ಮಾ.13ಕ್ಕೆ ಇತಿಹಾಸ ಪ್ರಸಿದ್ಧ ಸೂರಾಲು ಮಾಗಣಿಯ ನಂಚಾರು ಗ್ರಾಮಕ್ಕೆ ಚರಿತ್ರೆಯಲ್ಲಿ ಮೊದಲ ಬಾರಿಗೆ ಶೃಂಗೇರಿ ಶ್ರೀ ಜಗದ್ಗುರು ವಿಧುಶೇಖರ ಭಾರತಿ ಸ್ವಾಮೀಜಿಯವರ ಆಗಮನ
ಬ್ರಹ್ಮಾವರ: ಪ್ರಸಿದ್ಧ ಸೂರಾಲು ಮಾಗಣಿ ನಂಚಾರು ಗ್ರಾಮಕ್ಕೆ ಮೊಟ್ಟ ಮೊದಲ ಬಾರಿ ಶೃಂಗೇರಿ ಮಠ ಕಿರಿಯ ಯತಿ ಶ್ರೀ ಜಗದ್ಗುರು ವಿಧುಶೇಖರ ಭಾರತಿ ಸ್ವಾಮೀಜಿ ಮಾ.13 ರಂದು ಸಂಜೆ 4ಕ್ಕೆ ಆಗಮಿಸಲಿದ್ದು, ನಂಚಾರು ಶ್ರೀ ಕಾಮಧೇನು ಗೋಶಾಲಾ ಮಹಾ ಸಂಘ ಟ್ರಸ್ಟ್ ನಡೆಸಿಕೊಂಡು ಬರುತ್ತಿರುವ ಅನಾಥ ಗೋವುಗಳ ಆಶ್ರಯ ತಾಣ ಗಂಜಿ ಆಶ್ರಮಕ್ಕೆ ಭೇಟಿ ನೀಡಿ ಗೋಗ್ರಾಸ ಸಮರ್ಪಣೆ ಮಾಡಲಿದ್ದಾರೆ. ಸ್ವಾಮೀಜಿ ಭೇಟಿ ಹಿನ್ನೆಲೆಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ, ಪಾದಪೂಜೆ, ಆಶೀರ್ವಚನ, ಮಂತ್ರಾಕ್ಷತೆ ವಿತರಣೆ ನಡೆಯಲಿದೆ ಎಂದು […]
ಶ್ರೀ ಬ್ರಹ್ಮ ಬೈದೇರುಗಳ ಗರೋಡಿ ಕಲ್ಮಾಡಿ: ಸಾಧಕರಿಗೆ ಗೌರವಾರ್ಪಣೆ
ಶ್ರೀ ಬ್ರಹ್ಮ ಬೈದೇರುಗಳ ಗರೋಡಿ(ರಿ.) ಕಲ್ಮಾಡಿ ಇದರ 15ನೇ ವರ್ಷದ ಪ್ರತಿಷ್ಠಾ ವರ್ಧಂತ್ಯೋತ್ಸವ ಹಾಗೂ ನೇಮೋತ್ಸವದ ಅಂಗವಾಗಿ ಗರೋಡಿಯ ಪದಾಧಿಕಾರಿ ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮವು ಗರೋಡಿಯ ಆಡಳಿತ ಸಮಿತಿಯ ಅಧ್ಯಕ್ಷ ಅಚ್ಯುತ ಅಮೀನ್ ಕಲ್ಮಾಡಿ ಯವರ ಅಧ್ಯಕ್ಷತೆಯಲ್ಲಿ ಗರೋಡಿಯ ಪ್ರಾಂಗಣದಲ್ಲಿ ಜರಗಿತು. ಬಿಲ್ಲವರ ಸಮಾಜ ಸೇವಾ ಸಂಘ(ರಿ.) ಮಲ್ಪೆ ಇದರ ಶತಮಾನೋತ್ಸವ ವರ್ಷದ ಆಡಳಿತ ಸಮಿತಿಯ ಅಧ್ಯಕ್ಷ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗೋಪಾಲ್ ಸಿ. ಬಂಗೇರ, ಕೇಂದ್ರೀಯ ಕರಾವಳಿ ಕೃಷಿ ಸಂಶೋಧನಾ ಸಂಸ್ಥೆ ಗೋವಾ […]
ಮಲ್ಪೆ ಬಂದರಿನ ಬೇಸಿನ್, ನೇವಿಗೇಶನ್ ಚಾನೆಲ್ ನಿರ್ವಹಣಾ ಹೂಳೆತ್ತುವಿಕೆ ಕಾಮಗಾರಿ: ಶಾಸಕ ರಘುಪತಿ ಭಟ್ ಪರಿಶೀಲನೆ
