ಮೂರನೇ ಮಾಸಿಕ “ಉನ್ನತಿ ಉದ್ಯೋಗ ಮೇಳ”ದಲ್ಲಿ ನೂರಾರು ಉದ್ಯೋಗ ಅವಕಾಶ ಸೃಷ್ಟಿ
ಉಡುಪಿ: ಕೌಶಲ್ಯ ಶಿಕ್ಷಣಕ್ಕೆ ಸುಪ್ರಸಿದ್ಧ ಹಾಗೂ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಪಾಲುದಾರ ಸಂಸ್ಥೆಯಾಗಿರುವ ಉಡುಪಿಯ ಉನ್ನತಿ ಕೆರಿಯರ್ ಅಕಾಡೆಮಿಯು “ರಾಷ್ಟ್ರೀಯ ಯುವ ದಿವಸ”ದ ಅಂಗವಾಗಿ ಜನವರಿ 2023ರಿಂದ ಜನವರಿ 2024ರ ವರೆಗೆ ಪ್ರತಿ ತಿಂಗಳು ಉಚಿತ ಮಾಸಿಕ “ಉನ್ನತಿ ಉದ್ಯೋಗ ಮೇಳ”ಗಳನ್ನು ಪ್ರಾರಂಭಿಸಿದ್ದು, ಇಂದು ತನ್ನ ಕ್ಯಾಂಪಸ್ ನಲ್ಲಿ ಮೂರನೇ ಮೇಳವನ್ನು ಆಯೋಜಿಸಲಾಗಿತ್ತು. ಈ ಮೇಳದಲ್ಲಿ ಜಿಲ್ಲೆಯ ಹಾಗೂ ರಾಜ್ಯದ ನೂರಾರು ಉದ್ಯೋಗಾಕಾಂಕ್ಷಿಗಳು ನೇರ ಹಾಗೂ ಆನ್ ಲೈನ್ ಸಂದರ್ಶನ ಮೂಲಕ ವಿವಿಧ ಕ್ಷೇತ್ರಗಳ ಕಂಪೆನಿಗಳಲ್ಲಿ ಉದ್ಯೋಗ […]
ಚುನಾವಣಾ ಜಾಗೃತಿ ಕುರಿತು ತಾಲೂಕು ಮಟ್ಟದ ಭಿತ್ತಿ ಚಿತ್ರಕಲಾ ಸ್ಪರ್ಧೆ
ಉಡುಪಿ: ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲಾ ಚುನಾವಣಾ ಜಾಗೃತಿ (ಸ್ವೀಪ್) ಕಾರ್ಯಕ್ರಮದಡಿ ತಾಲೂಕು ಮಟ್ಟದ ಸಾರ್ವಜನಿಕ ಭಿತ್ತಿ ಚಿತ್ರಕಲಾ ಸ್ಪರ್ಧೆಯು ಮಾರ್ಚ್ 24 ರಂದು ಪ್ರತಿ ತಾಲೂಕು ಕೇಂದ್ರಗಳ ನಿರ್ದಿಷ್ಟ ಮತದಾನ ಕೇಂದ್ರಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ಸ್ಪರ್ಧೆ ನಡೆಯಲಿದೆ. ಸಾರ್ವಜನಿಕರಿಗೆ ಮಾರ್ಚ್ 10 ರಿಂದ ಸ್ಪರ್ಧೆಗೆ ನೋಂದಾಯಿಸಿಕೊಳ್ಳಲು ಗೂಗಲ್ ಫಾರ್ಮ್ ಮೂಲಕ ಅವಕಾಶ ಕಲ್ಪಿಸಲಾಗಿದೆ. ನಿಯಮಗಳು: ಚಿತ್ರಗಳನ್ನು ಮತದಾನ ಕೇಂದ್ರದ ಗೋಡೆಗಳಲ್ಲಿ ರಚಿಸಬೇಕು. ಸ್ಪರ್ಧೆಯಲ್ಲಿ ಚಿತ್ರ ರಚಿಸಲು ಅವಶ್ಯವಿರುವ ಬಣ್ಣಗಳನ್ನು […]
ಮಾ.10: ಕೇಂದ್ರ, ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನ
ಉಡುಪಿ: ಜಿಲ್ಲಾಡಳಿತ ಉಡುಪಿ ಜಿಲ್ಲೆ ಇವರ ವತಿಯಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನವು ಮಾರ್ಚ್ 10 ರಂದು ಬೆಳಗ್ಗೆ 11 ಗಂಟೆಗೆ ರಾಷ್ಟ್ರೀಯ ಹೆದ್ದಾರಿ 66 ಬಳಿಯ ಕಟಪಾಡಿ ಮೈದಾನದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಉದ್ಘಾಟಿಸಲಿದ್ದು, ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ […]
ಮೇ ಮೊದಲ ವಾರ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಸಚಿವ ನಾಗೇಶ್
ತಿಪಟೂರು: ದ್ವಿತೀಯ ಪಿಯುಸಿ ಪರೀಕ್ಷೆ ಇಂದಿನಿಂದ ಆರಂಭವಾಗಿದ್ದು ಸುಸೂತ್ರವಾಗಿ ನಡೆಯುತ್ತಿದೆ ಎಂದು ಶಾಲಾ ಶಿಕ್ಷಣ ತ್ತು ಸಾಕ್ಷರತಾ ಇಲಾಖೆ ಸಚಿವ ನಾಗೇಶ್ ಅವರು ತಿಳಿಸಿದ್ದಾರೆ. ರಾಜ್ಯದ 1109 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಈ ಸಂಬಂಧ ಅಗತ್ಯ ಇರುವ ಎಲ್ಲ ಸಿದ್ದತೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.ಮೇ ಮೊದಲ ವಾರದಲ್ಲಿ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಸಚಿವ ನಾಗೇಶ್ ತಿಳಿಸಿದ್ದಾರೆ. ತಿಪಟೂರಿನ ಸರ್ಕಾರಿ ಶಾಲೆಗೆ ಭೇಟಿ ನೀಡಿದ ಬಳಿಕ ನಾಗೇಶ್ ಅವರು ಈ ಮಾಹಿತಿ […]
ವೀಣಾ ವಿನೋದಿನಿ ವಿದುಷಿ ಪವನ.ಬಿ.ಆಚಾರ್ ಅವರ ಕಲಾವಿಭಾಗದ ಸಾಧನೆಗಾಗಿ ಕಿತ್ತೂರು ರಾಣಿ ಚೆನ್ನಮ್ಮಾ ಪ್ರಶಸ್ತಿ
ಮಣಿಪಾಲದ ಬಹುಮುಖ ಪ್ರತಿಭೆ,27ವರ್ಷಗಳಿಂದ ಕಲಾಸ್ಪಂದನ ಮತ್ತು ವಿಪಂಚಿ ಬಳಗದ ನಿರ್ದೇಶಕರಾದ ವೀಣಾ ವಿನೋದಿನಿ ವಿದುಷಿ ಪವನ.ಬಿ.ಆಚಾರ್ ಅವರು ವೀಣಾವಾದನದ ವಿಶಿಷ್ಟ ಪ್ರಯೋಗಗಳಿಂದ ಸಮಾಜದ ಸ್ವಾಸ್ಥ್ಯವನ್ನು ಹೆಚ್ಚಿಸುವಲ್ಲಿ ಮಾಡಿದ ಸಾಧನೆಗಾಗಿ ಕರ್ನಾಟಕ ಸರಕಾರವು ಕೊಡಮಾಡುವ ಪ್ರತಿಷ್ಠಿತ ಕಿತ್ತೂರು ರಾಣಿ ಚೆನ್ನಮ್ಮಾ ಕಲಾವಿಭಾಗದ ಪ್ರಶಸ್ತಿಯನ್ನು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಎಸ್ ಆರ್ ಬಸವರಾಜ ಬೊಮ್ಮಾಯಿ ಅವರಿಂದ ಅಂತರ್ರಾಷ್ಟ್ರೀಯ ಮಹಿಳಾ ದಿನಾಚರಣೆರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪಡೆದುಕೊಂಡರು.