ಇಂದಿನಿಂದ 5 ದಿನ ಉಡುಪಿ, ದ.ಕ ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ಉಡುಪಿ, ದಕಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಹಲವಡೆ ಇಂದಿನಿಂದ ಮಾರ್ಚ್ 18 ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಇಂದಿನಿಂದ ರಾಜ್ಯದ ನಾನಾ ಕಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮಾರ್ಚ್ 16 ರಿಂದ 18 ರವರೆಗೆ ಉತ್ತರ ಕನ್ನಡ ಜಿಲ್ಲೆ, ಬಾಗಲಕೋಟೆ, ಬಳ್ಳಾರಿ, ಕಲಬುರಗಿ, ಬೀದರ್, ಧಾರವಾಡ, ಗದಗ, ವಿಜಯಪುರ, ಕೊಪ್ಪಳ ಜಿಲ್ಲೆಗಳ್ಲಿ ಮಳೆಯಾಗಲಿದೆ. ಮಾರ್ಚ್ […]
ತರಬೇತಿಯಿಂದ ಪರಿಪೂರ್ಣತೆ: ಎಸ್.ಟಿ ಸಿದ್ದಲಿಂಗಪ್ಪ
ಉಡುಪಿ: ತರಬೇತಿಯು ಅಧಿಕಾರಿ ಹಾಗೂ ಸಿಬ್ಬಂದಿಗಳಲ್ಲಿ ಜ್ಞಾನ, ಕೌಶಲ್ಯತೆ ಹಾಗೂ ಅತ್ಮವಿಶ್ವಾಸವನ್ನು ಹೆಚ್ಚಿಸಲಿದ್ದು, ಯಾವುದೇ ಉದ್ಯೋಗದಲ್ಲಿ ಪರಿಪೂರ್ಣತೆಯನ್ನು ಸಾಧಿಸುವಲ್ಲಿ ತರಬೇತಿಯು ಅತೀ ಅಗತ್ಯ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್.ಟಿ ಸಿದ್ಧಲಿಂಗಪ್ಪ ಹೇಳಿದರು. ಅವರು ಗುರುವಾರ, ಮಲ್ಪೆಯ ಸಿ.ಎಸ್.ಪಿ ಕೇಂದ್ರ ಕಚೇರಿಯಲ್ಲಿ, ಕರಾವಳಿ ಕಾವಲು ಪೊಲೀಸ್ ಘಟಕದ ಕರಾವಳಿ ಭದ್ರತಾ ತರಬೇತಿ ಸಂಸ್ಥೆಯ 2 ನೇ ತಂಡದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕರಾವಳಿ ಕಾವಲು ಪೊಲೀಸ್ ಘಟಕದ ವತಿಯಿಂದ ಹಮ್ಮಿಕೊಂಡಿರುವ ಈಜು ತರಬೇತಿ, ಪ್ರಥಮ […]
ಉಡುಪಿ ಸಂಜೀವಿನಿ ಒಕ್ಕೂಟಕ್ಕೆ ಅತ್ಯುತ್ತಮ ಘನ ತ್ಯಾಜ್ಯ ನಿರ್ವಹಣೆ ಪುರಸ್ಕಾರ
ಉಡುಪಿ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಮಾರ್ಚ್ 8 ರಂದು ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ- ಸಂಜೀವಿನಿ ಇವರ ವತಿಯಿಂದ ನಡೆದ ರಾಜ್ಯ ಮಟ್ಟದ ಕಾರ್ಯಕ್ರಮದ ವಿವಿಧ ಕ್ಷೇತ್ರಗಳ ಪ್ರಶಸ್ತಿ ಪುರಸ್ಕಾರ ಸಮಾರಂಭದಲ್ಲಿ ಉಡುಪಿ ಜಿಲ್ಲೆಯ 80 ಬಡಗಬೆಟ್ಟು, ನೇಸರ ಸಂಜೀವಿನಿ ಗ್ರಾಮ ಪಂಚಾಯತಿ ಒಕ್ಕೂಟಕ್ಕೆ ಉತ್ತಮವಾಗಿ ಘನ ತ್ಯಾಜ್ಯ ನಿರ್ವಹಣೆ ಮಾಡುತ್ತಿರುವ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟ ಎಂದು ಗುರುತಿಸಿ, ರಾಜ್ಯ ಸರಕಾರದ ಮಾನ್ಯ ಮುಖ್ಯ ಮಂತ್ರಿಗಳಾದ ಬಸವರಾಜ್ […]