ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮೂರನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮ

ಶಿವಪಾಡಿ: ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 24 ಶುಕ್ರವಾರದಂದು ನಡೆದ ಅತಿರುದ್ರ ಮಹಾಯಾಗದ ಮೂರನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಅರ್ಬಿಯ ಶ್ರೀ ವೈಷ್ಣವಿದುರ್ಗಾ ದೇವಸ್ಥಾನದ ಆಡಳಿತ ಮೊಕ್ತೇಸರ ಬಿ. ಜಯರಾಜ್ ಹೆಗ್ಡೆ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್ ಮಾತನಾಡಿ ಪ್ರಕೃತಿಯನ್ನು ಪೂಜಿಸಿ ಬದುಕಿದಲ್ಲಿ ಜೀವನ ಸಾರ್ಥಕವಾಗುವುದು. ಪ್ರಕೃತಿಯನ್ನು ಉಳಿಸುವುದು ನಮ್ಮ ಕರ್ತವ್ಯ ಎಂದರು. ಅತಿರುದ್ರ ಮಹಾಯಾಗ ಸಮಿತಿಯ ಅಧ್ಯಕ್ಷ ಮಣಿಪಾಲದ ಆರ್. ರಾಜಪುರ ಸಾರಸ್ವತ […]

ಔರಂಗಾಬಾದ್ ಮತ್ತು ಉಸ್ಮಾನಾಬಾದ್ ಇನ್ನು ಮುಂದೆ ಛತ್ರಪತಿ ಸಂಭಾಜಿ ನಗರ ಮತ್ತು ಧಾರಾಶಿವ್ ನಗರ

ಮುಂಬೈ:ಮಹಾರಾಷ್ಟ್ರದ ಔರಂಗಾಬಾದ್ ಮತ್ತು ಉಸ್ಮಾನಾಬಾದ್ ನಗರಗಳನ್ನು ಕ್ರಮವಾಗಿ ಛತ್ರಪತಿ ಸಂಭಾಜಿ ನಗರ ಮತ್ತು ಧಾರಾಶಿವ್ ಎಂದು ಮರುನಾಮಕರಣ ಮಾಡಲಾಗಿದೆ ಎಂದು ಗೃಹ ಸಚಿವಾಲಯ ಶುಕ್ರವಾರ ತಿಳಿಸಿದೆ. ನಗರಗಳ ಮರುನಾಮಕರಣಕ್ಕೆ ಯಾವುದೇ ಆಕ್ಷೇಪಣೆಯಿಲ್ಲದ ಕಾರಣ ಪ್ರಸ್ತಾವನೆಯನ್ನು ಅನುಮೋದಿಸಿದೆ ಎಂದು ಸಚಿವಾಲಯ ಹೇಳಿದೆ. ಫೆಬ್ರವರಿಯಲ್ಲಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಅನಿಲ್ ಸಿಂಗ್ ಅವರು ಒಸ್ಮಾನಾಬಾದ್ ಅನ್ನು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರಕ್ಕೆ ಯಾವುದೇ ಅಭ್ಯಂತರವಿಲ್ಲ ಎಂದು ಬಾಂಬೆ ಹೈಕೋರ್ಟ್‌ಗೆ ತಿಳಿಸಿದ್ದರು. ಆದಾಗ್ಯೂ, ಔರಂಗಾಬಾದ್ ಅನ್ನು ಮರುನಾಮಕರಣ ಮಾಡುವ ಬಗ್ಗೆ ಇನ್ನೂ […]

ಕೊಡವೂರು ವಾರ್ಡ್ ಅಭಿವೃದ್ದಿ ಸಮಿತಿ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜ್ ಜಯಂತಿ ಆಚರಣೆ

ಕೊಡವೂರು: ಕೊಡವೂರು ವಾರ್ಡ್ ಅಭಿವೃದ್ದಿ ಸಮಿತಿ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ 393 ನೇ ಜಯಂತಿ ಆಚರಣೆ ಹಾಗೂ ಕಾರ್ಯಕರ್ತರ ಅಭಿನಂದನಾ ಸಭೆಯು ಫೆ.26 ರಂದು 9.30 ಕ್ಕೆ ಕೊಡವೂರು ವಿಪ್ರಶ್ರೀ ಸಭಾಭವನದಲ್ಲಿ ಜರಗಲಿದೆ ಎಂದು ನಗರಸಭಾ ಸದಸ್ಯ ವಿಜಯ್ ಕೊಡವೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫೆಬ್ರವರಿ 27 ರಂದು ನಿಗಮ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣೆ

ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಮತ್ತು ವಿವಿಧ ಅಭಿವೃದ್ಧಿ ನಿಗಮಗಳು ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ನಿಗಮಗಳ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣೆ ಹಾಗೂ ಪೌರಕಾರ್ಮಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮವು ಫೆಬ್ರವರಿ 27 ರಂದು ಬೆಳಗ್ಗೆ 10 ಗಂಟೆಗೆ ನಗರದ ಕಿದಿಯೂರು ಹೋಟೆಲ್‌ನ ಮಾಧವಕೃಷ್ಣ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ರಾಜ್ಯದ […]