ಮಾ.9 ರಂದು ಮಿನಿ ಉದ್ಯೋಗ ಮೇಳ
ಉಡುಪಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಮಾರ್ಚ್ 9 ರಂದು ಬೆಳಗ್ಗೆ 10.30 ಕ್ಕೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್‌ಕಾರ್ಡ್ ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, […]
ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆ: ನಿಷೇಧಾಜ್ಞೆ
ಉಡುಪಿ: ಪ್ರಸಕ್ತ ಸಾಲಿನ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 9 ರಿಂದ 29 ರ ವರೆಗೆ ಜಿಲ್ಲೆಯ ಒಟ್ಟು 28 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಹಾಗೂ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗದಪಡಿಸಿದ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಸೆಕ್ಷನ್ 144 (1) ರಂತೆ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ.
ಮುಕ್ತ, ಪಾರದರ್ಶಕ ಚುನಾವಣೆ ನಡೆಸಲು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ
ಉಡುಪಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ, ಜಿಲ್ಲೆಯಲ್ಲಿ ಮುಕ್ತ, ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ನಡೆಸಲು ಅನುಕೂಲವಾಗುವಂತೆ ಈಗಾಗಲೇ ರಚಿಸಲಾಗಿರುವ ವಿವಿಧ ತಂಡಗಳಲ್ಲಿನ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ಜವಾಬ್ದಾರಿಯನ್ನು ಅರಿತು, ಸಮನ್ವಯದಿಂದ ಕರ್ತವ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚಿಸಿದರು. ಅವರು ಕುಂದಾಪುರದ ಭಂಡಾರ್ಕರ್ ಕಾಲೇಜಿನಲ್ಲಿ, ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿರುವ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿಧಾನಸಭಾ ಸಾರ್ವತ್ರಿಕ ಚುನಾವಣೆ- 2023 ರ ಸಂಬಂಧಿಸಿದಂತೆ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಚುನಾವಣಾ […]