ಈಶಾನ್ಯ ರಾಜ್ಯಗಳ ಫಲಿತಾಂಶ ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ: ಕುಯಿಲಾಡಿ ಸುರೇಶ್ ನಾಯಕ್

ಈಶಾನ್ಯ ರಾಜ್ಯಗಳ ಚುನಾವಣೆಯ ಪಲಿತಾಂಶ ಬಿಜೆಪಿಗೆ ಹೊಸ ಚೈತನ್ಯ ತುಂಬಿದೆ. ತ್ರಿಪುರ ಮತ್ತು ನಾಗಾಲ್ಯಾಂಡ್ ನಲ್ಲಿ ಬಿಜೆಪಿ ಮಗದೊಮ್ಮೆ ಸರಕಾರ ರಚಿಸಲಿದೆ. ಮೇಘಾಲಯದಲ್ಲೂ ಪಕ್ಷದ ಶಕ್ತಿ ಹೆಚ್ಚಿದೆ. ಈ ಚುನಾವಣಾ ಫಲಿತಾಂಶ ಕರ್ನಾಟಕದ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಈಶಾನ್ಯ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿಗಳಿಸಿದ ಪ್ರಯುಕ್ತ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ನಡೆದ ಸಂಭ್ರಮಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಳೆದ ಹಲವಾರು ವರ್ಷಗಳಿಂದ […]

ವಾಣಿಜ್ಯ ಬ್ಯಾಂಕ್ ಗಳಿಗಿಂತ ಸಹಕಾರಿ ಸಂಘಗಳು ಉತ್ತಮ ಸೇವೆ: ಡಾ.ಎಂ.ಎನ್. ರಾಜೇಂದ್ರ ಕುಮಾರ್ ಹೇಳಿಕೆ

ವಾಣಿಜ್ಯ ಬ್ಯಾಂಕ್ ಗಳಿಗಿಂತ ಸಹಕಾರಿ ಸಂಘಗಳು ಉತ್ತಮ ಸೇವೆ ನೀಡುತ್ತಿವೆ. ಆದ್ದರಿಂದ ಜನರು ಸಹಕಾರಿ ಸಂಘಗಳ ಮೇಲೆ ವಿಶ್ವಾಸ ಇಡಲು ಸಾಧ್ಯವಾಗಿದೆ. ವಾಣಿಜ್ಯ ಬ್ಯಾಂಕ್ ಗಳು ವಿಕಸನಗೊಳ್ಳದೇ ಸಂಕುಚಿತವಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಅಧ್ಯಕ್ಷ ಹಾಗೂ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಉಡುಪಿ ಹಾಗೂ ಸಹಕಾರ ಇಲಾಖೆ ಉಡುಪಿ ಜಿಲ್ಲೆ ಇದರ […]

Sushmitha Sen | ಖ್ಯಾತ ನಟಿ ಮಾಜಿ ವಿಶ್ವಸುಂದರಿ ಸುಶ್ಮಿತಾ ಸೇನ್ ಹೃದಯಾಘಾತ

  ಹೊಸದಿಲ್ಲಿ: ನಟಿ ಹಾಗೂ ಮಾಜಿ ವಿಶ್ವಸುಂದರಿ ಸುಶ್ಮಿತಾ ಸೇನ್ (Sushmitha Sen) ತಮ್ಮ ಸಾಮಾಜಿಕ ತಾಣ ಖಾತೆಯಲ್ಲಿ ತಮ್ಮ ಆರೋಗ್ಯದ ಕುರಿತು ಆಘಾತಕಾರಿ ಸುದ್ದಿಯೊಂದನ್ನು ಹಂಚಿಕೊಂಡಿದ್ದಾರೆ. ಕೆಲ ದಿನಗಳ ಹಿಂದೆ ಅವರು ಹೃದಯಾಘಾತಕ್ಕೆ ಒಳಗಾಗಿದ್ದರು ಎನ್ನುವುದನ್ನು ಅವರು ಬಹಿರಂಗಪಡಿಸಿದ್ದಾರೆ.

ಉಡುಪಿ: ಮಹಿಳೆ ನಾಪತ್ತೆ

ಉಡುಪಿ: ಉಡುಪಿ ತಾಲೂಕು ಬಡಗುಬೆಟ್ಟು ಗ್ರಾಮದ ದುಗ್ಲಿಪದವು ನಿವಾಸಿ ಕರಿಷ್ಮಾ (22) ಎಂಬ ಮಹಿಳೆಯು ಫೆಬ್ರವರಿ 28 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 3 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ, ಹಿಂದಿ, ಕೊಂಕಣಿ ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ

ಡಾ.ಪಿ.ಪಿ.ದೇವನ್ ಅವರಿಗೆ ‘ಗೋಲ್ಡನ್ ಏಮ್’ ಪ್ರಶಸ್ತಿ

ಮಂಗಳೂರು: ಮಂಗಳೂರಿನ ಎಜೆ ವೈದ್ಯಕೀಯ ಕಾಲೇಜಿನ ಇಎನ್‌ಟಿ ವಿಭಾಗದ ಪ್ರಾಧ್ಯಾಪಕ ಡಾ.ಪಿ.ಪಿ.ದೇವನ್ ಅವರಿಗೆ ಪ್ರತಿಷ್ಠಿತ ‘ಗೋಲ್ಡನ್ ಏಮ್’ ಪ್ರಶಸ್ತಿ ಲಭಿಸಿದೆ. 11 ನೇ ಆವೃತ್ತಿಯ ಗೋಲ್ಡನ್ ಏಮ್ ಸಮ್ಮೇಳನವನ್ನು ಬೆಂಗಳೂರಿನ ಡೈನರ್ಜಿಕ್ ಬಿಸಿನೆಸ್ ಸೊಲ್ಯೂಷನ್ಸ್ ಆಯೋಜಿಸಿತ್ತು. ಸುಮಾರು ಒಂದು ದಶಕದ ಕಾಲ ಇಎನ್‌ಟಿ ವಿಭಾಗದ ಮುಖ್ಯಸ್ಥರಾಗಿದ್ದ ಡಾ. ಪಿ.ಪಿ. ದೇವನ್ ಅವರಿಗೆ ‘ಮೋಸ್ಟ್ ಟ್ರಸ್ಟೆಡ್ ಹೆಲ್ತ್‌ಕೇರ್ ಲೀಡರ್‌ಶಿಪ್ -ಇಎನ್‌ಟಿ ಸ್ಪೆಷಲಿಸ್ಟ್ ಆಫ್ ಎಮಿನೆನ್ಸ್’ ಪ್ರಶಸ್ತಿ ನೀಡಿ ಗೌರವಿಸಲಾಯಿತು.