ಮಾ.13 ರಿಂದ 15ರ ವರೆಗೆ ಜಿಲ್ಲೆಯಲ್ಲಿ ಬಿಜೆಪಿ ‘ವಿಜಯ ಸಂಕಲ್ಪ ಯಾತ್ರೆ’
ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾರವರಿಂದ ಚಾಲನೆಗೊಂಡು ರಾಜ್ಯದಾದ್ಯಂತ ನಡೆಯಲಿರುವ ‘ವಿಜಯ ಸಂಕಲ್ಪ ಯಾತ್ರೆ’ ಮಾ.13 ರಿಂದ 15ರ ವರೆಗೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಇವರ ನೇತೃತ್ವದಲ್ಲಿ ಉಡುಪಿ ಜಿಲ್ಲೆಯಾದ್ಯಂತ ನೆರವೇರಲಿದೆ ಎಂದು ಬಿಜೆಪಿ ಜಿಲ್ಲಾ ಆರ್ಥಿಕ ಪ್ರಕೋಷ್ಠದ ಸಂಚಾಲಕ ದಿವಾಕರ ಶೆಟ್ಟಿ ಕೆ. ಹೇಳಿದರು. ಅವರು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಕಛೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಮಾರ್ಚ್ 13, ಮಧ್ಯಾಹ್ನ 3.30ಕ್ಕೆ […]
ಪೌರಕಾರ್ಮಿಕರೊಂದಿಗೆ ಶಾಸಕ ರಘುಪತಿ ಭಟ್ ಜನ್ಮ ದಿನ ಆಚರಣೆ
ಉಡುಪಿ: ಶುಕ್ರವಾರದಂದು ಶ್ರೀ ಉಮಾಮಹೇಶ್ವರಿ ದೇವಸ್ಥಾನದಲ್ಲಿ ನಗರಸಭೆಯ ಸ್ವಚ್ಛತೆಯ ನೈಜ ರಾಯಭಾರಿಗಳಾದ ಪೌರ ಕಾರ್ಮಿಕರೊಂದಿಗೆ ಶಾಸಕ ಕೆ. ರಘುಪತಿ ಭಟ್ ತಮ್ಮ ಜನ್ಮದಿನಾಚರಣೆ ಆಚರಿಸಿ ಅವರೊಂದಿಗೆ ಭೋಜನ ಸವಿದರು. ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ಜಿಲ್ಲಾ ಬಿಜೆಪಿ ವಕ್ತಾರ ರಾಘವೇಂದ್ರ ಕಿಣಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಶ್ರೀಶ ನಾಯಕ್, ಸ್ಥಳೀಯ ನಗರಸಭಾ ಸದಸ್ಯರಾದ ವಿಜಯಲಕ್ಷ್ಮಿ ಮತ್ತು ನಗರ ಸಭೆಯ ಸದಸ್ಯರು, ನಗರ ಸಭೆಯ […]
ಹಿರಿಯ ಸಾಹಿತಿ ವೈದೇಹಿ ಅವರಿಗೆ ಕಸಾಪದಿಂದ ಗೌರವ
ಉಡುಪಿ: ನಾಡಿನ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ನೃಪತುಂಗ ಪ್ರಶಸ್ತಿಗೆ ಆಯ್ಕೆಯಾದ ಹಿರಿಯ ಸಾಹಿತಿ ವೈದೇಹಿ ಹಾಗೂ ಶ್ರೀನಿವಾಸ್ ಮೂರ್ತಿಯವರನ್ನು ಅವರ ಸ್ವಗೃಹದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಮತ್ತು ಉಡುಪಿ ತಾಲೂಕು ಘಟಕದಿಂದ ಗೌರವಿಸಲಾಯಿತು. ಕಸಾಪ ಉಡುಪಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ,ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಕೋಶಾಧಿಕಾರಿ ವಿ. ಮನೋಹರ್ , ಕವಯಿತ್ರಿ ಸ್ಪೂರ್ತಿ ಗಿರೀಶ್, ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್. ಪಿ ,ಸದಸ್ಯರಾದ ಭುವನಪ್ರಸಾದ ಹೆಗ್ಡೆ, ನಾರಾಯಣ ಮಾಡಿ, ನರಸಿಂಹಮೂರ್ತಿ […]
ಭಟ್ಕಳ: ಆಸ್ತಿ ವಿಚಾರಕ್ಕೆ ಸಂಬಂಧಿಸಿ ನಾಲ್ವರ ಕೊಲೆ
ಭಟ್ಕಳ: ತಾಲ್ಲೂಕಿನ ಹಾಡುವಳ್ಳಿಯ ಓಣಿಬಾಗಿಲು ಗ್ರಾಮದಲ್ಲಿ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಶುಕ್ರವಾರ ನಾಲ್ವರನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಹಾಡುವಳ್ಳಿ ಒಣಿಬಾಗಿಲು ನಿವಾಸಿ ಶಂಭು ಭಟ್ (70), ಅವರ ಪತ್ನಿ ಮಾದೇವಿ ಭಟ್(60), ಅವರ ಮಗ ರಾಘು (ರಾಜು ಭಟ್) (40) ಹಾಗೂ ಸೊಸೆ ಕುಸುಮಾ ಭಟ್(35) ಕೊಲೆಯಾದವರು. ಕಳೆದ ಏಳು ತಿಂಗಳ ಹಿಂದೆ ಶಂಭು ಭಟ್ ಅವರ ಹಿರಿಯ ಮಗ ಶ್ರೀಧರ ಭಟ್ ಕ್ಯಾನ್ಸರ್ ಕಾಯಿಲೆಯಿಂದ ಮೃತಪಟ್ಟಿದ್ದರು. ಶ್ರೀಧರ ಭಟ್ ಮರಣದ ನಂತರ ಅವರ ಪತ್ನಿ […]
ಕಳ್ಳತನವಾದ ಅಥವಾ ಕಳೆದುಹೋದ ಮೊಬೈಲ್ ಅನ್ನು ಸುಲಭವಾಗಿ ಬ್ಲಾಕ್ ಮಾಡುವ ವಿಧಾನ ತಿಳಿಯಿರಿ
ಅಕಸ್ಮಾತ್ ಆಗಿ ಮೊಬೈಲ್ ಕಳೆದು ಹೋದಲ್ಲಿ ಅಥವಾ ಕಳ್ಳತನವಾದಲ್ಲಿ ಇತರರು ಅದನ್ನು ಬಳಸದಂತೆ ಸುಲಭವಾಗಿ ಅದನ್ನು ಬ್ಲಾಕ್ ಮಾಡಬಹುದು. ಬ್ಲಾಕ್ ಮಾಡುವ ವಿಧಾನ: 1.KSP ಮೊಬೈಲ್ ಅಪ್ಲಿಕೇಶನ್‌ಗೆ ಹೋಗಿ ಮತ್ತು ಇ-ಲಾಸ್ಟ್ ದೂರನ್ನು ನೋಂದಾಯಿಸಿ ಮತ್ತು ಇ-ಅಕ್ನಾಲೆಡ್ಜ್‌ಮೆಂಟ್ ಪಡೆಯಿರಿ. 2. ಒಟಿಪಿ ಪಡೆಯಲು ಸಂಬಂಧಿತ ಸೇವಾ ಪೂರೈಕೆದಾರರಿಂದ ನಕಲಿ ಸಿಮ್ ತೆಗೆದುಕೊಳ್ಳಿ ಮತ್ತು ಸಿಮ್ ಅನ್ನು ಸಕ್ರಿಯಗೊಳಿಸಿ. 3.CEIR na https://ceir.gov.in ವೆಬ್‌ಸೈಟ್‌ಗೆ ಲಾಗಿನ್ ಆಗಿ. 4. ಸ್ಟೋಲನ್/ಲಾಸ್ಟ್ ಮೊಬೈಲ್ ಮೇಲೆ ಕ್ಲಿಕ್ ಮಾಡಿ. 5.ಮೊಬೈಲ್ ಸಂಖ್ಯೆ, […]