ಮಲ್ಪೆ: ಇಲ್ಲಿನ ಮೀನುಗಾರಿಕೆ ಬಂದರಿನ ಬೇಸಿನ್ ಹಾಗೂ ನೇವಿಗೇಶನ್ ಚಾನೆಲ್ ನಿರ್ವಹಣಾ ಹೂಳೆತ್ತುವಿಕೆ ಕಾಮಗಾರಿ ನಡೆಯುತ್ತಿದ್ದು, ಇಂದು ಶಾಸಕ ಕೆ. ರಘುಪತಿ ಭಟ್ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಸುವರ್ಣ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮಲ್ಪೆಯಲ್ಲಿ ವಿಜಯ ಸಂಕಲ್ಪ ಯಾತ್ರೆಯ ಪೂರ್ವ ತಯಾರಿ ಸಭೆ
ಮಾರ್ಚ್ 14 ರಂದು ಉಡುಪಿಯಲ್ಲಿ ವಿಜಯ ಸಂಕಲ್ಪ ಯಾತ್ರೆ ನಡೆಯಲಿದ್ದು, ಇದರ ಪೂರ್ವ ತಯಾರಿ ಸಭೆ ಮಲ್ಪೆಯಲ್ಲಿ ಇಂದು ನಡೆಯಿತು. ಸಭೆಯಲ್ಲಿ ಶಾಸಕ ಕೆ. ರಘುಪತಿ ಭಟ್ ಅವರು ಮಲ್ಪೆ ವ್ಯಾಪ್ತಿಯ ಕಾರ್ಯಕರ್ತರೊಂದಿಗೆ ಚರ್ಚಿಸಿದರು. ಮಾ.14ರಂದು ಉಡುಪಿಯ ಪರ್ಕಳದಿಂದ ಬ್ರಹ್ಮಾವರದ ವರೆಗೆ ನಡೆಯರುವ ವಿಜಯ ಸಂಕಲ್ಪ ಯಾತ್ರೆಯ ಪ್ರಯುಕ್ತ ಬೃಹತ್ ವಾಹನ ರ್ಯಾಲಿ ನಡೆಯಲಿದ್ದು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮನ್ನು ಯಶಸ್ವಿಗೊಳಿಸಬೇಕಾಗಿ ತಿಳಿಸಿದರು. ಈ ಸಂದರ್ಭದಲ್ಲಿ ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ಪ್ರಧಾನ ಕಾರ್ಯದರ್ಶಿ […]
ತ್ರಾಸಿ ಜಂಕ್ಷನ್ ಬಳಿ ಅಗ್ನಿ ಅನಾಹುತ: ತಪ್ಪಿದ ಭಾರೀ ಅನಾಹುತ
ಕುಂದಾಪುರ ತಾಲೂಕಿನ ಮರಬಂತೆ ಸಮೀಪದ ತ್ರಾಸಿ ಜಂಕ್ಷನ್ ಬಳಿ ಇಂದು ಅಗ್ನಿ ಅವಘಡ ಸಂಭವಿಸಿದೆ. ತ್ರಾಸಿ ಜಂಕ್ಷನ್ ಬಳಿಯ ಹುಲ್ಲುಗಾವಲಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು, ಬಳಿಕ ಇದು ಸುತ್ತಲಿನ ಪ್ರದೇಶಕ್ಕೆ ಹಬ್ಬಿದೆ. ಇದರಿಂದ ಸುತ್ತಮುತ್ತ ದಟ್ಟವಾದ ಹೊಗೆ ಆವರಿಸಿತ್ತು. ಸ್ಥಳಕ್ಕೆ ಆಗಮಿಸಿದ ಬೈಂದೂರು ಅಗ್ನಿಶಾಮಕ ದಳ, ಗಂಗೊಳ್ಳಿ ಠಾಣಾಧಿಕಾರಿ ಹಾಗೂ ಸಿಬ್ಬಂದಿ, ಮೆಸ್ಕಾಂ ಸಿಬ್ಬಂದಿ, ಗಂಗೊಳ್ಳಿ ಆಂಬ್ಯುಲೆನ್ಸ್ ಇಬ್ರಾಹಿಂ ಹಾಗೂ ಸಾರ್ವಜನಿಕರ ಸಹಕಾರದಿಂದ ಬೆಂಕಿ ಹತೋಟಿಗೆ ತರಲಾಯಿತು. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.