ಅಭಿಪ್ರಾಯ ವ್ಯಕ್ತಪಡಿಸಿದರು. ಮಾಹೆಯ […]
ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಅತಿರುದ್ರಯಾಗ ಧಾರ್ಮಿಕ ಸಭಾ ಕಾರ್ಯಕ್ರಮ ಉದ್ಘಾಟನೆ
ಶಿವಪಾಡಿ: ಇಲ್ಲಿನ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಅತಿರುದ್ರ ಮಹಾಯಾಗದ ಮೊದಲನೆ ದಿನದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಯಾಗದ ಪ್ರಧಾನ ಅರ್ಚಕ ವಿನಾಯಕ ಉಡುಪ ದೀಪ ಬೆಳಗಿಸಿ ಉದ್ಘಾಟಿಸಿದರು. ಕು. ಅಕ್ಷಯ ಗೋಖಲೆ ಧಾರ್ಮಿಕ ಉಪನ್ಯಾಸ ನೀಡಿದರು. ಜಂಸಾಲೆ ರಾಘವೇಂದ್ರ ಆಚಾರ್ಯ ಸಾರಥ್ಯದಲ್ಲಿ “ಯಕ್ಷಗಾನ ವೈಭವ” ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿದವು. ಈ ಸಂದರ್ಭದಲ್ಲಿ ಆರ್.ಎಸ್.ಎಸ್ ಹಿರಿಯರಾದ ಶಂಭು ಶೆಟ್ಟಿ, ಶಾಸಕ ರಘುಪತಿ ಭಟ್, ಯಾಗದ ರೂವಾರಿ ವಾಗೇಶ್ ಶಾಸ್ತ್ರಿ, ಸಹಕಾರಿ ರಂಗದ ಧುರೀಣ ಬೋಳ ಸದಾಶಿವ ಶೆಟ್ಟಿ, […]
ಕಾಪು: ಆರೋಗ್ಯ ಮಾಹಿತಿ ಹಾಗೂ ಆರೋಗ್ಯ ಕಾರ್ಡು ನೋಂದಣಿ ಕಾರ್ಯಕ್ರಮ
ಕಾಪು: ಶಿರ್ವ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಧರ್ಮಸ್ಥಳ ಗ್ರಾಮಾಭಿವ್ರದ್ದಿ ಯೋಜನೆ ಕಾಪು ಇದರ ಆಶ್ರಯದಲ್ಲಿ ಆರೋಗ್ಯ ಮಾಹಿತಿ ಹಾಗೂ ತಪಾಸಣಾ ಕಾರ್ಯಕ್ರಮ ಹಾಗೂ ಅರೋಗ್ಯ ಕಾರ್ಡ್ ನೋಂದಣಿ ಕಾರ್ಯಕ್ರಮವು ಚಂದ್ರನಗರ ಬಟರ್ ಫ್ಲೈ ಗೆಸ್ಟ್ ಹೌಸ್ & ಪಾರ್ಟಿ ಹಾಲ್ ನ ಸಭಾಂಗಣದಲ್ಲಿ ಸಮಾಜ ಸೇವಕ ಫಾರೂಕ್ ಚಂದ್ರನಗರ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಾರ್ವಜನಿಕರ ಆರೋಗ್ಯ ತಪಾಸಣೆ ನಡೆಸಿ, ಆರೋಗ್ಯ ಕಾರ್ಡ್ ನೋಂದಣಿ ಮಾಡಲಾಯಿತು. ಈ ಸಂದರ್ಭದಲ್ಲಿ ಜನಸಂಪರ್ಕ ಜನಸೇವಾ ವೇದಿಕೆ ಅಧ್ಯಕ್ಷ ಸಮಾಜ ಸೇವಕ […]
ಫೆ.23 ರಿಂದ 26 ರವರೆಗೆ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ರಾಷ್ಟ್ರೀಯ ಡ್ರ್ಯಾಗನ್ ಬೋಟ್ ರೇಸಿಂಗ್
ಮಂದಾರ್ತಿ: ಡ್ರ್ಯಾಗನ್ ಬೋಟ್ ಮತ್ತು ಕಯಾಕಿಂಗ್ ಅಸೋಸಿಯೇಶನ್ ಆಶ್ರಯದಲ್ಲಿ ನಡೆಯುವ ರಾಷ್ಟ್ರ ಮಟ್ಟದ 11ನೇ ಡ್ರ್ಯಾಗನ್ ಬೋಟ್ ರೇಸಿಂಗ್ ಬ್ರಹ್ಮಾವರ ಸಮೀಪದ ಹೇರೂರು ಸೇತುವೆ ಬಳಿಯ ಮಡಿಹೊಳೆಯಲ್ಲಿ ಫೆ.23 ರಿಂದ 26ರವರೆಗೆ ನಡೆಯಲಿದೆ. ಜಿಲ್ಲೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಡ್ರ್ಯಾಗನ್ ಬೋಟ್ ರೇಸ್ ಆಯೋಜಿಸಲಾಗಿದೆ. ಈ ಕ್ರೀಡಾಕೂಟದಲ್ಲಿ 18 ರಾಜ್ಯಗಳಿಂದ 18 ತಂಡಗಳು ಭಾಗವಹಿಸುವ ನಿರೀಕ್ಷೆ ಇದ್ದು, 700ಕ್ಕೂ ಅಧಿಕ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ವಿಜೇತರು ಏಷ್ಯನ್ ಗೇಮ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ ಎಂದು ಶಾಸಕ ಕೆ. ರಘುಪತಿ […]