ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಉಡುಪಿ ಜಿಲ್ಲೆ. ಇದರಿಂದ FSSAI ಪರವಾನಿಗೆ ಕುರಿತು ಮಾಹಿತಿ ಕಾರ್ಯಗಾರ.
ಬ್ರಹ್ಮಾವರ: ಉಡುಪಿ ಜಿಲ್ಲಾ ಬೇಕರಿ ಮತ್ತು ಖಾದ್ಯ ತಿನಿಸುಗಳ ತಯಾರಕರ ಮತ್ತು ಮಾರಾಟಗಾರರ ಸಂಘ ಮತ್ತು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಉಡುಪಿ ಜಿಲ್ಲೆ ಇದರ ಸಹಯೋಗದೊಂದಿಗೆ ಫೆ. 21 ರಂದು ಬ್ರಹ್ಮಾವರದ ಮದರ್ ಪ್ಯಾಲೇಸ್ ಸಭಾಂಗಣದಲ್ಲಿ ತಿಂಗಳ ಸಾಮಾನ್ಯ ಸಭೆಯಲ್ಲಿ FSSAI ಪರವಾನಿಗೆ ಮಾಹಿತಿ ಶಿಬಿರ ಕಾರ್ಯಕ್ರಮವನ್ನು ಅಂಕಿತಾಧಿಕಾರಿಗಳಾದ ಡಿ. ಪ್ರೇಮಾನಂದ ಕೆ ಉದ್ಘಾಟಿಸಿ FSSAI ಪರವಾನಿಗೆ ಬಗ್ಗೆ ಸಂಘದ ಸದಸ್ಯರಿಗೆ ಮಾಹಿತಿ ನೀಡಿ ಕಾನೂನುಗಳನ್ನು ಪಾಲಿಸಿ ಆಹಾರ ತಯಾರಿಕೆಯಲ್ಲಿ ಸ್ವಚ್ಛತೆಯ ಬಗ್ಗೆ ಸಂಪೂರ್ಣ […]
ಫೆ. 27 ರಂದು ನೀಲಾವರ ಶ್ರೀ ಮಹಿಷಮರ್ದಿನೀ ದೇವಿಗೆ ನೂತನ ಬ್ರಹ್ಮರಥ ಸಮರ್ಪಣೆ
ನೀಲಾವರ: ಮಹತೋಭಾರ ಶ್ರೀ ಮಹಿಷಮರ್ದಿನೀ ದೇವಸ್ಥಾನ ಶ್ರೀ ಕ್ಷೇತ್ರ ನೀಲಾವರದ ಮಹಿಷಮರ್ದಿನೀ ದೇವಿಗೆ ನೀಲಾವರ ಮಕ್ಕಿತೋಟ ಮನೆಯ ಶ್ರೀಮತಿ ಗೌರಿ ವಿಠಲ ಶೆಟ್ಟಿ ಮತ್ತು ಮಕ್ಕಳು, ಮನೆಯವರು ಹಾಗೂ ಕುಟುಂಬಸ್ಥರು ಸೇವಾ ರೂಪವಾಗಿ ನೂತನ ಬ್ರಹ್ಮರಥವನ್ನು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಮರ್ಪಿಸುವ ಕಾರ್ಯಕ್ರಮ ಜರಗಲಿದೆ. ನೂತನ ಬ್ರಹ್ಮರಥದ ಪುರಪ್ರವೇಶ ಫೆ. 27 ರಂದು ಸಂಜೆ 4 ಗಂಟೆಗೆ ನೂತನ ಬ್ರಹ್ಮರಥದ ಲೋಕಾರ್ಪಣೆ ನಡೆಯಲಿದೆ. ಮಾರ್ಚ್ 13 ವಿಶೇಷ ರಥೋತ್ಸವ. ಫೆ. 27 ರಂದು ನೂತನ ಬ್ರಹ್ಮರಥದ ಪುರ […]
ಕಾರ್ಕಳ: ಭಜನಾ ಒಕ್ಕೂಟದ ಅಧ್ಯಕ್ಷರಿಗೆ ಸನ್ಮಾನ
ಕಾರ್ಕಳ: ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕೃತ ಸಂಸ್ಥೆಯಾದ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಮತ್ತು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ನೇತೃತ್ವದಲ್ಲಿ ಅಬ್ಬನಡ್ಕದಲ್ಲಿ ಜರಗಿದ 17ನೇ ವರ್ಷದ ಅಬ್ಬನಡ್ಕ ಸಾರ್ವಜನಿಕ ಶ್ರೀ ಮಹಾಶಿವರಾತ್ರಿ ಸಂಭ್ರಮ ಹಾಗೂ ದ್ವಿತೀಯ ವರ್ಷದ ಭಜನೋತ್ಸವ ಕಾರ್ಯಕ್ರಮದಲ್ಲಿ ಕಾರ್ಕಳ ತಾಲೂಕು ಭಜನಾ ಒಕ್ಕೂಟದ ಅಧ್ಯಕ್ಷ ಶ್ರೀಕಾಂತ್ ಪ್ರಭು ಪಳ್ಳಿ ಹಾಗೂ ಕಾರ್ಕಳ ತಾಲೂಕು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಅಧ್ಯಕ್ಷ ಶ್ರೀನಿವಾಸ ಪೂಜಾರಿ ಯರ್ಲಪಾಡಿ ಇವರನ್ನು ಸನ್ಮಾನಿಸಲಾಯಿತು.